ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 04-05-2021

at 00:00 hrs to 24:00 hrs

 

ಮಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 13/2021, ಕಲಂ: 269, 271 ಐಪಿಸಿ ಹಾಗೂ ಕಲಂ: 4, 5(1) ಕರ್ನಾಟಕ ಸಾಂಕ್ರಾಮಿಕ ರೋಗಗಳು-2020 ಮತ್ತು ಕಲಂ: 32, 34 ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ಪ್ರದೀಪ ತಂದೆ ದತ್ತಾ ಪಾಗಿ, ಪ್ರಾಯ-48 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಗಾಂಡೆಬಾಳ, ಕಾತರ, ಕೆರವಡಿ, ಮಲ್ಲಾಪುರ, ಕಾರವಾರ. ಈತನು ದಿನಾಂಕ: 04-05-2021 ರಂದು 20-45 ಗಂಟೆಗೆ ದೇಶಾದಂತ್ಯ ಕೋವಿಡ್-19 ಮಾರಕ ರೋಗ ಇದ್ದು, ರಾಷ್ಟ್ರೀಯ ವಿಪತ್ತು ಮತ್ತು ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಸರ್ಕಾರವು ಹೊರಡಿಸಿದ ಆದೇಶವನ್ನು ಉಲ್ಲಂಘಿಸಿ ತನ್ನ ಮತ್ತು ನಾಗರಿಕರ ಸುರಕ್ಷತೆಯನ್ನು ಗಮನಿಸದೇ ಮನೆಯಿಂದ ಹೊರಗೆ ಬಂದು, ತನ್ನ ಮನೆಯ ಮುಂದಿನ ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ಅಧೀಕೃತ ಪಾಸ್ ಯಾ ಪರವಾನಿಗೆ ಇಲ್ಲದೇ ಗೋವಾ ರಾಜ್ಯ ತಯಾರಿಕೆಯ ಸರಾಯಿ ತುಂಬಿದ ಬಾಟಲಿಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಅ||ಕಿ|| 2,400/- ಬೆಲೆಯ 180 ML ಅಳತೆಯ McDowell’s No.1 Reserve Whiskey Original ಅಂತಾ ಲೇಬಲ್ ಇರುವ ಗೋವಾ ಸರಾಯಿಯ 16 ಬಾಟಲಿಗಳನ್ನು ಒಂದು ಬಿಳಿ ಬಣ್ಣದ ಪಾಲಿಥಿನ್ ಚೀಲದಲ್ಲಿ ತುಂಬಿಕೊಂಡು ತನ್ನ ತಾಬಾದಲ್ಲಿ ಇಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರಾಜಶೇಖರ ಬಿ. ಸಾಗನೂರು, ಪಿ.ಎಸ್.ಐ, ಮಲ್ಲಾಪುರ ಪೊಲೀಸ್ ಠಾಣೆ ರವರು ದಿನಾಂಕ: 04-05-2021 ರಂದು 22-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹೊನ್ನಾವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 137/2021, ಕಲಂ: 269, 271 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಶಂಷುದ್ದೀನ್ ತಂದೆ ಹಿಸರ್ ಅಹಮ್ಮದ್ ಮುಲ್ಲಾ, ಪ್ರಾಯ-35 ವರ್ಷ, ವೃತ್ತಿ-ಹಣ್ಣಿನ ವ್ಯಾಪಾರ, ಸಾ|| ಪ್ರಭಾತನಗರ, ತಾ: ಹೊನ್ನಾವರ. ಈತನು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಮಾನ್ಯ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಾಂಕ್ರಾಮಿಕ ರೋಗವಾದ ಕೋವಿಡ್-19 (ಕೊರೋನಾ ವೈರಾಣು) ಖಾಯಿಲೆ ಹರಡದಂತೆ ತಡೆಗಟ್ಟುವ ಸಲುವಾಗಿ ಲಾಕಡೌನ್ ಆದೇಶ ಹೊರಡಿಸಿದ್ದರು ಸಹ ದಿನಾಂಕ: 04-05-2021 ರಂದು 16-30 ಗಂಟೆಗೆ ಹೊನ್ನಾವರ ಪಟ್ಟಣದ ತೇಲಂಗ ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜನರ ಪ್ರಾಣಕ್ಕೆ  ಅಪಾಯಕಾರಿಯಾದ ಕೊರೋನಾ ಸಾಂಕ್ರಾಮಿಕ ರೋಗದ ಸೋಂಕನ್ನು ಹರಡುವ ಉದ್ದೇಶದಿಂದ ಮತ್ತು ಕೊರೋನಾ ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಯಲು ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳನ್ನು ಅನುಸರಿಸದೇ ಮುಖಕ್ಕೆ ಮಾಸ್ಕ್ ಹಾಕದೇ ತೇಲಂಗ ರಸ್ತೆಗೆ ಬಂದು ಅನಗತ್ಯವಾಗಿ ತಿರುಗಾಡುತ್ತಾ ನಿರ್ಲಕ್ಷ್ಯದ ಕೃತ್ಯ ಎಸಗಿದ್ದಲ್ಲದೇ, ಕೊರೋನಾ ಸಾಂಕ್ರಾಮಿಕ ರೋಗ ಹರಡದಂತೆ ಸರ್ಕಾರ ಹೊರಡಿಸಿದ ಲಾಕಡೌನ್ ಆದೇಶದ ಉಲ್ಲಂಘನೆ ಮಾಡಿದಾಗ ಸಿಕ್ಕಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಮಹಾಂತೇಶ ಉದಯ ನಾಯಕ, ಪಿ.ಎಸ್.ಐ (ಕಾ&ಸು-2), ಹೊನ್ನಾವರ ಪೊಲೀಸ್ ಠಾಣೆ ರವರು ದಿನಾಂಕ: 04-05-2021 ರಂದು 18-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮಂಕಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 71/2021, ಕಲಂ: 269, 270 ಸಹಿತ 34 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ಲಿಯೋ ತಂದೆ ಲೂಯಿಸ್ ಗೊನ್ಸಾಲೀಸ್, ಪ್ರಾಯ-47 ವರ್ಷ, ವೃತ್ತಿ-ಪೇಂಟ್ ಅಂಗಡಿ ಮಾಲಿಕ, ಸಾ|| ಮಡಿ, ಮಂಕಿ, ತಾ: ಹೊನ್ನಾವರ, 2]. ಬಸ್ತ್ಯಾಂವ್ ತಂದೆ ಜುವಾಂವ್ ರೊಡ್ರಗೀಸ್, ಪ್ರಾಯ-49 ವರ್ಷ, ವೃತ್ತಿ-ಪೇಂಟ್ ಅಂಗಡಿಯಲ್ಲಿ ಕೆಲಸ, ಸಾ|| ದೇವರಗದ್ದೆ, ಮಂಕಿ, ತಾ: ಹೊನ್ನಾವರ. ಈ ನಮೂದಿತ ಆರೋಪಿತರು ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಕರ್ನಾಟಕ ಸರಕಾರ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು ಹೊರಡಿಸಿದ ಲಾಕಡೌನ್ ಆದೇಶಗಳಿದ್ದರೂ ಸಹ ಸಾರ್ವಜನಿಕರಿಗೆ ಮಾರಣಾಂತಿಕ ಸಾಂಕ್ರಾಮಿಕ ರೋಗವನ್ನು ಹರಡುವ ಉದ್ದೇಶದಿಂದ ತಮ್ಮ ಲಾಭಕ್ಕಾಗಿ ಪೇಂಟ್ ಅಂಗಡಿಯನ್ನು ತೆರೆದು ಜನರಿಗೆ ಪೇಂಟ್ ಮಾರಾಟ ಮಾಡುತ್ತಾ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಪರಮಾನಂದ ಬಿ. ಕೊಣ್ಣೂರ, ಪಿ.ಎಸ್.ಐ (ಕಾ&ಸು), ಮಂಕಿ ಪೊಲೀಸ್ ಠಾಣೆ ರವರು ದಿನಾಂಕ: 04-05-2021 ರಂದು 15-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮಂಕಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 72/2021, ಕಲಂ: 269, 270 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ನಸ್ರುಲ್ಲಾ ತಂದೆ ಅಹ್ಮದ್ ಫಕರಿದಿ, ಪ್ರಾಯ-45 ವರ್ಷ, ವೃತ್ತಿ-ಕಿರಾಣಿ ಅಂಗಡಿ ಮಾಲಿಕ, ಸಾ|| ನವಾಯತಕೇರಿ, ಮಂಕಿ, ತಾ: ಹೊನ್ನಾವರ. ಈತನು ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಕರ್ನಾಟಕ ಸರಕಾರ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು ಹೊರಡಿಸಿದ ಲಾಕಡೌನ್ ಆದೇಶಗಳಿದ್ದರೂ ಸಹ ಸಾರ್ವಜನಿಕರಿಗೆ ಮಾರಣಾಂತಿಕ ಸಾಂಕ್ರಾಮಿಕ ರೋಗವನ್ನು ಹರಡುವ ಉದ್ದೇಶದಿಂದ ತನ್ನ ಲಾಭಕ್ಕಾಗಿ ಕಿರಾಣಿ ಅಂಗಡಿಯನ್ನು ತೆರೆದು ಜನರಿಗೆ ಕಿರಾಣಿ ಹಾಗು ಇತರೆ ವಸ್ತುಗಳನ್ನು ಮಾರಾಟ ಮಾಡುತ್ತಾ ಸಿಕ್ಕ ಬಗ್ಗೆ ಸ||ತ|| ಶ್ರೀ ಪರಮಾನಂದ ಬಿ. ಕೊಣ್ಣೂರ, ಪಿ.ಎಸ್.ಐ (ಕಾ&ಸು), ಮಂಕಿ ಪೊಲೀಸ್ ಠಾಣೆ ರವರು ದಿನಾಂಕ: 04-05-2021 ರಂದು 19-35 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 04-05-2021

at 00:00 hrs to 24:00 hrs

 

ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 05/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಮನೋಹರ ತಂದೆ ಗಣಪತಿ ದೇವಳಿ, ಪ್ರಾಯ-80 ವರ್ಷ, ವೃತ್ತಿ-ನಿವೃತ್ತ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ, ಸಾ|| ರಾಮನಬೈಲ್, ತಾ: ಶಿರಸಿ. ಇವರು ಪಿರ್ಯಾದಿಯ ತಂದೆಯಾಗಿದ್ದು, ಸದ್ರಿಯವರು ಬಿ.ಪಿ ಕಾಯಿಲೆಗೆ ಮಾತ್ರೆಗಳನ್ನು ಸೇವಿಸುತ್ತಿದ್ದವರು, ಕಳೆದ ಮೂರು ದಿನಗಳಿಂದ ತಲೆ ಮತ್ತು ಮೈ ಕೈ ನೋವು ಅಂತಾ ಹೇಳಿ ಮಾನಸಿಕ ಒತ್ತಡದಲ್ಲಿದ್ದವರು, ದಿನಾಂಕ: 04-05-2021 ಬೆಳಿಗ್ಗೆ 08-00 ಗಂಟೆಗೆ ಮನೆಯಿಂದ ಹೊರಗೆ ಹೋದವರು, ತಮಗಿರುವ ತಲೆ ಮತ್ತು ಮೈ ಕೈ ನೋವಿನಿಂದ ಬಳಲುತ್ತಿದ್ದವರು, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಶಿರಸಿಯ ಕೋಟೆಕೆರೆ ನೀರಿನಲ್ಲಿ ಹಾರಿ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು, ಮೃತ ತನ್ನ ತಂದೆಯವರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ರಾಜೇಶ ತಂದೆ ಮನೋಹರ ದೇವಳಿ, ಸಾ|| ರಾಮನಬೈಲ್, ತಾ: ಶಿರಸಿ ರವರು ದಿನಾಂಕ: 04-05-2021 ರಂದು 11-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಸಿದ್ದಾಪುರ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 19/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಅಶೋಕ ತಂದೆ ಭದ್ರಯ್ಯ ಪಾಟೀಲ್, ಪ್ರಾಯ-57 ವರ್ಷ, ವೃತ್ತಿ-ಕೃಷಿ ಕೆಲಸ, ಸಾ|| ವಡಗೇರಿ, ಶಿರಳಗಿ ಗ್ರಾಮ, ತಾ: ಸಿದ್ದಾಪುರ. ಈತನು ಸುದ್ದಿದಾರಳ ಗಂಡನಿದ್ದು, ಕಳೆದ ಒಂದು ವರ್ಷದಿಂದ ತೀವೃತರವಾದ ಬೆನ್ನು ಮೂಳೆಯ ನೋವಿನಿಂದ ಬಳಲುತ್ತಿದ್ದವನಿಗೆ ಕಳೆದ ಡಿಸೆಂಬರ್ ತಿಂಗಳಿನಲ್ಲಿ ಬೆನ್ನು ಮೂಳೆಯ ಆಪರೇಷನ್ ಮಾಡಿಸಿದ್ದು, ಆಪರೇಷನ್ ಮಾಡಿಸಿದಾಗಿನಿಂದ ‘ತನಗೆ ಯಾವುದೇ ರೀತಿ ಕೆಲಸಗಳನ್ನು ಮಾಡಲಾಗುತ್ತಿಲ್ಲ. ತಾನು ಬೇರೆಯವರನ್ನು ಅವಲಂಬಿಸಿದ್ದೇನೆ’ ಎಂದು ವಿಪರೀತವಾಗಿ ಮನಸ್ಸಿಗೆ ಹಚ್ಚಿಕೊಂಡು ಖಿನ್ನತೆಗೆ ಒಳಗಾಗಿದ್ದವನು, ದಿನಾಂಕ: 04-05-2021 ರಂದು ಬೆಳಿಗ್ಗೆ 08-45 ಗಂಟೆಯಿಂದ ಬೆಳಿಗ್ಗೆ 10-00 ಗಂಟೆಯ ನಡುವಿನ ಅವಧಿಯಲ್ಲಿ ತನ್ನ ತೋಟದ ಅಂಚಿನಲ್ಲಿರುವ ಮಾವಿನ ಮರದ ಅಡ್ಡ ಟೊಂಗೆಗೆ ತಂತಿಯನ್ನು ಕಟ್ಟಿಕೊಂಡು ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು, ಈ ಕುರಿತು ಮುಂದಿನ ಕಾನೂನು ಕ್ರಮ ಜರುಗಿಸಿ ಕೊಡಲು ಕೋರಿದ ಬಗ್ಗೆ ಪಿರ್ಯಾದಿ ಶ್ರೀಮತಿ ನಾಗರತ್ನ ಕೋಂ. ಅಶೋಕ ಪಾಟೀಲ್, ಪ್ರಾಯ-55 ವರ್ಷ, ವೃತ್ತಿ-ಮನೆವಾರ್ತೆ, ಸಾ|| ವಡಗೇರಿ, ಶಿರಳಗಿ ಗ್ರಾಮ, ತಾ: ಸಿದ್ದಾಪುರ ರವರು ದಿನಾಂಕ: 04-05-2021 ರಂದು 11-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

ಇತ್ತೀಚಿನ ನವೀಕರಣ​ : 05-05-2021 04:40 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080