ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 10-08-2021

at 00:00 hrs to 24:00 hrs

 

ಅಂಕೋಲಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 122/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963  ನೇದ್ದರ ವಿವರ...... ನಮೂದಿತ ಆರೋಪಿತ ರಾಜು ತಂದೆ ಮೋಹನ ನಾಯ್ಕ, ಪ್ರಾಯ-48 ವರ್ಷ, ವೃತ್ತಿ-ರಿಕ್ಷಾ ಚಾಲಕ, ಸಾ|| ರೈಲ್ವೇ ನಿಲ್ದಾಣದ ಹತ್ತಿರ, ಜಮಗೋಡ, ತಾ: ಅಂಕೋಲಾ. ಈತನು ದಿನಾಂಕ: 10-08-2021 ರಂದು 11-45 ಗಂಟೆಯ ಸುಮಾರಿಗೆ ಅಂಕೋಲಾ ತಾಲೂಕಿನ ಜಮಗೋಡ ರೈಲ್ವೇ ನಿಲ್ದಾಣದ ಕ್ರಾಸಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-66 ರ ರಸ್ತೆಯ ಬದಿಯಲ್ಲಿ ತನ್ನ ಲಾಭಕ್ಕೋಸ್ಕರ ರಸ್ತೆಯಲ್ಲಿ ಬರ-ಹೋಗುವ ಸಾರ್ವಜನಿಕರಿಗೆ ಅದೃಷ್ಟ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳುತ್ತಾ, ಸಾರ್ವಜನಿಕರಿಂದ ಹಣ ಪಡೆದು ತನ್ನ ಹತ್ತಿರ ಇರುವ ಹಾಳೆಯಲ್ಲಿ ಅಂಕೆ-ಸಂಖ್ಯೆ ಬರೆದುಕೊಂಡು ಓ.ಸಿ ಮಟಕಾ ಜೂಗಾರಾಟ ಆಡುತ್ತಿದ್ದಾಗ ವಿವಿಧ ಮುಖಬೆಲೆಯ ನಗದು ಹಣ 1,320/- ರೂಪಾಯಿ ಮತ್ತು ಓ.ಸಿ ಜೂಗಾರಾಟದ ಸಲಕರಣೆಯೊಂದಿಗೆ ದಾಳಿಯ ಕಾಲಕ್ಕೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಪ್ರವೀಣಕುಮಾರ ಆರ್, ಪಿ.ಎಸ್.ಐ-1, ಅಂಕೋಲಾ ಪೊಲೀಸ್ ಠಾಣೆ ರವರು ದಿನಾಂಕ: 10-08-2021 ರಂದು 18-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುರ್ಡೇಶ್ವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 70/2021, ಕಲಂ: 380 ಐಪಿಸಿ  ನೇದ್ದರ ವಿವರ...... ನಮೂದಿತ ಆರೋಪಿತರಾದ ಯಾರೋ ಕಳ್ಳರು ದಿನಾಂಕ: 02-08-2021 ರಂದು ಬೆಳಿಗ್ಗೆ 10-30 ಗಂಟೆಯಿಂದ ದಿನಾಂಕ: 04-08-2021 ರ 12-00 ಗಂಟೆಯ ನಡುವಿನ ಅವಧಿಯಲ್ಲಿ ಪಿರ್ಯಾದಿಯ ಮನೆಯ ಒಳ ಹೊಕ್ಕಿ 1). ಅಂದಾಜು 15 ಗ್ರಾಂ ತೂಕದ ನಕ್ಲೇಸ್-1, ಅ||ಕಿ|| 12,000/- ರೂಪಾಯಿ, 2). ಅಂದಾಜು 6 ಗ್ರಾಂ ತೂಕದ ಚೈನ್-2, ಅ||ಕಿ|| 12,000/- ರೂಪಾಯಿ, 3). ಅಂದಾಜು 4 ಗ್ರಾಂ ತೂಕದ ಹಳೆಯ ಬ್ರೇಸಲೆಟ್-1, ಅ||ಕಿ|| 4,000/- ರೂಪಾಯಿ, 4). ಅಂದಾಜು 2 ಗ್ರಾಂ ತೂಕದ ಕಿವಿಯ ರಿಂಗ್–1, ಅ||ಕಿ|| 2,000/- ರೂಪಾಯಿ, 5). ಅಂದಾಜು 4 ಗ್ರಾಂ ತೂಕದ ಮಗಳ ಬೆರಳ ಉಂಗುರ-2, ಅ||ಕಿ|| 8,000/- ರೂಪಾಯಿ, 6). ಅಂದಾಜು 4 ಗ್ರಾಂ ತೂಕದ ಹೆಂಡತಿಯ ಬೆರಳ ಉಂಗುರ-3, ಅ||ಕಿ|| 12,000/- ರೂಪಾಯಿ, 7). 4 ಗ್ರಾಂ ತೂಕದ ಗೋಲ್ಡ್ ಕಾಯಿನ್-3, ಅ||ಕಿ|| 12,000/- ರೂಪಾಯಿ, 8). ನಗದು 26,000/- ರೂಪಾಯಿ. ಒಟ್ಟೂ ಮೊತ್ತ 88,000/- ರೂಪಾಯಿಯ ಬಂಗಾರದ ವಸ್ತುಗಳು ಹಾಗೂ ನಗದು ಹಣ ಇವುಗಳನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪಿರ್ಯಾದಿ ಶ್ರೀ ಮಹ್ಮದ್ ಸೋಯಾಬ್ ತಂದೆ ಅಹ್ಮದ್ ಕೋಚೆಬಾಪು, ಪ್ರಾಯ-52 ವರ್ಷ, ವೃತ್ತಿ-ಮನೆ ಕೆಲಸ, ಸಾ|| ನವೀನ್ ಬೀಚ್ ರೋಡ್, ಮುರ್ಡೇಶ್ವರ, ತಾ: ಭಟ್ಕಳ ರವರು ದಿನಾಂಕ: 10-08-2021 ರಂದು 13-25 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 128/2021, ಕಲಂ: 25(1B) ಭಾರತೀಯ ಆಯುಧ ಕಾಯ್ದೆ-1959  ನೇದ್ದರ ವಿವರ...... ನಮೂದಿತ ಆರೋಪಿತರು 1]. ಫಿಲಿಫ್ ತಂದೆ ಕೃಷ್ಣಾ ಸಿದ್ದಿ, ಪ್ರಾಯ-23 ವರ್ಷ, ವೃತ್ತಿ-ಕೂಲಿ ಕೆಲಸ, 2]. ಪ್ರಕಾಶ ತಂದೆ ಕೃಷ್ಣಾ ಸಿದ್ದಿ, ಪ್ರಾಯ-22 ವರ್ಷ, ವೃತ್ತಿ-ಕೂಲಿ ಕೆಲಸ, 3]. ಕೃಷ್ಣಾ ತಂದೆ ಶಂಕರ ಸಿದ್ದಿ, ಪ್ರಾಯ-65 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| (ಎಲ್ಲರೂ) ಜಡಗಿನಕೊಪ್ಪ, ಬಿಳಕಿ ಗ್ರಾಮ, ತಾ: ಯಲ್ಲಾಪುರ. ಈ ನಮೂದಿತ ಆರೋಪಿತರು ಯಾವುದೇ ಅಧೀಕೃತ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಒಂಟಿ ನಳಿಕೆಯ ನಾಡ ಬಂದೂಕನ್ನು ತಮ್ಮ ತಾಬಾದಲ್ಲಿ ಇಟ್ಟುಕೊಂಡವರು ದಿನಾಂಕ: 10-08-2021 ರಂದು 11-15 ಗಂಟೆಗೆ ಯಲ್ಲಾಪುರ ತಾಲೂಕಿನ ಬಿಳಕಿ ಗ್ರಾಮ ಜಡಗಿನಕೊಪ್ಪ ಊರಿನ ಅರಣ್ಯ ಪ್ರದೇಶದಲ್ಲಿ ಆರೋಪಿ 1 ಮತ್ತು 2 ನೇಯವರು ಬಜಾಜ್ ಪಲ್ಸರ್ ಮೋಟಾರ್ ಸೈಕಲ್ ನಂ: ಕೆ.ಎ-31/ಇ.ಸಿ-5186 ನೇದರ ಮೇಲೆ ಅಕ್ರಮವಾಗಿ ಒಂಟಿ ನಳಿಕೆಯ ನಾಡ ಬಂದೂಕನ್ನು ತೆಗೆದುಕೊಂಡು ಹೋಗುತ್ತಿರುವಾಗ ಪಿರ್ಯಾದಿ ಹಾಗೂ ಸಿಬ್ಬಂದಿಯವರಿಗೆ ಸೆರೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಮಂಜುನಾಥ ಎಸ್. ಗೌಡರ್, ಪಿ.ಎಸ್.ಐ, ಯಲ್ಲಾಪುರ ಪೊಲೀಸ್ ಠಾಣೆ ರವರು ದಿನಾಂಕ: 10-08-2021 ರಂದು 14-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 129/2021, ಕಲಂ: 279 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಮೆಹಬೂಬ್ ತಂದೆ ನಬಿಸಾಬ್, ಪ್ರಾಯ-25 ವರ್ಷ, ವೃತ್ತಿ-ಚಾಲಕ ಸಾ|| ವೆಂಕಟೇಶ್ವರ ಕಾಲೋನಿ, ಈದ್ಗಾ ಮೈದಾನದ ಸಮೀಪ, ಕವಿತಾಳ, ತಾ&ಜಿ: ರಾಯಚೂರ (ಲಾರಿ ನಂ: ಕೆ.ಎ-36/ಬಿ-5781 ನೇದರ ಚಾಲಕ). ಈತನು ದಿನಾಂಕ: 10-08-2021 ರಂದು ಬೆಳಿಗ್ಗೆ 07-00 ಗಂಟೆಗೆ ತನ್ನ ಲಾರಿ ನಂ: ಕೆ.ಎ-36/ಬಿ-5781 ನೇದನ್ನು ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-63 ರಲ್ಲಿ ಅತೀವೇಗವಾಗಿ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಅರಬೈಲ್ ಘಟ್ಟದಲ್ಲಿಯ ಎಸ್. ತಿರುವಿನ ಹತ್ತಿರ ತನ್ನ ಎದುರಿನಿಂದ ಅಂದರೆ ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ನಿಧಾನವಾಗಿ ರಸ್ತೆಯ ಎಡಬದಿಯಿಂದ ಪಿರ್ಯಾದಿಯು ಚಲಾಯಿಸಿಕೊಂಡು ಬರುತ್ತಿದ್ದ ಲಾರಿ ನಂ: ಕೆ.ಎ-25/ಬಿ-2159 ನೇದಕ್ಕೆ ಡಿಕ್ಕಿ ಹೊಡೆದು ಅಪಘಾತ ಪಡಿಸಿ ಎರಡು ಲಾರಿಗಳನ್ನು ಜಖಂಗೊಳಿಸಿದ ಬಗ್ಗೆ ಪಿರ್ಯಾದಿ ಶ್ರೀ ರಾಮನಗೌಡಾ ತಂದೆ ಬಸನಗೌಡಾ ರೆಡ್ಡಿ, ಪ್ರಾಯ-26 ವರ್ಷ, ವೃತ್ತಿ-ಲಾರಿ ಚಾಲಕ, ಸಾ|| ಬಿ. ಸಾಲವಾಡಿ, ತಾ: ಮುದ್ದೇಬಿಹಾಳ (ತಾಳಿಕೋಟೆ), ಜಿ: ವಿಜಾಪುರ ರವರು ದಿನಾಂಕ: 10-08-2021 ರಂದು 19-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

                      

ಶಿರಸಿ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 79/2021, ಕಲಂ: ಹೆಂಗಸು ಕಾಣೆ ನೇದ್ದರ ವಿವರ...... ನಮೂದಿತ ಕಾಣೆಯದ ಹೆಂಗಸು ಕುಮಾರಿ: ನೇಹಾ ತಂದೆ ರವಿ ಜೋಗಳೇಕರ, ಪ್ರಾಯ-18 ವರ್ಷ, ವೃತ್ತಿ-ವಿದ್ಯಾರ್ಥಿನಿ, ಸಾ|| ಮಂಜುನಾಥ ಕಾಲೋನಿ, 4 ನೇ ಅಡ್ಡ ರಸ್ತೆ, ಗಣೇಶ ನಗರ, ತಾ: ಶಿರಸಿ. ಪಿರ್ಯಾದಿಯ ಮಗಳಾದ ಇವಳು ದಿನಾಂಕ: 09-08-2021 ರಂದು ಸಂಜೆ 04-45 ಗಂಟೆಗೆ ತಮ್ಮ ಮನೆಯ ಹತ್ತಿರ ಇದ್ದ ಅಂಗಡಿಗೆ ಹೋಗಿ ‘ಲೇಯ್ಸ್ ಪ್ಯಾಕೆಟ್ ತರುತ್ತೇನೆ’ ಎಂದು ಹೇಳಿ ಹೋಗಿದ್ದವಳು, ಪುನಃ ಮನೆಗೆ ಬಾರದೇ ಹಾಗೂ ಸಂಬಂಧಿಕರ ಮನೆಗೂ ಹೋಗದೇ ಹೊರಗಡೆ ಎಲ್ಲಿಗೋ ಹೋಗಿ ಕಾಣೆಯಾಗಿರುತ್ತಾಳೆ. ಕಾರಣ ಕಾಣೆಯಾದ ತನ್ನ ಮಗಳನ್ನು ಹುಡುಕಿ ಕೊಡಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ರವಿ ತಂದೆ ರಮೇಶ ಜೋಗಳೆಕರ. ಪ್ರಾಯ-45 ವರ್ಷ, ವೃತ್ತಿ-ಸೆಕ್ಯೂರಿಟಿ ಗಾರ್ಡ್, ಸಾ|| ಮಂಜುನಾಥ ಕಾಲೋನಿ, 4 ನೇ ಅಡ್ಡ ರಸ್ತೆ, ಗಣೇಶ ನಗರ, ತಾ: ಶಿರಸಿ ರವರು ದಿನಾಂಕ: 10-08-2021 ರಂದು 17-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

                      

ಮುಂಡಗೋಡ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 106/2021, ಕಲಂ: 454, 380 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರಾದ ಯಾರೋ ಕಳ್ಳರು ಕಳೆದ ಜನವರಿ ತಿಂಗಳಿನ ಒಂದು ದಿನ ಬೆಳಿಗ್ಗೆ 10-00 ಗಂಟೆಯಿಂದ 11-30 ಗಂಟೆಯ ನಡುವಿನ ಅವಧಿಯಲ್ಲಿ ಕಲಕೊಪ್ಪದಲ್ಲಿರುವ ಪಿರ್ಯಾದಿಯ ಮನೆಯ ಮುಂದಿನ ಬಾಗಿಲಿಗೆ ಹಾಕಿದ ಬೀಗವನ್ನು ಒಡೆದು ಮನೆಯ ಒಳ ಹೊಕ್ಕು, ಮನೆಯ ಮಧ್ಯದ ಕೋಣೆಯಲ್ಲಿ ಅಲ್ಮೇರಾದಲ್ಲಿಟ್ಟಿದ್ದ 05 ಗ್ರಾಂ ತೂಕದ ಸುಮಾರು 20,000/- ರೂಪಾಯಿ  ಬೆಲೆಬಾಳುವ ಬಂಗಾರದ ಉಂಗುರವನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪಿರ್ಯಾದಿ ಶ್ರೀ ಮಹಾದೇವ ತಂದೆ ಫಕ್ಕೀರಪ್ಪ ಗುಬ್ಬಕ್ಕನವರ್, ಪ್ರಾಯ-47 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ಕಲಕೊಪ್ಪ, ತಾ: ಮುಂಡಗೋಡ ರವರು ದಿನಾಂಕ: 10-08-2021 ರಂದು 11-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

                      

ಬನವಾಸಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 77/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963  ನೇದ್ದರ ವಿವರ...... ನಮೂದಿತ ಆರೋಪಿತ ಅಲಿಸಾಬ್ ತಂದೆ ಖಾದರಸಾಬ್ ನದಾಫ್, ಪ್ರಾಯ-42 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ದಾಸನಕೊಪ್ಪ, ತಾ: ಶಿರಸಿ. ಈತನು ದಿನಾಂಕ: 10-08-2021 ರಂದು 17-05 ಗಂಟೆಗೆ ಶಿರಸಿ ತಾಲೂಕಿನ ಬದನಗೋಡ ಗ್ರಾಮದ ದಾಸನಕೊಪ್ಪದ ಸಂತೆ ಪೇಟೆಯ ದೇವದಾರ ಜಾತಿಯ ಮರದ ಕೆಳಗಿನ ಸಾರ್ವಜನಿಕ ರಸ್ತೆಯಲ್ಲಿ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳಿ ಓ.ಸಿ ಮಟಕಾ ಜೂಗಾರಾಟ ನಡೆಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾಗ ಪಿರ್ಯಾದಿಯವರು ದಾಳಿ ಮಾಡಿ ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳಾದ 1). ಓ.ಸಿ. ಚೀಟಿ-01, 2). ನಗದು ಹಣ 450/- ರೂಪಾಯಿ ಹಾಗೂ 3). ಬಾಲ್ ಪೆನ್-01 ನೇದವುಗಳೊಂದಿಗೆ ಸೆರೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಹಣಮಂತ ಬಿರಾದಾರ, ಪಿ.ಎಸ್.ಐ (ಕಾ&ಸು), ಬನವಾಸಿ ಪೊಲೀಸ್ ಠಾಣೆ ರವರು ದಿನಾಂಕ: 10-08-2021 ರಂದು 19-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 10-08-2021

at 00:00 hrs to 24:00 hrs

 

ಗೋಕರ್ಣ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 16/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ವ್ಯಕ್ತಿ ಶ್ರೀ ಅರುಣಕುಮಾರ ತಂದೆ ಲಕ್ಕಪ್ಪ, ಪ್ರಾಯ-21 ವರ್ಷ, ವೃತ್ತಿ-ವಿದ್ಯಾರ್ಥಿ, ಸಾ|| 4/8, 5 ನೇ ಮೇನ್ 18 ನೇ ಕ್ರಾಸ್, ಎನ್.ಎಸ್ ಪಾಳ್ಯ, ಬಿ.ಟಿ.ಎಮ್ 2 ನೇ ಸ್ಟೇಜ್, ಬೆಂಗಳೂರು. ಈತನು ದಿನಾಂಕ: 09-08-2021 ರಂದು ಬೆಳಿಗ್ಗೆ 07-30 ಗಂಟೆಯ ಸುಮಾರಿಗೆ ಗೋಕರ್ಣದ ಮೇನ್ ಬೀಚ್ ಸಮುದ್ರದ ತೀರದಲ್ಲಿ ಈಜಾಡಲು ಹೋದವನು, ಈಜಾಡಲಾಗದೇ ಸಮುದ್ರದ ನೀರಿನಲ್ಲಿ ಮುಳುಗಿ ಮೃತಪಟ್ಟು ದಿನಾಂಕ: 10-08-2021 ರಂದು ಬೆಳಿಗ್ಗೆ 06-15 ಗಂಟೆಯ ಸುಮಾರಿಗೆ ಶವವಾಗಿ ಸಿಕ್ಕಿರುತ್ತಾನೆಯೇ ಹೊರತು ಆತನ ಮರಣದಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ ಎಂಬ ಬಗ್ಗೆ ಪಿರ್ಯಾದಿ ಶ್ರೀ ಲಕ್ಕಪ್ಪ ತಂದೆ ದಿ: ನಾರಾಯಣಪ್ಪ, ಪ್ರಾಯ-47 ವರ್ಷ, ವೃತ್ತಿ-ವೆಲ್ಡಿಂಗ್ ಕೆಲಸ, ಸಾ|| 4/8, 5 ನೇ ಮೇನ್, 18 ನೇ ಕ್ರಾಸ್, ಎನ್.ಎಸ್ ಪಾಳ್ಯ, ಬಿ.ಟಿ.ಎಮ್ 2 ನೇ ಸ್ಟೇಜ್, ಬೆಂಗಳೂರು ರವರು ದಿನಾಂಕ: 10-08-2021 ರಂದು 07-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಹೊನ್ನಾವರ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 28/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ವ್ಯಕ್ತಿ ಶ್ರೀ ರಮೇಶ ತಂದೆ ವೆಂಕಟಪ್ಪ ನಾಯ್ಕ, ಪ್ರಾಯ-42 ವರ್ಷ, ವೃತ್ತಿ-ಸೆಂಟ್ರಿಂಗ್ ಕೆಲಸ, ಸಾ|| ಹೆಗಡೆ ಹಿತ್ಲ, ಕರ್ಕಿ, ತಾ: ಹೊನ್ನಾವರ. ಪಿರ್ಯಾದುದಾರರ ಗಂಡನಾದ ಇವರು ದಿನಾಂಕ: 10-08-2021 ರಂದು ಬೆಳಿಗ್ಗೆ 09-00 ಗಂಟೆಯ ಸುಮಾರಿಗೆ ಹೊನ್ನಾವರ ಪ್ರಭಾತನಗರದ ಭಾಗೀರಥಿ ಷಣ್ಮುಖ ನಾಯ್ಕ, ಇವರ ಮನೆಯಲ್ಲಿ ಪರಂಜಿ ಹತ್ತಿ ಸೆಂಟ್ರಿಂಗ್ ಕೆಲಸ ಮಾಡುತ್ತಿರುವಾಗ ಆಕಸ್ಮಾತ್ ಆಗಿ ಕಾಲು ಜಾರಿ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ದಾಖಿಲಿಸಿದ್ದು, ಚಿಕಿತ್ಸೆಯಲ್ಲಿರುವಾಗ ಚಿಕಿತ್ಸೆ ಫಲಕಾರಿಯಾಗದೇ 18-00 ಗಂಟೆಯ ಸುಮಾರಿಗೆ ಆದರ್ಶ ಆಸ್ಪತ್ರೆ ಉಡುಪಿಯಲ್ಲಿ ಮೃತಪಟ್ಟಿದ್ದು, ಇದರ ಹೊರತು ತನ್ನ ಗಂಡನ ಸಾವಿನಲ್ಲಿ ಬೇರೇ ಯಾವುದೇ ಸಂಶಯ ಇರುವುದಿಲ್ಲ. ಈ ಕುರಿತು ಮುಂದಿನ ಕಾನೂನು ಕ್ರಮ ಜರುಗಿಸುವ ಕುರಿತು ಕೋರಿದ ಬಗ್ಗೆ ಪಿರ್ಯಾದಿ ಶ್ರೀಮತಿ ಸರೋಜಾ ಕೋಂ. ರಮೇಶ ನಾಯ್ಕ, ಪ್ರಾಯ-40 ವರ್ಷ, ವೃತ್ತಿ-ಗೃಹಿಣಿ, ಸಾ|| ಹೆಗಡೆ ಹಿತ್ಲ, ಕರ್ಕಿ, ತಾ: ಹೊನ್ನಾವರ ರವರು ದಿನಾಂಕ: 10-08-2021 ರಂದು 23-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

ಇತ್ತೀಚಿನ ನವೀಕರಣ​ : 11-08-2021 01:47 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080