ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 01-02-2021

at 00:00 hrs to 24:00 hrs

 

ಕಾರವಾರ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 11/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಮಂಗೇಶ ತಂದೆ ಮಹಾಬಲೇಶ್ವರ ದೇವಳಿ, ಪ್ರಾಯ-26 ವರ್ಷ, ವೃತ್ತಿ-ವ್ಯಾಪಾರ, ಸಾ|| ಮಹಾದೇವ ದೇವಸ್ಥಾನದ ಹತ್ತಿರ, ಕಡವಾಡ, ಕಾರವಾರ. ನಮೂದಿತ ಆರೋಪಿತನು ದಿನಾಂಕ: 01-02-2021 ರಂದು 20-30 ಗಂಟೆಯ ಸುಮಾರಿಗೆ ಕಾರವಾರ ತಾಲೂಕಿನ ಕಡವಾಡ ಮಹಾದೇವ ದೇವಸ್ಥಾನದ ಎದುರುಗಡೆಯ ಸಾರ್ವಜನಿಕ ರಸ್ತೆಯ ಸ್ಥಳದಲ್ಲಿ ನಿಂತುಕೊಂಡು 01/- ರೂಪಾಯಿಗೆ 80/- ರೂಪಾಯಿ ಹಣ ಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣವನ್ನು ಪಡೆದುಕೊಂಡು ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥ ಕಟ್ಟಿ ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿರುವಾಗ ನಗದು ಹಣ 1,220/- ರೂಪಾಯಿ ಹಾಗೂ ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಕುಮಾರಿ: ವಿಜಯಲಕ್ಷ್ಮೀ ಕಟಕದೊಂಡ, ಪಿ.ಎಸ್.ಐ (ಕ್ರೈಂ), ಕಾರವಾರ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 01-02-2021 ರಂದು 21-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಕಾರವಾರ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 26/2021, ಕಲಂ: 32, 34 ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ದೀಪಕ ತಂದೆ ರಾಧಾಕೃಷ್ಣ ಸಾಗೇಕರ, ಪ್ರಾಯ-50 ವರ್ಷ, ವೃತ್ತಿ-ಮೀನುಗಾರಿಕೆ, ಸಾ|| ಗಣಪತಿ ದೇವಸ್ಥಾನದ ಹತ್ತಿರ, ನಂದನಗದ್ದಾ, ಕಾರವಾರ. ನಮೂದಿತ ಆರೋಪಿತನು ದಿನಾಂಕ: 01-02-2021 ರಂದು 18-25 ಗಂಟೆಗೆ ಕಾರವಾರ ನಂದನಗದ್ದಾದ ಗಣಪತಿ ದೇವಸ್ಥಾನದ ಹತ್ತಿರ ಗೋವಾ ರಾಜ್ಯದಲ್ಲಿ ತಯಾರಾದ 1). KING FISHER PREMIUM BEER, 500 ML ಅಂತಾ ಲೇಬಲಿದ್ದ ಬಿಯರ್ ಟಿನ್ ಗಳು-12, 2). HONEY GRADE BRANDY, 180 ML ಅಂತಾ ಲೇಬಲಿದ್ದ ಸರಾಯಿ ಬಾಟಲಿಗಳು-25 ನೇದವುಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಒಂದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಗೋವಾ ರಾಜ್ಯದಿಂದ ಕರ್ನಾಟಕ ರಾಜ್ಯಕ್ಕೆ ಅನಧೀಕೃತವಾಗಿ ಯಾವುದೇ ಅಧೀಕೃತ ಪಾಸ್ ಯಾ ಪರ್ಮಿಟ್ ಇಲ್ಲದೇ ತಂದು ನಿಂತುಕೊಂಡಿದ್ದ ವೇಳೆ ಪಿರ್ಯಾದಿಯವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತನನ್ನು ಹಾಗೂ ಅಬಕಾರಿ ಸ್ವತ್ತುಗಳನ್ನು ವಶಪಡಿಸಿಕೊಂಡ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಸಂತೋಷ ಕುಮಾರ ಎಮ್, ಪಿ.ಎಸ್.ಐ, ಕಾರವಾರ ಶಹರ ಪೊಲೀಸ್ ಠಾಣೆ ರವರು ದಿನಾಂಕ: 01-02-2021 ರಂದು 20-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಕುಮಟಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 28/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಅರುಣ ತಂದೆ ರಾಮನಾಥ ನಾಯ್ಕ, ಪ್ರಾಯ-60 ವರ್ಷ, ವೃತ್ತಿ-ಚಿಕನ್ ಅಂಗಡಿ ಕೆಲಸ, ಸಾ|| ಎ.ಪಿ.ಎಮ್.ಸಿ ರಸ್ತೆ, ತಾ: ಕುಮಟಾ. ನಮೂದಿತ ಆರೋಪಿತನು ದಿನಾಂಕ: 01-02-2021 ರಂದು 10-35 ಗಂಟೆಗೆ  ವೇಳೆಯಲ್ಲಿ ಕುಮಟಾ ಪಟ್ಟಣದ ಹಳೇ ಮೀನು ಮಾರುಕಟ್ಟೆಯ ಪುರಭವನದ ಎದುರು ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು ಬರ-ಹೋಗುವ ಜನರಿಗೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಕೂಗಿ ಹೇಳಿ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥ ಕಟ್ಟಿ ಓ.ಸಿ ಚೀಟಿ ಬರೆದು ಓ.ಸಿ ಮಟಕಾ ಜುಗಾರಾಟ ನಡೆಸುತ್ತಿದ್ದಾಗ ದಾಳಿಯ ಕಾಲ 1). ನಗದು ಹಣ 1,230/- ರೂಪಾಯಿ, 2). ಅಂಕೆ-ಸಂಖ್ಯೆ ಬರೆದ ಚೀಟಿ-01, ಅ||ಕಿ|| 00.00/- ರೂಪಾಯಿ, 3). ಬಾಲ್ ಪೆನ-01, ಅ||ಕಿ|| 00.00/- ರೂಪಾಯಿಗಳ ಸಮೇತ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಪರಮೇಶ್ವರ ಗುನಗಾ, ಪೊಲೀಸ್ ವೃತ್ತ ನಿರೀಕ್ಷಕರು, ಕುಮಟಾ ವೃತ್ತ, ಕುಮಟಾ ರವರು ದಿನಾಂಕ: 01-02-2021 ರಂದು 19-40 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಮಂಕಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 14/2021, ಕಲಂ: 279, 337 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ನಾಗೇಶ ತಂದೆ ಮಂಜುನಾಥ ಹರಿಕಂತ್ರ, ಪ್ರಾಯ-38 ವರ್ಷ, ಸಾ|| ಹೊಸಹಿತ್ಲ, ಮಂಕಿ, ತಾ: ಹೊನ್ನಾವರ (ಸ್ಕೂಟಿ ನಂ: ಕೆ.ಎ-47ಡಬ್ಲ್ಯೂ-2190 ನೇದರ ಸವಾರ). ನಮೂದಿತ ಆರೋಪಿತನು ದಿನಾಂಕ: 30-01-2021 ರಂದು 17-30 ಗಂಟೆಯ ಸುಮಾರಿಗೆ ಹಕ್ಕಲಕೇರಿ ಹತ್ತಿರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-66 ರ ರಸ್ತೆಯ ತಿರುವಿನಲ್ಲಿ ತಾನು ಸವಾರಿ ಮಾಡುತ್ತಿದ್ದ ಸ್ಕೂಟಿ ನಂ: ಕೆ.ಎ-47ಡಬ್ಲ್ಯೂ-2190 ನೇದನ್ನು ಗುಣವಂತೆ ಕಡೆಯಿಂದ ಮಂಕಿಯ ಹೊಸಹಿತ್ಲ ಕಡೆಗೆ ಹೋಗಲು ಅತೀವೇಗವಾಗಿ ಮತ್ತು ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ಬಂದು ಸ್ಕೂಟಿಯ ವೇಗವನ್ನು ನಿಯಂತ್ರಿಸಲಾಗದೇ ಸ್ಕಿಡ್ ಆಗಿ ಸ್ಕೂಟಿಯ ಸಮೇತ ಬಿದ್ದು ತಲೆಗೆ, ಮುಖದ ಎಡಬದಿಯಲ್ಲಿ ಹಾಗೂ ಮೈಕೈಗೆ ಗಾಯನೋವು ಪಡಿಸಿಕೊಂಡ ಬಗ್ಗೆ ಪಿರ್ಯಾದಿ ಶ್ರೀ ಮಂಗಳ ತಂದೆ ನಾರಾಯಣ ಹರಿಕಂತ್ರ, ಪ್ರಾಯ-48 ವರ್ಷ, ವೃತ್ತಿ-ಮೀನುಗಾರಿಕೆ ಕೆಲಸ, ಸಾ|| ಹೊಸಹಿತ್ಲ, ಮಂಕಿ, ತಾ: ಹೊನ್ನಾವರ ರವರು ದಿನಾಂಕ: 01-02-2021 ರಂದು 13-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 16/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಮೊಹಮ್ಮದ್ ಜಾಫರ್ ತಂದೆ ಮೊಹಿದ್ದೀನ್ ಸಾಬ್, ಪ್ರಾಯ-30 ವರ್ಷ, ವೃತ್ತಿ-ಗೌಂಡಿ ಕೆಲಸ, ಸಾ|| ಹನುಮಾನ ನಗರ, ತಾ: ಭಟ್ಕಳ. ನಮೂದಿತ ಆರೋಪಿತನು ದಿನಾಂಕ: 01-02-2021 ರಂದು 16-30 ಗಂಟೆಯ ಸುಮಾರಿಗೆ ಭಟ್ಕಳ ಶಹರದ ಶಂಷುದ್ದೀನ್ ಸರ್ಕಲಿನ ಛಾಯಾ ಲಾಡ್ಜ್ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 2,160/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳ ಸಮೇತ ದಾಳಿ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತ ಕುಮಾರ ವಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 01-02-2021 ರಂದು 18-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 16/2021, ಕಲಂ: 279, 337 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಮಾರುತಿ ತಂದೆ ರಾಮಪ್ಪ ಪಟವರ್ಧನ, ಪ್ರಾಯ-53 ವರ್ಷ, ವೃತ್ತಿ-ಚಾಲಕ, ಸಾ|| ಹುಕ್ಕೇರಿ, ಬೆಳಗಾವಿ, ಹಾಲಿ ಸಾ|| ಶಿರಸಿ ಡಿಪೋ (ಎನ್.ಡಬ್ಲೂ.ಕೆ.ಆರ್.ಟಿ.ಸಿ ಬಸ್ ನಂ: ಕೆ.ಎ-31/ಎಫ್-1235 ನೇದರ ಚಾಲಕ). ನಮೂದಿತ ಆರೋಪಿತನು ದಿನಾಂಕ: 01-02-2021 ರಂದು 16-30 ಗಂಟೆಯ ಸುಮಾರಿಗೆ ಯಲ್ಲಾಪುರ ತಾಲೂಕಿನ ಕಣ್ಣಿಗೇರಿಯ ಡೌಗಿನಾಳ ಮಧ್ಯ ಹಾದು ಹೋದ ರಾಜ್ಯ ಹೆದ್ದಾರಿ ಸಂಖ್ಯೆ-93 ರಲ್ಲಿ ಬಾಬ್ತು ಎನ್.ಡಬ್ಲೂ.ಕೆ.ಆರ್.ಟಿ.ಸಿ ಬಸ್ ನಂ: ಕೆ.ಎ-31/ಎಫ್-1235 ನೇದನ್ನು ಹಳಿಯಾಳ ಕಡೆಯಿಂದ ಯಲ್ಲಾಪುರ ಕಡೆಗೆ ಅತೀವೇಗವಾಗಿ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದವನು ಬಸ್ ಮೇಲಿನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿರುವ ಬ್ರಿಡ್ಜ್ ನ ಮೋರಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ್ದರಿಂದ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 1). ಪಿರ್ಯಾದಿಯವರ ಮೂಗಿಗೆ ಹಾಗೂ 2). ನಿಶಲ್ ತಂದೆ ಮನವೆಲ್ ಸಿದ್ದಿ, ಪ್ರಾಯ-13 ವರ್ಷ, ವೃತ್ತಿ-ವಿದ್ಯಾರ್ಥಿನಿ, ಸಾ|| ಇಂದಿರಾನಗರ, ಕಿರವತ್ತಿ, ತಾ: ಯಲ್ಲಾಪುರ ಇವರ ಸೊಂಟಕ್ಕೆ ಹಾಗೂ ಕಾಲಿಗೆ, 3). ಡೆಸಿ ತಂದೆ ಮನವೆಲ್ ಸಿದ್ದಿ, ಪ್ರಾಯ-15 ವರ್ಷ, ವೃತ್ತಿ-ವಿದ್ಯಾರ್ಥಿನಿ, ಸಾ|| ಇಂದಿರಾನಗರ, ಕಿರವತ್ತಿ, ತಾ: ಯಲ್ಲಾಪುರ ಇವರಿ ಬಲಗೈಗೆ, 4). ಅಶ್ವಿನಿ ತಂದೆ ಮನವೆಲ್ ಸಿದ್ದಿ, ಪ್ರಾಯ-13 ವರ್ಷ, ವೃತ್ತಿ-ವಿದ್ಯಾರ್ಥಿನಿ, ಸಾ|| ಇಂದಿರಾನಗರ, ಕಿರವತ್ತಿ, ತಾ: ಯಲ್ಲಾಪುರ ಇವರ ಬಲಗೈಗೆ, 5). ಶ್ರೀಮತಿ ಶಾಂತಾ ಕೋಂ. ಮನವೆಲ್ ಸಿದ್ದಿ, ಪ್ರಾಯ-35 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಇಂದಿರಾನಗರ, ಕಿರವತ್ತಿ, ತಾ: ಯಲ್ಲಾಪುರ ಇವರ ಹಣೆಗೆ, 6). ಫರಹೀನ್‍ಬಾನು ತಂದೆ ರಿಯಾಜಅಹಮ್ಮದ್ ಖಂಡು, ಪ್ರಾಯ-23 ವರ್ಷ, ವೃತ್ತಿ-ಖಾಸಗಿ ಕೆಲಸ, ಸಾ|| ಕಾಳಮ್ಮನಗರ, ತಾ: ಯಲ್ಲಾಪುರ ಇವರ ತುಟಿಗೆ ಹಾಗೂ ಹಲ್ಲಿಗೆ ಗಾಯನೋವು ಪಡಿಸಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಶ್ರೀಮತಿ ರೋಸಿ ಕೋಂ. ಕಿರಣ ಡಯಾಸ್ ಸಿದ್ದಿ, ಪ್ರಾಯ-28 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಇಂದಿರಾನಗರ, ಕಿರವತ್ತಿ, ತಾ: ಯಲ್ಲಾಪುರ ರವರು ದಿನಾಂಕ: 01-02-2021 ರಂದು 18-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 17/2021, ಕಲಂ: 279, 337, 304(ಎ) ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಆನಂದ ತಂದೆ ತಿಮ್ಮಣ್ಣ ಸಿದ್ದಿ, ಪ್ರಾಯ-34 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬಾಳೆಕುಂಬ್ರಿ, ಮಾಗೋಡ, ತಾ: ಯಲ್ಲಾಪುರ (ಮೋಟಾರ್ ಸೈಕಲ್ ನಂ: ಕೆ.ಎ-31/ಇ.ಸಿ-5412 ನೇದರ ಸವಾರ). ನಮೂದಿತ ಆರೋಪಿತನು ದಿನಾಂಕ: 01/02/2021 ರಂದು ರಾತ್ರಿ 19-30 ಗಂಟೆಯ ಸುಮಾರಿಗೆ ತನ್ನ ಬಾಬ್ತು ಮೋಟಾರ್ ಸೈಕಲ್ ನಂ: ಕೆ.ಎ-31/ಇ.ಸಿ-5412 ನೇದನ್ನು ಯಲ್ಲಾಪುರ ಕಡೆಯಿಂದ ಮಾಗೋಡ ಕಾಲೋನಿಯ ಗಣಪತಿ ನಾಯ್ಕ ಇವರ ಅಂಗಡಿಯ ಮುಂದೆ ಹಾಯ್ದು ಹೋದ ಯಲ್ಲಾಪುರ-ಮಾಗೋಡ ಫಾಲ್ಸ್ ರಸ್ತೆಯ ಮೇಲೆ ಬಾಳೆಕುಂಬ್ರಿಯಿಂದ ಯಲ್ಲಾಪುರ ಕಡೆಗೆ ಅತೀವೇಗವಾಗಿ ಹಾಗೂ ನಿಷ್ಕಾಳಜೀತನದಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವಂತೆ ಚಲಾಯಿಸಿಕೊಂಡು ಬಂದು ತನ್ನ ಮೋಟಾರ್ ಸೈಕಲಿನ ವೇಗವನ್ನು ನಿಯಂತ್ರಿಸಲು ಆಗದೇ ಎದುರಿನಿಂದ ಯಲ್ಲಾಪುರ ಕಡೆಯಿಂದ ಮಾಗೋಡ ಕಡೆಗೆ ಹೋಗುತ್ತಿದ್ದ ಮೋಟಾರ್ ಸೈಕಲ್ ನಂ: ಕೆ.ಎ-31/ಇ.ಸಿ-6762 ನೇದಕ್ಕೆ ಎದುರಿನಿಂದ ಡಿಕ್ಕಿ ಮಾಡಿ ಅಪಘಾತ ಪಡಿಸಿದ್ದರಿಂದಲೇ ಮೋಟಾರ್ ಸೈಕಲ್ ನಂ: ಕೆ.ಎ-31/ಇ.ಸಿ-6762 ನೇದರ ಸವಾರನಾದ ನಾಗೇಂದ್ರ ತಂದೆ ನರಸಿಂಹ ಭಟ್, ಪ್ರಾಯ-46 ವರ್ಷ, ವೃತ್ತಿ-ಕೃಷಿ ಹಾಗೂ ಕಾರ್ಪೆಂಟರ್ ಕೆಲಸ, ಸಾ|| ಸಾವಕಾರ ಭಟ್ರ ಮನೆ, ಮಾಗೋಡ ಗ್ರಾ, ತಾ: ಯಲ್ಲಾಪುರ ಈತನ ತಲೆಗೆ ಭಾರೀ ಸ್ವರೂಪದ ರಕ್ತದ ಗಾಯ ಪೆಟ್ಟು ಆಗಿ ಕಿವಿಯಿಂದ ಹಾಗೂ ಮೂಗಿನಿಂದ ರಕ್ತ ಬಂದು ಸ್ಥಳದಲ್ಲಿಯೇ ಮೃತಪಟ್ಟಿದ್ದಲ್ಲದೇ, ಆರೋಪಿ ಮೋಟಾರ್ ಸೈಕಲ್ ಸವಾರನು ತನಗೂ ಸಹ ತನ್ನ ತಲೆಗೆ ಹಾಗೂ ಮುಖಕ್ಕೆ ಗಾಯ ಪೆಟ್ಟು ಪಡಿಸಿಕೊಂಡು, ಎರಡು ಮೋಟಾರ್ ಸೈಕಲಗಳನ್ನು ಜಖಂಗೊಳಿಸಿದ ಬಗ್ಗೆ ಪಿರ್ಯಾದಿ ಶ್ರೀ ಗೋಪಾಲಕರಷ್ಣ ತಂದೆ ತಿಮ್ಮಣ್ಣ ಭಟ್, ಪ್ರಾಯ-52 ವರ್ಷ, ವೃತ್ತಿ-ಕೃಷಿ ಕೆಲಸ, ಸಾ|| ತಾರಿಮಕ್ಕಿ, ಮಾಗೋಡ, ತಾ: ಯಲ್ಲಾಪುರ ರವರು ದಿನಾಂಕ: 01-02-2021 ರಂದು 22-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 01-02-2021

at 00:00 hrs to 24:00 hrs

 

ಪ್ರಕರಣಗಳು ದಾಖಲಾಗಿರುವುದಿಲ್ಲ....

 

======||||||||======

 

 

ಇತ್ತೀಚಿನ ನವೀಕರಣ​ : 02-02-2021 12:58 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080