ಅಭಿಪ್ರಾಯ / ಸಲಹೆಗಳು

 

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 12-08-2021

at 00:00 hrs to 24:00 hrs

 

ಪ್ರಕರಣಗಳು ದಾಖಲಾಗಿರುವುದಿಲ್ಲ....

 

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 12-08-2021

at 00:00 hrs to 24:00 hrs

 

ಅಂಕೋಲಾ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 44/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ವ್ಯಕ್ತಿ ಶ್ರೀ ಈಶ್ವರ ತಂದೆ ಮಂಕಾಳು ಗೌಡ, ಪ್ರಾಯ-40 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಮಾಧವ ನಗರ, ಕಂತ್ರಿ, ತಾ: ಅಂಕೋಲಾ. ಈತನು ಕೂಲಿ ಕೆಲಸ ಮಾಡಿಕೊಂಡಿದ್ದವನು, ದಿನಾಂಕ: 12-08-2021 ರಂದು 17-45 ಗಂಟೆಗೆ ಅಂಕೋಲಾ ತಾಲೂಕಿನ ಕಂತ್ರಿ ಮಾಧವ ನಗರದಲ್ಲಿರುವ ತಮ್ಮ ಮನೆಯ ಬಾಗಯತದಲ್ಲಿರುವ ತೆಂಗಿನಮರದ ಕಾಯಿಯನ್ನು ಕೊಯ್ಯಲು ಮರವನ್ನು ಹತ್ತುತ್ತಿರಬೇಕಾದರೆ ಆಕಸ್ಮಿಕವಾಗಿ ಕಾಲು ಜಾರಿ ಮರದ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡವನಿಗೆ ಉಪಚಾರದ ಕುರಿತು ಅಂಕೋಲಾದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿಂದ ಹೆಚ್ಚಿನ ಉಪಚಾರಕ್ಕೆ ಕಾರವಾರದ ಜಿಲ್ಲಾ ಆಸ್ರತೆಗೆ ಕರೆದುಕೊಂಡು ಹೋಗಿ ಉಪಚಾರಕ್ಕೆ ದಾಖಲಿಸಿದ್ದು, ಉಪಚಾರದಲ್ಲಿದ್ದಾಗ 22-30 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾನೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಂಡು ಮೃತದೇಹವನ್ನು ಬಿಟ್ಟುಕೊಡಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀಮತಿ ಶೋಭಾ ರವಿ ಗೌಡ, ಪ್ರಾಯ-35 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಮಾಧವ ನಗರ, ಕಂತ್ರಿ, ತಾ: ಅಂಕೋಲಾ ರವರು ದಿನಾಂಕ: 12-08-2021 ರಂದು 09-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 10/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ವ್ಯಕ್ತಿ ಶ್ರೀ ರಾಮಚಂದ್ರ ತಂದೆ ನಾಗೇಶ ನವಲೂರು, ಪ್ರಾಯ-78 ವರ್ಷ, ಸಾ|| ಗಂಧದ ಕಾಂಪ್ಲೆಕ್ಸ್, ಕಸ್ತೂರಬಾ ನಗರ, ತಾ: ಶಿರಸಿ. ಪಿರ್ಯಾದಿಯವರ ತಂದೆಯವರಾದ ಇವರು ಕಳೆದ 2 ವರ್ಷಗಳ ಹಿಂದೆ ಪಾರ್ಶ್ವವಾಯು ಪೀಡಿತರಾಗಿ ಗುಣಮುಖರಾದವರು, ಕಳೆದ 3 ತಿಂಗಳ ಹಿಂದೆ ಮನೆಯಲ್ಲಿ ಬಿದ್ದು ಎಡಗಾಲಿಗೆ ಗಾಯನೋವು ಪಡಿಸಿಕೊಂಡು ಚಿಕಿತ್ಸೆಯಲ್ಲಿದ್ದವರು, ಚಿಕಿತ್ಸೆಯಿಂದ ಬೇಸತ್ತು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ದಿನಾಂಕ: 12-08-2021 ರಂದು ಬೆಳಿಗ್ಗೆ 04-30 ಗಂಟೆಯಿಂದ 06-20 ಗಂಟೆಯ ನಡುವಿನ ಅವಧಿಯಲ್ಲಿ ಗಂಧದ ಕಾಂಪ್ಲೆಕ್ಸಿನಲ್ಲಿರುವ ಸಾರ್ವಜನಿಕ ಕುಡಿಯುವ ನೀರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಇದರ ಹೊರತು ಮೃತ ತನ್ನ ತಂದೆಯವರ ಮರಣದಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ ಎಂಬ ಬಗ್ಗೆ ಪಿರ್ಯಾದಿ ಶ್ರೀ ರಾಜು ತಂದೆ ರಾಮಚಂದ್ರ ನವಲೂರು, ಪ್ರಾಯ-42 ವರ್ಷ, ವೃತ್ತಿ-ಕಾರ್ಪೆಂಟರ್, ಸಾ|| ಗಂಧದ ಕಾಂಪ್ಲೆಕ್ಸ್, ಕಸ್ತೂರಬಾ ನಗರ, ತಾ: ಶಿರಸಿ ರವರು ದಿನಾಂಕ: 12-08-2021 ರಂದು 07-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

ಇತ್ತೀಚಿನ ನವೀಕರಣ​ : 13-08-2021 01:41 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080