ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 10-09-2021

at 00:00 hrs to 24:00 hrs

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 142/2021, ಕಲಂ: 279 ಐಪಿಸಿ ಹಾಗೂ ಕಲಂ: 187 ಎಮ್.ವಿ ಎಕ್ಟ್ ನೇದ್ದರ ವಿವರ...... ನಮೂದಿತ ಆರೋಪಿತನು ಯಾವುದೋ ಲಾರಿ ಚಾಲಕನಾಗಿದ್ದು, ಲಾರಿ ನಂಬರ್ ಹಾಗೂ ಚಾಲಕನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಈತನು ದಿನಾಂಕ: 04-09-2021 ರಂದು 02-30 ಗಂಟೆಗೆ ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಕ್ರಾಸ್ ಹತ್ತಿರ ಹಾದು ಹೋದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-63 ರಲ್ಲಿ  ತನ್ನ ಬಾಬ್ತು ಲಾರಿಯನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಅತೀವೇಗವಾಗಿ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದವನು, ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ಪಿರ್ಯಾದಿಯವರು ಚಲಾಯಿಸಿಕೊಂಡು ಹೋಗುತ್ತಿದ್ದ ಅವರಿಗೆ ಸೇರಿದ ಬೊಲೆರೋ ಪಿಕಪ್ ವಾಹನ ನಂ: ಕೆ.ಎ-20/ಎ.ಬಿ-0517 ನೇದಕ್ಕೆ ಡಿಕ್ಕಿ ಹೊಡೆದು ಅಪಘಾತ ಪಡಿಸಿ, ಪಿರ್ಯಾದಿಯವರ ವಾಹನವನ್ನು ಜಖಂಗೊಳಿಸಿದ್ದಲ್ಲದೇ, ಆರೋಪಿ ಚಾಲಕನು ತನ್ನ ಲಾರಿಯನ್ನು ನಿಲ್ಲಿಸದೇ ಚಲಾಯಿಸಿಕೊಂಡು ಹೋಗಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ಪ್ರವೀಣ ತಂದೆ ಹನುಮಂತಪ್ಪ ಹೆಬ್ಬಳ್ಳಿ, ಪ್ರಾಯ-25 ವರ್ಷ, ವೃತ್ತಿ-ಚಾಲಕ ಮತ್ತು ಮಾಲಿಕ, ಸಾ|| ಅಂಬಾಗಿಲು, ಪುತ್ತೂರ ಗ್ರಾಮ, ಉಡುಪಿ ರವರು ದಿನಾಂಕ: 10-09-2021 ರಂದು 11-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 146/2021, ಕಲಂ: ಮಹಿಳೆ ಕಾಣೆ ನೇದ್ದರ ವಿವರ...... ನಮೂದಿತ ಕಾಣೆಯಾದ ಮಹಿಳೆ ಕುಮಾರಿ: ಪ್ರಿಯಾಂಕಾ ತಂದೆ ಶಿವಾನಂದ ಭಡಂಗಿ, ಪ್ರಾಯ-18 ವರ್ಷ 09 ತಿಂಗಳು, ವೃತ್ತಿ-ವಿದ್ಯಾರ್ಥಿನಿ, ಸಾ|| ಬೆಳವಟಗಿ ಗ್ರಾಮ, ತಾ: ಹಳಿಯಾಳ. ಪಿರ್ಯಾದಿಯವರ ಮಗಳಾದ ಇವಳು ದಿನಾಂಕ: 07-09-2021 ರಂದು ಬೆಳಿಗ್ಗೆ 11-30 ಗಂಟೆಗೆ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ತಮ್ಮ ಮನೆಯಿಂದ ‘ತನ್ನ ದ್ವಿತೀಯ ಪಿ.ಯು.ಸಿ ಟಿ.ಸಿ ಕೊಡುತ್ತಿದ್ದಾರೆ. ತಾನು ಮುರ್ಕವಾಡ ಕಾಲೇಜಿಗೆ ಹೋಗಿ ಟಿ.ಸಿ ತೆಗೆದುಕೊಂಡು ಬರುತ್ತೇನೆ’ ಅಂತಾ ಹೋದವಳು, ಇಲ್ಲಿಯವರೆಗೆ ವಾಪಸ್ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾಳೆ. ಸದ್ರಿ ಕಾಣೆಯಾದ ತನ್ನ ಮಗಳನ್ನು ಹುಡುಕಿ ಕೊಡಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ಶಿವಾನಂದ ತಂದೆ ಯಲ್ಲಾರಿ ಭಡಂಗಿ, ಪ್ರಾಯ-45 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ಬೆಳವಟಗಿ, ತಾ: ಹಳಿಯಾಳ ರವರು ದಿನಾಂಕ: 10-09-2021 ರಂದು 11-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 10-09-2021

at 00:00 hrs to 24:00 hrs

 

ಪ್ರಕರಣಗಳು ದಾಖಲಾಗಿರುವುದಿಲ್ಲ....

 

======||||||||======

 


 

 

ಇತ್ತೀಚಿನ ನವೀಕರಣ​ : 11-09-2021 06:22 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080