ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 06-05-2021

at 00:00 hrs to 24:00 hrs

 

ಗೋಕರ್ಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 39/2021, ಕಲಂ: 269, 336 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಪ್ರಕಾಶ ತಂದೆ ತುಳಸು ಗೌಡ, ಪ್ರಾಯ-36 ವರ್ಷ, ವೃತ್ತಿ-ಅಂಗಡಿ ವ್ಯಾಪಾರ, ಸಾ|| ಬಿಜ್ಜೂರು, ಗೋಕರ್ಣ, ತಾ: ಕುಮಟಾ. ಈತನು ಕೋವಿಡ್-19 ವೈರಸ್ ಪ್ರಸರಣವನ್ನು ತಡೆಟಗಟ್ಟುವ ನಿಟ್ಟಿನಲ್ಲಿ ಮಾನ್ಯ ಕರ್ನಾಟಕ ಸರ್ಕಾರವು ಮಾಡಿರುವ ಕೋವಿಡ್ ಕರ್ಫ್ಯೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಕೋವಿಡ್-19 ಕೊರೋನಾ ಸೋಂಕು ಸಾರ್ವಜನಿಕರಿಗೆ ಹರಡುವ ಬಗ್ಗೆ ತಿಳಿದಿದ್ದರೂ ಸಹ ದಿನಾಂಕ: 06-05-2021 ರಂದು 12-30 ಗಂಟೆಯ ಸುಮಾರಿಗೆ ಗೋಕರ್ಣದ ತಾರಮಕ್ಕಿ ರಸ್ತೆಯ ಹತ್ತಿರ ಇರುವ ಶ್ರೀ ತುಳಸಿ ಪೇಂಟ್ಸ್ ಅಂಗಡಿಯನ್ನು ತೆರೆದು ವ್ಯಾಪಾರ ವಹಿವಾಟು ಮಾಡಿ  ಕೋವಿಡ್-19 ವೈರಾಣು ಹರಡುವಿಕೆಯಲ್ಲಿ ನಿರ್ಲಕ್ಷ್ಯತೆ ಹಾಗೂ ಸಾರ್ವಜನಿಕರ ದೇಹದ ಸುರಕ್ಷತೆಗೆ ಅಪಾಯವುಂಟು ಮಾಡುವಂತಹ ನಿರ್ಲಕ್ಷ್ಯದ ಕೃತ್ಯ ಮಾಡಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ನವೀನ್ ಎಸ್. ನಾಯ್ಕ, ಪಿ.ಎಸ್.ಐ, ಗೋಕರ್ಣ ಪೊಲೀಸ್ ಠಾಣೆ ರವರು ದಿನಾಂಕ: 06-05-2021 ರಂದು 14-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಕುಮಟಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 99/2021, ಕಲಂ: 279, 337, 338, 304(ಎ) ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ರಾಮಭಾಯಿ ತಂದೆ ಬಾಬುಭಾಯಿ ಕರ್ಮಟಾ, ಪ್ರಾಯ-30 ವರ್ಷ, ವೃತ್ತಿ-ಚಾಲಕ, ಸಾ|| ಶಾಪುರ್, ತಾ: ಮಾಂಗ್ರೋಲ್, ಜಿ: ಜುನಾಗಡ್, ಗುಜರಾತ (ಲಾರಿ ನಂ: ಜಿ.ಜೆ-11/ವಿ.ವಿ-7707 ನೇದರ ಚಾಲಕ). ಈತನು ದಿನಾಂಕ: 06-05-2021 ರಂದು 21-45 ಗಂಟೆಯ ಸುಮಾರಿಗೆ ತಾನು ಚಲಾಯಿಸುತ್ತಿದ್ದ ಲಾರಿ ನಂ: ಜಿ.ಜೆ-11/ವಿ.ವಿ-7707 ನೇದನ್ನು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-66 ರ ಮೇಲೆ ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ಹೋಗಲು ಅತೀವೇಗವಾಗಿ ಚಲಾಯಿಸಿಕೊಂಡು ಬಂದು ಕುಮಟಾ ತಾಲೂಕಾ ದುಂಡಕುಳಿ ಹತ್ತಿರ ರಸ್ತೆಯು ತಿರುವಿನಿಂದ ಕೂಡಿದ್ದರೂ ಸಹ ಲಾರಿಯ ವೇಗವನ್ನು ನಿಯಂತ್ರಿಸದೇ ನಿಷ್ಕಾಳಜಿಯಿಂದ ಚಲಾಯಿಸಿ, ರಸ್ತೆಯ ಮದ್ಯದ ರೋಡ್ ಡಿವೈಡರಿಗೆ ಬಡಿದು ಲಾರಿಯನ್ನು ಪಲ್ಟಿ ಕೆಡವಿ ಅಪಘಾತ ಪಡಿಸಿ, ಲಾರಿಯಲ್ಲಿ ಇದ್ದ ನನಗೆ ಎಡಗೈ ಮೊಣಗಂಟಿಗೆ ಗಾಯವಾಗಲು ಹಾಗೂ ಇನ್ನೊಬ್ಬ ಚಾಲಕ ಗೋವಿಂದಭಾಯಿ ಇವರಿಗೆ ತಲೆಯ ಹಿಂಬದಿಗೆ ಗಾಯವಾಗಲು ಕಾರಣವಾಗಿದ್ದಲ್ಲದೇ, ತನಗೆ ಬಲಗಾಲಿನ ಪಾದದ ಭಾಗ ತುಂಡಾಗಲು ಹಾಗೂ ಎಡಗಾಲಿನ ಮೊಣಗಂಟಿನ ಭಾಗದಲ್ಲಿ ಮೂಳೆ ಮುರಿದು ಭಾರೀ ಗಾಯವಾಗಲು ಮತ್ತು ಎಡಗೈಗೆ ಸಾದಾ ಗಾಯವಾಗಲು ಆರೋಪಿ ಲಾರಿ ಚಾಲಕನೇ ಕಾರಣನಾದ ಬಗ್ಗೆ ಪಿರ್ಯಾದಿ ಶ್ರೀ ಹೀರಾಭಾಯಿ ತಂದೆ ಸುಧಾಭಾಯಿ ಚಾವುಡಾ, ಪ್ರಾಯ-37 ವರ್ಷ, ವೃತ್ತಿ-ಚಾಲಕ, ಸಾ|| ಶಾಪುರ್, ತಾ: ಮಾಂಗ್ರೋಲ್, ಜಿ: ಜುನಾಗಡ್, ಗುಜರಾತ ರವರು ದಿನಾಂಕ: 05-05-2021 ರಂದು 23-30 ಗಂಟೆಗೆ ಠಾಣೆಯಲ್ಲಿ ದೂರು ದಾಖಲಿಸಿದ್ದನ್ನು ಠಾಣಾ ಗುನ್ನಾ ನಂ: 99/2021, ಕಲಂ: 279, 337, 338 ಐಪಿಸಿ ನೇದರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

          ಈ ಪ್ರಕರಣವು ತನಿಖೆಯಲ್ಲಿರುವಾಗ ಗಂಭೀರವಾಗಿ ಗಾಯಗೊಂಡಿದ್ದ ಆರೋಪಿ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಿನಾಂಕ: 06-05-2021 ರಂದು 01-00 ಗಂಟೆಗೆ ಅಪಘಾತದಿಂದ ಆದ ಗಂಭೀರ ಗಾಯದಿಂದಲೇ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದು, ಕಾರಣ ಈ ಪ್ರಕರಣಕ್ಕೆ ಕಲಂ: 304(ಎ) ಐಪಿಸಿ ನೇದನ್ನು ಅಳವಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ. 

 

ಕುಮಟಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 100/2021, ಕಲಂ: 269, 336 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಆಕಾಶ ದಹಿಯಾ ತಂದೆ ಉಕಾರಮ್ ದಹಿಯಾ, ಪ್ರಾಯ-22 ವರ್ಷ, ವೃತ್ತಿ-ಜೈದೀಪ್ ಗಾರ್ಮೆಂರ್ಟ್ಸ್ ಹೆಸರಿನ ಬಟ್ಟೆ ವ್ಯಾಪಾರ, ಸಾ|| ಹೆರವಟ್ಟಾ, ವಿವೇಕಾನಂದ ನಗರ, ತಾ: ಕುಮಟಾ. ಈತನು ಕೋವಿಡ್-19 ವೈರಸ್ ಪ್ರಸರಣವನ್ನು ತಡೆಟಗಟ್ಟುವ ನಿಟ್ಟಿನಲ್ಲಿ ಮಾನ್ಯ ಕರ್ನಾಟಕ ಸರ್ಕಾರವು ಮಾಡಿರುವ ಕೋವಿಡ್ ಕರ್ಫ್ಯೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಕೋವಿಡ್-19 ಕೊರೋನಾ ಸೋಂಕು ಸಾರ್ವಜನಿಕರಿಗೆ ಹರಡುವ ಬಗ್ಗೆ ತಿಳಿದಿದ್ದರೂ ಸಹ ದಿನಾಂಕ: 06-05-2021 ರಂದು 10-30 ಗಂಟೆಯ ಸುಮಾರಿಗೆ ಕುಮಟಾ ಸುಭಾಷ ರಸ್ತೆಯಲ್ಲಿರುವ ಜೈದೀಪ್ ಗಾರ್ಮೆಂರ್ಟ್ಸ್ ಅಂಗಡಿಯನ್ನು ತೆರೆದು ವ್ಯಾಪಾರ ವಹಿವಾಟು ಮಾಡಿ ಕೋವಿಡ್-19 ವೈರಾಣು ಹರಡುವಿಕೆಯಲ್ಲಿ ನಿರ್ಲಕ್ಷ್ಯತೆ ಹಾಗೂ ಸಾರ್ವಜನಿಕರ ದೇಹದ ಸುರಕ್ಷತೆಗೆ ಅಪಾಯವುಂಟು ಮಾಡುವಂತಹ ನಿರ್ಲಕ್ಷ್ಯದ ಕೃತ್ಯ ಮಾಡಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರವಿ ಗುಡ್ಡಿ, ಪಿ.ಎಸ್.ಐ (ಕಾ&ಸು)-2, ಕುಮಟಾ ಪೊಲೀಸ್ ಠಾಣೆ ರವರು ದಿನಾಂಕ: 06-05-2021 ರಂದು 12-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಕುಮಟಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 101/2021, ಕಲಂ: 269, 336 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಚಂದನ್ ತಂದೆ ಮೋಹನ ಕರ್ಕಿ, ಪ್ರಾಯ-37 ವರ್ಷ, ವೃತ್ತಿ-ತಾರಾ ಮೊಬೈಲ್ ಮತ್ತು ಇಲೆಕ್ಟ್ರಿಕಲ್ ಅಂಗಡಿ ಮಾಲಕ, ಸಾ|| ಕರ್ಕಿ, ಮಠದಕೇರಿ, ತಾ: ಹೊನ್ನಾವರ. ಈತನು ಕೋವಿಡ್-19 ವೈರಸ್ ಪ್ರಸರಣವನ್ನು ತಡೆಟಗಟ್ಟುವ ನಿಟ್ಟಿನಲ್ಲಿ ಮಾನ್ಯ ಕರ್ನಾಟಕ ಸರ್ಕಾರವು ಮಾಡಿರುವ ಕೋವಿಡ್ ಕರ್ಫ್ಯೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಕೋವಿಡ್-19 ಕೊರೋನಾ ಸೋಂಕು ಸಾರ್ವಜನಿಕರಿಗೆ ಹರಡುವ ಬಗ್ಗೆ ತಿಳಿದಿದ್ದರೂ ಸಹ ದಿನಾಂಕ: 06-05-2021 ರಂದು 16-30 ಗಂಟೆಯ ಸುಮಾರಿಗೆ ಕುಮಟಾ ಮೂರೂರು ಕ್ರಾಸ್ ಹತ್ತಿರ ಇರುವ ತಾರಾ ಮೊಬೈಲ್ ಮತ್ತು ಇಲೆಕ್ಟ್ರಿಕಲ್ಸ್ ಅಂಗಡಿಯನ್ನು ತೆರೆದು ವ್ಯಾಪಾರ ವಹಿವಾಟು ಮಾಡಿ ಕೋವಿಡ್-19 ವೈರಾಣು ಹರಡುವಿಕೆಯಲ್ಲಿ ನಿರ್ಲಕ್ಷ್ಯತೆ ಹಾಗೂ ಸಾರ್ವಜನಿಕರ ದೇಹದ ಸುರಕ್ಷತೆಗೆ ಅಪಾಯವುಂಟು ಮಾಡುವಂತಹ ನಿರ್ಲಕ್ಷ್ಯದ ಕೃತ್ಯ ಮಾಡಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀಮತಿ ಸುಧಾ ಅಘನಾಶಿನಿ, ಪಿ.ಎಸ್.ಐ-2 (ಕ್ರೈಂ), ಕುಮಟಾ ಪೊಲೀಸ್ ಠಾಣೆ ರವರು ದಿನಾಂಕ: 06-05-2021 ರಂದು 18-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹೊನ್ನಾವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 139/2021, ಕಲಂ: 279, 337, 304(ಎ) ಐಪಿಸಿ ಸಹಿತ ಕಲಂ: 187 ಎಮ್.ವಿ ಎಕ್ಟ್ ನೇದ್ದರ ವಿವರ...... ನಮೂದಿತ ಆರೋಪಿತರಾದ ಯಾವುದೋ ಬೊಲೆರೋ ವಾಹನದ ಚಾಲಕನಾಗಿದ್ದು, ವಾಹನ ನಂಬರ್ ಹಾಗೂ ಚಾಲಕನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಈತನು ದಿನಾಂಕ: 06-5-2021 ರಂದು 12-00 ಗಂಟೆಯ ಸಮಯಕ್ಕೆ ಹೊನ್ನಾವರ ತಾಲೂಕಿನ ಖರ್ವಾ ಕ್ರಾಸ್ ಹತ್ತಿರ ಹಾದು ಹೋದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-69 ರಲ್ಲಿ ತಾನು ಚಲಾಯಿಸುತ್ತಿದ್ದ ಬೊಲೆರೋ ವಾಹನವನ್ನು ಹೊನ್ನಾವರ ಕಡೆಯಿಂದ ಗೇರುಸೊಪ್ಪ ಕಡೆಗೆ ಅತೀವೇಗವಾಗಿ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ತನ್ನ ಬದಿಯಿಂದ  ಪಿರ್ಯಾದಿ ಚಲಾಯಿಸಿಕೊಂಡು ಹೋಗುತ್ತಿದ್ದ ಹೀರೋ ಸ್ಲೆಂಡರ್ ಮೋಟಾರ್ ಸೈಕಲ್ ನಂ: ಕೆ.ಎ-47/ಎಸ್-6990 ನೇದಕ್ಕೆ ಡಿಕ್ಕಿ ಪಡಿಸಿ ಮೋಟಾರ್ ಸೈಕಲ್ ಸವಾರನಾದ ಪಿರ್ಯಾದಿಗೆ ಎಡಗಾಲಿನ ಪಾದಕ್ಕೆ ಹಾಗೂ ಬಲಭುಜಕ್ಕೆ ದುಃಖಾಪತ್ ಪಡಿಸಿದ್ದಲ್ಲದೇ, ಮೋಟಾರ್ ಸೈಕಲ್ ಹಿಂಬದಿ ಸವಾರನಾದ ಮಹಮ್ಮದ್ ತಂದೆ ರಿಯಾಜ್ ಖಾಜಿ, ಪ್ರಾಯ-18 ವರ್ಷ, ವೃತ್ತಿ-ವಿದ್ಯಾರ್ಥಿ, ಸಾ|| ವಲ್ಕಿ, ತಾ: ಹೊನ್ನಾವರ ಈತನ ತಲೆಗೆ ಭಾರೀ ಗಾಯ ಪಡಿಸಿ, ಚಿಕಿತ್ಸೆಗಾಗಿ ಹೊನ್ನಾವರದ ಸರಕಾರಿ ಆಸ್ಪತ್ರೆಗೆ ಕರೆ ತಂದಾಗ 13-15 ಗಂಟೆಗೆ ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವ ಕುರಿತು ತಿಳಿಸಿದ ಬಗ್ಗೆ ಹಾಗೂ ಅಪಘಾತ ಪಡಿಸಿದ ಬೊಲೆರೋ ವಾಹನದ ಆರೋಪಿ ಚಾಲಕನು ಅಪಘಾತದ ನಂತರ ವಾಹನವನ್ನು ನಿಲ್ಲಿಸದೇ ಚಲಾಯಿಸಿಕೊಂಡು ಹೋದ ಬಗ್ಗೆ ಪಿರ್ಯಾದಿ ಶ್ರೀ ನಾಯಿಫ್ ತಂದೆ ಗೌಸ್ ಖಾಜಿ, ಪ್ರಾಯ-21 ವರ್ಷ, ವೃತ್ತಿ-ಸಿವಿಲ್ ಇಂಜಿನೀಯರ್, ಸಾ|| ವಲ್ಕಿ, ತಾ: ಹೊನ್ನಾವರ ರವರು ದಿನಾಂಕ: 06-05-2021 ರಂದು 14-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹೊನ್ನಾವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 140/2021, ಕಲಂ: 269, 270 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಲೋಕೇಶ ತಂದೆ ಜನಾರ್ಧನ ನಾಯ್ಕ, ಪ್ರಾಯ-43 ವರ್ಷ, ವೃತ್ತಿ-ವ್ಯಾಪಾರ, ಸಾ|| ರಾಯಲಕೇರಿ, ತಾ: ಹೊನ್ನಾವರ. ಈತನು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಾಂಕ್ರಾಮಿಕ ರೋಗವಾದ ಕೋವಿಡ್-19 (ಕೊರೋನಾ ವೈರಾಣು) ಖಾಯಿಲೆ ಹರಡದಂತೆ ತಡೆಗಟ್ಟುವ ಸಲುವಾಗಿ ಲಾಕಡೌನ್ ಆದೇಶ ಹೊರಡಿಸಿದ್ದರೂ ಸಹ ದಿನಾಂಕ: 06-05-2021 ರಂದು ಸಂಜೆ 05-30 ಗಂಟೆಯ ಸುಮಾರಿಗೆ ಮುಖಕ್ಕೆ ಮಾಸ್ಕ್ ಹಾಕದೇ, ಯಾವುದೇ ಸುರಕ್ಷತಾ ಕ್ರಮ ಅನುಸರಿಸದೇ ತನ್ನ ಅಂಗಡಿಯನ್ನು ತೆರೆದಿಟ್ಟುಕೊಂಡು ವ್ಯಾಪಾರ ಮಾಡುತ್ತಾ ಕೊರೋನಾ ಸಾಂಕ್ರಾಮಿಕ ರೋಗದ ಸಲುವಾಗಿ ಸರ್ಕಾರ ಹೊರಡಿಸಿದ ಲಾಕಡೌನ್ ಆದೇಶದ ಉಲ್ಲಂಘನೆ ಮಾಡಿ, ಪ್ರಾಣಕ್ಕೆ ಅಪಾಯಕಾರಿಯಾದ ಕೊರೋನಾ ಸಾಂಕ್ರಾಮಿಕ ರೋಗದ ಸೋಂಕು ಹರಡುವುದನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳನ್ನು ತೆಗೆದುಕೊಳ್ಳದೇ ಅನಗತ್ಯವಾಗಿ ತನ್ನ ಅಂಗಡಿ ತೆರೆದು ನಿರ್ಲಕ್ಷ್ಯದ ಕೃತ್ಯ ಎಸಗಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀಮತಿ ಸಾವಿತ್ರಿ ಎ. ನಾಯಕ್, ಡಬ್ಲ್ಯೂ.ಪಿ.ಎಸ್.ಐ, ಹೊನ್ನಾವರ ಪೊಲೀಸ್ ಠಾಣೆ ರವರು ದಿನಾಂಕ: 06-05-2021 ರಂದು 19-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮಂಕಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 74/2021, ಕಲಂ: 269, 270 ಸಹಿತ 34 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ಉದಯ ಗೋಪಾಲ ಶೆಟ್ಟಿ, ಪ್ರಾಯ-50 ವರ್ಷ, 2]. ಶ್ರೀಮತಿ ವಿದ್ಯಾ ಕೋಂ. ಉದಯ ಶೆಟ್ಟಿ, ಪ್ರಾಯ-36 ವರ್ಷ, ಸಾ|| (ಇಬ್ಬರು) ಕೆಳಗಿನ ಇಡಗುಂಜಿ, ತಾ: ಹೊನ್ನಾವರ. ಈ ನಮೂದಿತ ಆರೋಪಿತರು ಕೋವಿಡ್-19 2 ನೇ ಅಲೆಯ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಕರ್ನಾಟಕ ಸರಕಾರ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು ಹೊರಡಿಸಿದ ಲಾಕಡೌನ್ ಆದೇಶಗಳಿದ್ದರೂ ಸಹ ಸಾರ್ವಜನಿಕರಿಗೆ ಮಾರಣಾಂತಿಕ ಸಂಕ್ರಾಮಿಕ ರೋಗವನ್ನು ಹರಡುವ ಉದ್ದೇಶದಿಂದ ದಿನಾಂಕ: 06-05-2021 ರಂದು ಮಧ್ಯಾಹ್ನ 13-45 ಗಂಟೆಗೆ ಗುಣವಂತೆ ಸರ್ಕಲ್ ಹತ್ತಿರವಿರುವ ಹೊಟೇಲ್ ಕರಾವಳಿ ಸ್ಟೈಲ್ ಎಂಬ ಹೆಸರಿನ ಹೊಟೇಲನ್ನು ತನ್ನ ಲಾಭಕ್ಕಾಗಿ ತೆರೆದು ಜನರಿಗೆ ಸಾಮೂಹಿಕವಾಗಿ ಟೇಬಲ್ ಮೇಲೆ ಊಟದ ಸರ್ವೀಸ್ ಕೋಟ್ಟು ಅವರಿಂದ ಹಣವನ್ನು ಪಡೆಯುತ್ತಾ ಇದ್ದಾಗ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಪರಮಾನಂದ ಬಿ. ಕೊಣ್ಣೂರ, ಪಿ.ಎಸ್.ಐ (ಕಾ&ಸು), ಮಂಕಿ ಪೊಲೀಸ್ ಠಾಣೆ ರವರು ದಿನಾಂಕ: 06-05-2021 ರಂದು 16-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 60/2021, ಕಲಂ: 269, 270, 336 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಮೊಹಮ್ಮದ್ ರೆಹಾನ್ ತಂದೆ ಮೊಹಮ್ಮದ್ ಅಶ್ರಫ್, ಪ್ರಾಯ-28 ವರ್ಷ, ವೃತ್ತಿ-ವ್ಯಾಪಾರ, ಸಾ|| ಸುಲ್ತಾನ್ ಮಸೀದ್ ಎದುರಿಗೆ, ಸುಲ್ತಾನ್ ಸ್ಟ್ರೀಟ್, ತಾ: ಭಟ್ಕಳ (ಮೋಟಾರ್ ಸೈಕಲ್ ನಂ: ಕೆ.ಎ-47/ವಿ-4114 ನೇದರ ಸವಾರ). ಈತನು ದಿನಾಂಕ: 06-05-2021 ರಂದು 16-30 ಗಂಟೆಯ ಸುಮಾರಿಗೆ ತನ್ನ ಮೋಟಾರ್ ಸೈಕಲ್ ನಂ: ಕೆ.ಎ-47/ವಿ-4114 ನೇದರ ಮೇಲೆ ಭಟ್ಕಳ ಶಹರದ ಶಂಷುದ್ದೀನ್ ಸರ್ಕಲ್ ಹತ್ತಿರ ಕೊರೋನಾ ಕರ್ಫ್ಯೂ (ಲಾಕಡೌನ್) ಆದೇಶ ಇದ್ದರೂ ಸಹ ಮಾಸ್ಕ್ ಹಾಕದೇ, ಯಾವುದೇ ರಕ್ಷಣೆಯನ್ನು ಹೊಂದದೆ ಕೊರೋನಾ ಸಾಂಕ್ರಾಮಿಕ ರೋಗದ ಕರ್ಫ್ಯೂ ಜಾರಿ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ, ಪ್ರಾಣಕ್ಕೆ ಅಪಾಯಕಾರಿಯಾದ ಕೊರೋನಾ ಸಾಂಕ್ರಾಮಿಕ ರೋಗದ ಸೋಂಕನ್ನು ಹರಡಲು ಉದ್ದೇಶ ಪೂರಕವಾಗಿ ಮನೆಯಿಂದ ಹೊರಗಡೆ ತಿರುಗಾಡಲು ಬಂದು ನಿರ್ಲಕ್ಷ್ಯತನ ತೋರಿ, ಮೋಟಾರ್ ಸೈಕಲನ್ನು ಸ್ಥಳದಲ್ಲಿ ಬಿಟ್ಟು ಓಡಿ ಹೋದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 06-05-2021 ರಂದು 17-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 61/2021, ಕಲಂ: 269, 270, 336 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಮಹಮ್ಮದ್ ಸಾಧಿಕ್ ತಂದೆ ಮಹಮ್ಮದ್ ಮೀರಾ ಖಲೀಪ್, ಪ್ರಾಯ-45 ವರ್ಷ, ವೃತ್ತಿ-ಟೇಲರಿಂಗ್ ಕೆಲಸ, ಸಾ|| ಮುಗ್ದುಂ ಕಾಲೋನಿ, ನ್ಯಾಶನಲ್ ರೋಡ್, ತಾ: ಭಟ್ಕಳ (ಮೋಟಾರ್ ಸೈಕಲ್ ನಂ: ಕೆ.ಎ-47/ಎಸ್-0849 ನೇದರ ಸವಾರ). ಈತನು ದಿನಾಂಕ: 06-05-2021 ರಂದು 17-30 ಗಂಟೆಯ ಸುಮಾರಿಗೆ ತನ್ನ ಮೋಟಾರ್ ಸೈಕಲ್ ನಂ: ಕೆ.ಎ-47/ಎಸ್-0849 ನೇದರ ಮೇಲೆ ಭಟ್ಕಳ ಶಹರದ ಹಳೇ ಬಸ್ ನಿಲ್ದಾಣದ ಹತ್ತಿರ ಕೊರೋನಾ ಕರ್ಫ್ಯೂ (ಲಾಕಡೌನ್) ಆದೇಶ ಇದ್ದರೂ ಸಹ ಮಾಸ್ಕ್ ಹಾಕದೇ, ಯಾವುದೇ ರಕ್ಷಣೆಯನ್ನು ಹೊಂದದೆ ಕೊರೋನಾ ಸಾಂಕ್ರಾಮಿಕ ರೋಗದ ಕರ್ಫ್ಯೂ ಜಾರಿ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ, ಪ್ರಾಣಕ್ಕೆ ಅಪಾಯಕಾರಿಯಾದ ಕೊರೋನಾ ಸಾಂಕ್ರಾಮಿಕ ರೋಗದ ಸೋಂಕನ್ನು ಹರಡಲು ಉದ್ದೇಶ ಪೂರಕವಾಗಿ ಮನೆಯಿಂದ ಹೊರಗಡೆ ತಿರುಗಾಡಲು ಬಂದು ನಿರ್ಲಕ್ಷ್ಯತನ ತೋರಿ ಮೋಟಾರ್ ಸೈಕಲನ್ನು ಸ್ಥಳದಲ್ಲಿ ಬಿಟ್ಟು ಓಡಿ ಹೋದ ಬಗ್ಗೆ ಪಿರ್ಯಾದಿ ಸ||ತ|| ಕುಮಾರಿ: ಸುಮಾ ಬಿ, ಡಬ್ಲ್ಯೂ.ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 06-05-2021 ರಂದು 18-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 62/2021, ಕಲಂ: 269, 270, 336 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಜಾಕೀರ್ ಹುಸೇನ್ ತಂದೆ ಮೋಹಿದ್ದೀನ್ ಗವಾಯಿ, ಪ್ರಾಯ-50 ವರ್ಷ, ವೃತ್ತಿ-ವ್ಯಾಪಾರ, ಸಾ|| ಹಕ್ಕಾ ಹೌಸ್, ಖಲೀಪಾ ಸ್ಟ್ರೀಟ್, ತಾ: ಭಟ್ಕಳ. ಈತನು ದಿನಾಂಕ: 06-05-2021 ರಂದು 13-00 ಗಂಟೆಯ ಸುಮಾರಿಗೆ ಭಟ್ಕಳ ಶಹರದ ಅಮೀನುದ್ದೀನ್ ರೋಡ್, ಉಮರ್ ಸ್ಟ್ರೀಟ್‍ ನಲ್ಲಿರುವ ಜಾಕೀರ್ರ ಎಂಟರಪ್ರೈಸಸ್ ಹೋಲಸೇಲ್ ಡೀಲರ್ ಎಂಬ ಅಂಗಡಿಯ ಎದುರಿಗೆ ಕೊರೋನಾ ಕರ್ಫ್ಯೂ (ಲಾಕಡೌನ್) ಆದೇಶ ಇದ್ದರೂ ಸಹ ಮಾಸ್ಕ್ ಹಾಕದೇ, ಯಾವುದೇ ರಕ್ಷಣೆಯನ್ನು ಹೊಂದದೆ ಕೊರೋನಾ ಸಾಂಕ್ರಾಮಿಕ ರೋಗದ ಕರ್ಫ್ಯೂ ಜಾರಿ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಪ್ರಾಣಕ್ಕೆ ಅಪಾಯಕಾರಿಯಾದ ಕೊರೋನಾ ಸಾಂಕ್ರಾಮಿಕ ರೋಗದ ಸೋಂಕನ್ನು ಹರಡಲು ಉದ್ದೇಶ ಪೂರಕವಾಗಿ ಮನೆಯಿಂದ ಹೊರಗಡೆ ತಿರುಗಾಡಲು ಬಂದು ನಿರ್ಲಕ್ಷ್ಯತನ ತೋರಿದ ಬಗ್ಗೆ ಪಿರ್ಯಾದಿ ಸ||ತ|| ಕುಮಾರಿ: ಸುಮಾ ಬಿ, ಡಬ್ಲ್ಯೂ.ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 06-05-2021 ರಂದು 19-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಶಿರಸಿ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 46/2021, ಕಲಂ: 279 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಪದ್ಮನಾಭ ತಂದೆ ಲಕ್ಷ್ಮಣ ಮಹಾಲೆ, ಪ್ರಾಯ-25 ವರ್ಷ, ವೃತ್ತಿ-ಚಾಲಕ, ಸಾ|| ದೇವನಿಲಯ, ಪೋ: ಚಿಪಗಿ, ತಾ: ಶಿರಸಿ (ಓಮಿನಿ ವಾಹನ ನಂ: ಕೆ.ಎ-31/ಎನ್-2025 ನೇದರ ಚಾಲಕ). ಈತನು ದಿನಾಂಕ: 05-05-2021 ರಂದು 23-30 ಗಂಟೆಯ ಸುಮಾರಿಗೆ ತನ್ನ ಬಾಬ್ತು ಓಮಿನಿ ವಾಹನ ನಂ: ಕೆ.ಎ-31/ಎನ್-2025 ನೇದನ್ನು ಕುಳುವೆ ಕಡೆಯಿಂದ ಶಿರಸಿ ಕಡೆಗೆ ಅತೀವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದವನು, ಶಿರಸಿ ತಾಲೂಕಿನ ಬರಗಾರ್ ಬ್ರಿಡ್ಜ್ ಹತ್ತಿರ ಅದರ ವೇಗವನ್ನು ನಿಯಂತ್ರಿಸಲಾಗದೇ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿ, ಬ್ರಿಡ್ಜ್ ಮೇಲಿನಿಂದ ಕೆಳಗಡೆ ಸುಮಾರು 10 ರಿಂದ 15 ಅಡಿ ಆಳದ ಬರಗಾರ ಹಳ್ಳಕ್ಕೆ ತನ್ನ ಓಮಿನಿ ವಾಹನ ಕೆಡವಿ ಅಪಘಾತ ಪಡಿಸಿ, ವಾಹನವನ್ನು ಜಖಂಗೊಳಿಸಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ಸತೀಶ ತಂದೆ ಮಾಬ್ಲೇಶ್ವರ ನಾಯ್ಕ, ಪ್ರಾಯ-30 ವರ್ಷ, ವೃತ್ತಿ-ಚಾಲಕ, ಸಾ|| ಹಲಸಿನಕೈ, ಪೋ: ಕುಳುವೆ, ತಾ: ಶಿರಸಿ ರವರು ದಿನಾಂಕ: 06-05-2021 ರಂದು 20-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುಂಡಗೋಡ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 69/2021, ಕಲಂ: 324, 504 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಶ್ಯಾಮಪ್ರಸಾದ ತಂದೆ ಕುಟ್ಟಪ್ಪನ್, ಸಾ|| ಹಳ್ಳೂರು ಓಣಿ, ತಾ: ಮುಂಡಗೋಡ. ಈತನು ದಿನಾಂಕ: 04-05-2021 ರಂದು ಬೆಳಿಗ್ಗೆ 11-30 ಗಂಟೆಯ ಸುಮಾರಿಗೆ ಪಿರ್ಯಾದಿಯವರು ಹಳ್ಳೂರಿನ ತಮ್ಮ ಮನೆಯ ಹಂಚುಗಳನ್ನು ಬಿಚ್ಚಿ ಸರಿ ಪಡಿಸುತ್ತಿರುವಾಗ ಅಲ್ಲಿಗೆ ಹೋಗಿ ಪಿರ್ಯಾದಿಯನ್ನು ಉದ್ದೇಶಿಸಿ ‘ಬೋಸಡಿ ಮಗನೇ, ಸೂಳಾ ಮಗನೇ, ನಮ್ಮ ಜಾಗದಲ್ಲಿ ನಾವು ಕಲ್ಲು ಮಣ್ಣು ಏನು ಬೇಕಾದರೂ ಹಾಕುತ್ತೇವೆ. ಅದನ್ನು ಕೇಳಲು ನೀನ್ಯಾರು?’ ಎಂದು ಅವಾಚ್ಯ ಶಬ್ದಗಳಿಂದ ಬೈಯ್ದುದಲ್ಲದೇ, ಅಲ್ಲಿಯೇ ನೆಲಕ್ಕೆ ಬಿದ್ದಿದ್ದ ಒಂದು ಕಲ್ಲನ್ನು ಎತ್ತಿ ಪಿರ್ಯಾದಿಯ ಕಡೆಗೆ ಬೀಸಿ ಒಗೆದಾಗ ಆ ಕಲ್ಲು ಪಿರ್ಯಾದಿಯ ಎಡಗಾಲಿನ ಮೊಣಗಂಟಿನ ಕೆಳಗೆ ತಾಗಿ ರಕ್ತದ ಗಾಯ ಪಡಿಸಿದ ಬಗ್ಗೆ ಪಿರ್ಯಾದಿ ಶ್ರೀ ದಿವಾಕರನ್ ತಂದೆ ರಾಘವನ್, ಪ್ರಾಯ-69 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಹಳ್ಳೂರ ಓಣಿ, ತಾ: ಮುಂಡಗೋಡ ರವರು ದಿನಾಂಕ: 06-05-2021 ರಂದು 12-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಬನವಾಸಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 48/2021, ಕಲಂ: 269, 270, 336 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಯಶವಂತ @ ರವಿ ತಂದೆ ದೇವೇಂದ್ರ ನಾಯ್ಕ, ಪ್ರಾಯ-34 ವರ್ಷ, ವೃತ್ತಿ-ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ, ಕುಂದಾಪುರ ಡಿಪೋ, ಮಂಗಳೂರು ವಿಭಾಗ, ಸಾ|| ಹುಡೇಲಕೊಪ್ಪ ತಾ: ಶಿರಸಿ. ಈತನು ದಿನಾಂಕ: 06-05-2021 ರಂದು 18-30 ಗಂಟೆಗೆ ದೇಶಾದ್ಯಂತ ಕೊರೋನಾ ಕರ್ಫ್ಯೂ (ಲಾಕಡೌನ್) ಇದ್ದರೂ ಸಹ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ, ಪ್ರಾಣಕ್ಕೆ ಅಪಾಯಕಾರಿಯಾದ ಕೊರೋನಾ ಸಾಂಕ್ರಾಮಿಕ ರೋಗವನ್ನು ಹರಡಲು ಮುಂಜಾಗೃತಾ ಕ್ರಮವಾದ ಮುಖಕ್ಕೆ ಮಾಸ್ಕ್ ಧರಿಸಿದೇ ಉದ್ದೇಶಪೂರ್ವಕವಾಗಿ ಅನಗತ್ಯವಾಗಿ ಹುಡೇಲಕೊಪ್ಪದ ಕನ್ನಡ ಶಾಲೆಯ ಎದುರು ಸಿಕ್ಕು ನಿರ್ಲಕ್ಷ್ಯತನ ತೋರಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಹಣಮಂತ ಎಸ್. ಬಿರಾದಾರ, ಪಿ.ಎಸ್.ಐ (ಕಾ&ಸು), ಬನವಾಸಿ ಪೊಲೀಸ್ ಠಾಣೆ ರವರು ದಿನಾಂಕ: 06-05-2021 ರಂದು 20-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 06-05-2021

at 00:00 hrs to 24:00 hrs

 

ಕಾರವಾರ ಶಹರ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 14/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಗೌರೀಶ ತಂದೆ ವಿಶ್ರಾಮ ನಾಯ್ಕ, ಪ್ರಾಯ-27 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಕಟಿಂದ್ರವಾಡ, ಹಣಕೋಣ, ಕಾರವಾರ. ಈತನು ದಿನಾಂಕ: 02-05-2021 ರಂದು 13-30 ಗಂಟೆಗೆ ಹಣಕೋಣದ ತನ್ನ ಮನೆಯಿಂದ ಕಾರವಾರದ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಬಂದು ತನಗಿರುವ ಯಾವುದೋ ಖಾಯಿಲೆಗೆ ಚಿಕಿತ್ಸೆ ಪಡೆದುಕೊಂಡು ವಾಪಸ್ ಮನೆಗೆ ಹೋಗದೇ ಕಾರವಾರದ ರವೀಂದ್ರನಾಥ ಕಡಲ ತೀರದ ಫುಡ್ ಕೋರ್ಟ್ ಹತ್ತಿರ ಮಲಗಿಕೊಂಡಿದ್ದವನು, ದಿನಾಂಕ: 06-05-2021 ರಂದು 07-00 ಗಂಟೆಯ ಪೂರ್ವದಲ್ಲಿ ಮೃತಪಟ್ಟಿದ್ದು, ಮೃತನ ಶವವು ಮಲಗಿದ್ದಲ್ಲಿಯೇ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು, ಮೃತನ ಶವವನ್ನು ಗುರುತಿಸಿ ಮೃತನ ಸಾವು ಅಸಹಜವಾಗಿ ಇರುವ ಕುರಿತು ತಿಳಿಸಿದ ಬಗ್ಗೆ ಪಿರ್ಯಾದಿ ಶ್ರೀ ಕುಶಲ್ ತಂದೆ ವಿಶ್ರಾಮ ನಾಯ್ಕ, ಪ್ರಾಯ-29 ವರ್ಷ, ವೃತ್ತಿ-ಖಾಸಗಿ ಕೆಲಸ, ಸಾ|| ಕಟಿಂದ್ರವಾಡ, ಹಣಕೋಣ, ಕಾರವಾರ ರವರು ದಿನಾಂಕ: 06-05-2021 ರಂದು 10-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಕಾರವಾರ ಶಹರ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 15/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಗಣಪತಿ ತಂದೆ ಬೊಮ್ಮಯ್ಯ ನಾಯಕ, ಪ್ರಾಯ-53 ವರ್ಷ, ವೃತ್ತಿ-ಕಸ್ಟಮ್ ಇಲಾಖೆ ನೌಕರ, ಸಾ|| ಸಿಂಗನಮಕ್ಕಿ, ಬಾಸಗೋಡ, ತಾ: ಅಂಕೋಲಾ, ಹಾಲಿ ಸಾ|| ಕಸ್ಟಮ್ ವಸತಿ ಗೃಹ, ಕಾರವಾರ. ಈತನು ಕಸ್ಟಮ್ ಇಲಾಖೆಯ ನೌಕರನಾಗಿದ್ದು, ತನ್ನ ಸಾಂಸಾರಿಕ ವಿಷಯದಲ್ಲಿ ವೈಮನಸ್ಸು ಉಂಟು ಮಾಡಿಕೊಂಡಿದ್ದು, ಇದರಿಂದಾಗಿ ಆತನ ಹೆಂಡತಿ 2019 ರಿಂದ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದು, ಸದರಿ ಮೃತನು ಒಬ್ಬನೇ ಕಸ್ಟಮ್ ವಸತಿ ಗೃಹದಲ್ಲಿ ವಾಸ ಮಾಡಿಕೊಂಡಿದ್ದವನು. ದಿನಾಂಕ: 03-05-2021 ರಂದು 11-00 ಗಂಟೆಗೆ ತನ್ನ ಮನೆಗೆ ಬಂದವನು, ಮನೆಯ ಒಳಗಿನಿಂದ ಚಿಲಕ ಹಾಕಿಕೊಂಡು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ದಿನಾಂಕ: 06-03-2021 ರಂದು 10-00 ಗಂಟೆಯ ನಡುವಿನ ಅವಧಿಯಲ್ಲಿ ಯಾವುದೋ ವಿಷ ಪದಾರ್ಥವನ್ನು ಸೇವಿಸಿ ಮೃತಪಟ್ಟಿದ್ದು, ಮೃತನ ಶವವು ಭಾಗಶಃ ಕೊಳೆತ ಸ್ಥಿತಿಯಲ್ಲಿ ದೊರೆತಿರುತ್ತದೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ ಬಗ್ಗೆ ಪಿರ್ಯಾದಿ ಶ್ರೀಮತಿ ಮಂಗಲಾ ಕೋಂ. ಗಣಪತಿ ನಾಯಕ, ಪ್ರಾಯ-52 ವರ್ಷ, ವೃತ್ತಿ-ಮನೆವಾರ್ತೆ ಸಾ|| ಅಯ್ಯಪ್ಪ ದೇವಸ್ಥಾನದ ಹತ್ತಿರ, ಕೆ.ಇ.ಬಿ ರೋಡ, ಕಾರವಾರ ರವರು ದಿನಾಂಕ: 06-05-2021 ರಂದು 15-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಬನವಾಸಿ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 06/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಅಶೋಕ ತಂದೆ ಜನಾರ್ಧನ ಪೂಜಾರಿ, ಪ್ರಾಯ-57 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಮನೆ ನಂ: 4/2, ದೊಡ್ನಳ್ಳಿ, ತಾ: ಶಿರಸಿ. ಈತನು ವಯಸ್ಸಿಗೆ ಬಂದ ತನ್ನ ಮಗ ಅಪಘಾತÀದಿಂದ ಗಾಯಗೊಂಡು ಮನೆಯಲ್ಲಿಯೇ ಇದ್ದು, ಮೃತನು ತನ್ನ ಮನೆಯ ಪಕ್ಕದಲ್ಲಿ ಹೊಸ ಮನೆ ಕಟ್ಟುತ್ತಿದ್ದು, ಮನೆಯ ಸಂಪೂರ್ಣ ಜವಾಬ್ದಾರಿ ನಿರ್ವಹಿಸಿಕೊಂಡು ಹೋಗುತ್ತಿದ್ದನು. ನಿರ್ಮಾಣ ಹಂತದ ಮನೆಯು ಸರಿಯಾದ ಸಮಯಕ್ಕೆ ಆಗದೇ ಇದ್ದರಿಂದ ಮತ್ತು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ತಾನೇ ನಿರ್ವಹಿಸಿಕೊಂಡು ಹೋಗಬೇಕೆಂದು ಮನನೊಂದು ಅದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆ ಹೊಂದಿ ದಿನಾಂಕ: 06-05-2021 ರಂದು ಬೆಳಿಗ್ಗೆ 09-00 ಗಂಟೆಯಿಂದ 11-30 ಗಂಟೆಯ ನಡುವಿನ ಅವಧಿಯಲ್ಲಿ ತನ್ನ ಮನೆಯ ಮುಂದಿನ ದೊಡ್ನಳ್ಳಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಚಳ್ಳಿ ಮರದ ಕೊಂಬೆಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಹೊರತು ಮೃತನ ಸಾವಿನಲ್ಲಿ ಬೇರೆ ಏನು ಸಂಶಯ ಇರುವುದಿಲ್ಲ ಎಂಬ ಬಗ್ಗೆ ಪಿರ್ಯಾದಿ ಶ್ರೀ ಪ್ರವೀಣ ತಂದೆ ಅಶೋಕ ಪೂಜಾರಿ, ಪ್ರಾಯ-30 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಮನೆ ನಂ: 4/2, ದೊಡ್ನಳ್ಳಿ, ತಾ: ಶಿರಸಿ ರವರು ದಿನಾಂಕ: 06-05-2021 ರಂದು 12-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

ಇತ್ತೀಚಿನ ನವೀಕರಣ​ : 07-05-2021 04:38 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080