ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 02-12-2021

at 00:00 hrs to 24:00 hrs

 

ಕಾರವಾರ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 103/2021, ಕಲಂ: 7(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ನೂತನಕುಮಾರ ತಂದೆ ನೇಮಿರಾಜ ಶೆಟ್ಟಿ, ಪ್ರಾಯ-29 ವರ್ಷ, ವೃತ್ತಿ-ವ್ಯಾಪಾರ, ಸಾ|| ಮಾರುತಿ ಗಲ್ಲಿ, ಕಾರವಾರ. ಈತನು ದಿನಾಂಕ: 02-12-2021 ರಂದು ಸಾಯಂಕಾಲ 19-30 ಘಂಟೆಗೆ ತನ್ನ ಲಾಭದ ಸಲುವಾಗಿ ಕಾರವಾರ ಗಾಂಧಿ ಬಜಾರ್ ದಲ್ಲಿನ ಮಹಾವೀರ ಬುಕ್ ಸ್ಟಾಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ 01/- ರೂಪಾಯಿಗೆ 80/- ರೂಪಾಯಿ ಕೊಡುವ ಷರತ್ತಿನ ಮೇಲೆ ಓ.ಸಿ ಮಟಕಾ ಜೂಗಾರಾಟದ ಅದೃಷ್ಟದ ಅಂಕೆ-ಸಂಖ್ಯೆಗಳ ಮೇಲೆ ಪಂಥ ಕಟ್ಟಿ ಸಾರ್ವಜನಿಕರಿಂದ ಹಣ ಪಡೆದುಕೊಂಡು ಓ.ಸಿ ಚೀಟಿ ಬರೆದು ಕೊಟ್ಟು ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿರುವಾಗ ದಾಳಿ ನಡೆಸಿ, ಆರೋಪಿತನಿಂದ ಅಂಕೆ-ಸಂಖ್ಯೆ ಬರೆದ ಕಾಗದ-1, ಬಾಲ್ ಪೆನ್-1 ಮತ್ತು ನಗದು ಹಣ 11,525/- ರೂಪಾಯಿ ನೇದವುಗಳನ್ನು ವಶಪಡಿಸಿಕೊಂಡ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಸಂತೋಷಕುಮಾರ ಎಮ್, ಪಿ.ಎಸ್.ಐ. ಕಾರವಾರ ಶಹರ ಪೊಲೀಸ್ ಠಾಣೆ ರವರು ದಿನಾಂಕ: 02-12-2021 ರಂದು 21-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 147/2021, ಕಲಂ: 279, 338 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತನು ಕಾರ್ ನಂ: ಜಿ.ಎ-05/ಬಿ-3067 ನೇದರ ಚಾಲಕನಾಗಿದ್ದು, ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಈತನು ದಿನಾಂಕ: 30-11-2021 ರಂದು 19-30 ಗಂಟೆಯ ಸಮಯಕ್ಕೆ ತಾನು ಚಲಾಯಿಸಿಕೊಂಡು ಬಂದ ಕಾರ್ ನಂ: ಜಿ.ಎ-05/ಬಿ-3067 ನೇದನ್ನು ಶಿರೂರು ಕಡೆಯಿಂದ ಭಟ್ಕಳ ಅತೀವೇಗವಾಗಿ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಗೊರಟೆ ಕ್ರಾಸಿನಲ್ಲಿ ರಸ್ತೆಯ ಬಲಭಾಗದಲ್ಲಿ ಅಕ್ಕನ ಮನೆಗೆ ಹೋಗಲು ತನ್ನ ನೋಂದಣಿಯಾಗದ ಹೀರೋ ಸ್ಲೆಂಡರ್ ಪ್ಲಸ್ ಮೋಟಾರ್ ಸೈಕಲ್ ಮೇಲೆ ನಿಂತ ಮೋಟಾರ್ ಸೈಕಲ್ ಸವಾರನಾದ ಪಿರ್ಯಾದಿಯ ತಮ್ಮ ಗಾಯಾಳು ಶ್ರೀ ಯೋಗೇಶ ತಂದೆ ಮಾಸ್ತಪ್ಪ ನಾಯ್ಕ, ಸಾ|| ರಘುನಾಥ ರೋಡ್, ಮಣ್ಕುಳಿ, ತಾ: ಭಟ್ಕಳ ಈತನಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದರ ಪರಿಣಾಮ ಈ ಅಪಘಾತದಲ್ಲಿ ಪಿಯಾದಿಯ ತಮ್ಮನಿಗೆ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯವಾದ ಬಗ್ಗೆ ಪಿರ್ಯಾದಿ ಶ್ರೀ ಮೋಹನ ತಂದೆ ಮಾಸ್ತಪ್ಪ ನಾಯ್ಕ, ಸಾ|| ರಘುನಾಥ ರೋಡ್, ಮಣ್ಕುಳಿ, ತಾ: ಭಟ್ಕಳ ರವರು ದಿನಾಂಕ: 02-12-2021 ರಂದು 19-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 02-12-2021

at 00:00 hrs to 24:00 hrs

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 23/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತಳಾದ ಶ್ರೀಮತಿ ಶೀಲಾ ಕೋಂ. ಮಂಜುನಾಥ ಮೊಗೇರ, ಪ್ರಾಯ-45 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಅಂಬೆಹಿತ್ಲು, ಬೆಳಕೆ, ಮೊಗೇರಕೇರಿ, ತಾ: ಭಟ್ಕಳ. ಇವಳು ಕಳೆದ 3 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದವಳು, ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ: 01-12-2021 ರಂದು 22-30 ಗಂಟೆಯಿಂದ ದಿನಾಂಕ: 02-12-2021 ರಂದು ಬೆಳಿಗ್ಗೆ 05-30 ಗಂಟೆಯ ನಡುವಿನ ಅವಧಿಯಲ್ಲಿ ಪಿರ್ಯಾದಿಯ ಮನೆಯ ಮುಂದೆ ಇರುವ ಬಾವಿಗೆ ಹಾರಿ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು, ಇದರ ಹೊರತು ಅವಳ ಮರಣದಲ್ಲಿ ಬೇರೇ ಯಾವುದೇ ಸಂಶಯ ಇರುವುದಿಲ್ಲ ಎಂಬ ಬಗ್ಗೆ ಪಿರ್ಯಾದಿ ಶ್ರೀಮತಿ ಯಮುನಾ ಕೋಂ. ರಾಜೇಶ ಮೊಗೇರ, ಪ್ರಾಯ-36 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಅಂಬೆಹಿತ್ಲು, ಬೆಳಕೆ, ಮೊಗೇರಕೇರಿ, ತಾ: ಭಟ್ಕಳ ರವರು ದಿನಾಂಕ: 02-12-2021 ರಂದು 09-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ರಾಮನಗರ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 16/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ವ್ಯಕ್ತಿಯು ಸುಮಾರು 35 ರಿಂದ 40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯಾಗಿದ್ದು, ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಈತನು ದಿನಾಂಕ: 01-12-2021 ರಂದು ಬೆಳಗ್ಗೆ 10-50 ಗಂಟೆಯ ಸುಮಾರಿಗೆ ಕಲಂಬುಲಿ ಗ್ರಾಮದ ಬ್ರಿಡ್ಜ್ ಕೆಳಗಿನ ನೀರಿನಲ್ಲಿ ಬಿದ್ದು ಅಸ್ವಸ್ಥನಾಗಿದ್ದವನು, ಈತನಿಗೆ ಉಪಚಾರಕ್ಕೆಂದು ಕಾರವಾರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಉಪಚಾರದಲ್ಲಿದ್ದವನು, ದಿನಾಂಕ: 02-12-2021 ರಂದು ಬೆಳಗಿನ ಜಾವ 08-00 ಗಂಟೆಯ ಸುಮಾರಿಗೆ ಮೃತಪಟ್ಟಿರುತ್ತಾನೆ. ಮೃತನು ನೀರಿನಲ್ಲಿ ಬಿದ್ದಿದ್ದರಿಂದ ಆಸ್ವಸ್ಥನಾಗಿ ಅನಾರೋಗ್ಯದಿಂದ ಮೃತಪಟ್ಟಿರುತ್ತಾನೆ. ಇದರ ಹೊರತು ಅವನ ಮರಣದಲ್ಲಿ ಬೇರೇ ಯಾವುದೇ ಸಂಶಯವಿರುವುದಿಲ್ಲ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ಸಂತೋಷ ತಂದೆ ಮೋಹನ ರೇಡ್ಕರ್, ಪ್ರಾಯ-47  ವರ್ಷ, ವೃತ್ತಿ-ಕೃಷಿ ಕೆಲಸ, ಸಾ|| ಬಜಾರ್ ಲೈನ್ ಕ್ಯಾಸರಲಾಕ್, ತಾ: ಜೋಯಿಡಾ ರವರು ದಿನಾಂಕ: 02-12-2021 ರಂದು 00-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

 

ಇತ್ತೀಚಿನ ನವೀಕರಣ​ : 04-12-2021 04:10 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080