ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 12-02-2021

at 00:00 hrs to 24:00 hrs

 

ಕಾರವಾರ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 29/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತರು 1]. ಮಹೇಶ ತಂದೆ ಸುರೇಶಪ್ಪ ವಡ್ಡರ್, ಪ್ರಾಯ-24 ವರ್ಷ, ವೃತ್ತಿ-ಅಂಗಡಿ ವ್ಯಾಪಾರ, ಸಾ|| ಕಾಟಿಗೇರಿ, ಕಿರವಾಡಿ, ತಾ: ಹಾನಗಲ್, ಜಿ: ಹಾವೇರಿ, ಹಾಲಿ ಸಾ|| ಹೈ ಚರ್ಚ್ ರೋಡ್, ಕಾರವಾರ, 2]. ಚಂದ್ರಹಾಸ ತಂದೆ ಮಂಜು ಗೌಡ, ಸಾ|| ಮಾವಿನಖರ್ವಾ, ತಾ: ಹೊನ್ನಾವರ, ಹಾಲಿ ಸಾ|| ವಿವೇಕಾನಂದ ನಗರ, ಕಾರವಾರ. ಈ ನಮೂದಿತ ಆರೋಪಿತರಲ್ಲಿ ಆರೋಪಿ 1 ನೇಯವನು ದಿನಾಂಕ: 11-02-2021 ರಂದು 14-00 ಗಂಟೆಗೆ ಕಾರವಾರದ  ಬಿ.ಎಸ್.ಎನ್.ಎಲ್ ಕಚೇರಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಆರೋಪಿ 2 ನೇಯವನು ತಿಳಿಸಿದಂತೆ ತಮ್ಮ ಲಾಭದ ಸಲುವಾಗಿ ಸಾರ್ವಜನಿಕರಿಗೆ 01/- ರೂಪಾಯಿಗೆ 80/- ರೂಪಾಯಿ ಕೊಡುವ ಷರತ್ತಿನ ಮೇಲೆ ಅದೃಷ್ಠದ ಅಂಕೆ-ಸಂಖ್ಯೆಗಳ ಮೇಲೆ ಪಂಥ ಕಟ್ಟಿ ಜನರಿಂದ ಹಣ ಪಡೆದು ಓ.ಸಿ ಮಟಕಾ ಜೂಜಾಟ ನಡೆಸುತ್ತಿರುವಾಗ ಪಿರ್ಯಾದಿಯವರು ದಾಳಿ ಮಾಡಿ ಆರೋಪಿ 1 ನೇಯವನನ್ನು ಹಾಗೂ ಜೂಜಾಟಕ್ಕೆ ಬಳಸಿದ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಸಂತೋಷ ಕುಮಾರ ಎಮ್, ಪಿ.ಎಸ್.ಐ, ಕಾರವಾರ ಶಹರ ಪೊಲೀಸ್ ಠಾಣೆ ರವರು ದಿನಾಂಕ: 12-02-2021 ರಂದು 18-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 23/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ನಟರಾಜ ತಂದೆ ಅನಂತ ನಾಯ್ಕ, ಪ್ರಾಯ-32 ವರ್ಷ, ವೃತ್ತಿ-ಪಾನಶಾಪ್ ಅಂಗಡಿ, ಸಾ|| ತಲಾಂದ, ಪೋ: ಮುಟ್ಟಳ್ಳಿ, ತಾ: ಭಟ್ಕಳ. ನಮೂದಿತ ಆರೋಪಿತನು ದಿನಾಂಕ: 12-02-2021 ರಂದು 10-00 ಗಂಟೆಯ ಸುಮಾರಿಗೆ ಭಟ್ಕಳದ ಹಳೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 1,640/- ರೂಪಾಯಿ ಮತ್ತು ಓ.ಸಿ ಜೂಗಾರಾಟದ ಸಲಕರಣೆ ಸಮೇತ ದಾಳಿಯ ಕಾಲಕ್ಕೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 12-02-2021 ರಂದು 11-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 24/2021, ಕಲಂ: 87 ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತರು 1]. ರವಿ ಸಾಣು ದೇವಾಡಿಗ, ಪ್ರಾಯ-27 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಕಾನಗೋಡ, ತಾ: ಯಲ್ಲಾಪುರ, 2]. ನಾಗರಾಜ ಶಂಕರ ಪಟಗಾರ, ಪ್ರಾಯ-28 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬುಗಡಿಸರ, ತಾ: ಯಲ್ಲಾಪುರ, 3]. ಗಜಾನನ ಚಂದ್ರು ಪೂಜಾರಿ, ಪ್ರಾಯ-23 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬೆಳ್ಳಂಬಿ, ತಾ: ಯಲ್ಲಾಪುರ, 4]. ಸುಬ್ರಹ್ಮಣ್ಯ ಶಂಕರ ಪಟಗಾರ, ಪ್ರಾಯ-28 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬುಗಡಿಸರ, ತಾ: ಯಲ್ಲಾಪುರ, 5]. ರಾಘವೇಂದ್ರ ನಾಗಪ್ಪ ಪಟಗಾರ, ಪ್ರಾಯ-37 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಕುಂದರ್ಗಿ, ತಾ: ಯಲ್ಲಾಪುರ, 6]. ಸುಬ್ರಾಯ ಗಣಪತಿ ನಾಯ್ಕ, ಪ್ರಾಯ-50 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಕನೇನಳ್ಳಿ, ತಾ: ಯಲ್ಲಾಪುರ. ಈ ನಮೂದಿತ ಆರೋಪಿತರೆಲ್ಲರೂ ಸೇರಿ ದಿನಾಂಕ; 11-02-2021 ರಂದು 16-45 ಗಂಟೆಗೆ ಯಲ್ಲಾಪುರ ತಾಲೂಕಿನ ಉಮ್ಮಚಗಿ ಕನೇನಳ್ಳಿ ಅರಣ್ಯದ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಲಾಭಕ್ಕೋಸ್ಕರ ಕೋಳಿಗಳ ಮೇಲೆ ಹಣವನ್ನು ಪಂಥವನ್ನಾಗಿ ಕಟ್ಟಿ ಜೂಜಾಟ ನಡೆಸಿರುವ ಮಾಹಿತಿ ಆಧರಿಸಿ ಪಿರ್ಯಾದಿಯವರು ಮತ್ತು ಸಿಬ್ಬಂದಿಯವರು ಪಂಚರೊಂದಿಗೆ ಸೇರಿ ದಾಳಿ ಮಾಡಿದಾಗ, ಆರೋಪಿ 1 ರಿಂದ 5 ನೇಯವರು ಅಕ್ರಮವಾಗಿ ಸಂಪಾದಿಸಿದ ನಗದು ಹಣ 1,650/- ರೂಪಾಯಿಗಳೊಂದಿಗೆ ಸಿಕ್ಕಿದ್ದಲ್ಲದೇ, ಆರೋಪಿ 6 ನೇಯವನು ಮತ್ತು ಇತರೆ ಆರೋಪಿತರ ಜೂಜಾಟಕ್ಕೆ ಬಳಸಿದ 2 ಹುಂಜಗಳು ಕಾಡಿನ ಪೊದೆಗಳಲ್ಲಿ ಹಾರಿ ಓಡಿ ಹೋದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಮಂಜುನಾಥ ಗೌಡರ್, ಪಿ.ಎಸ್.ಐ, ಯಲ್ಲಾಪುರ ಪೊಲೀಸ್ ಠಾಣೆ ರವರು ದಿನಾಂಕ: 12-02-2021 ರಂದು 23-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುಂಡಗೋಡ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 27/2021, ಕಲಂ: ಹೆಂಗಸು ಕಾಣೆ ನೇದ್ದರ ವಿವರ...... ನಮೂದಿತ ಕಾಣೆಯಾದ ಹೆಂಗಸು ಶ್ರೀಮತಿ ರಂಜಿತಾ ಕೋಂ. ಬಸವರಾಜ ವಡ್ಡರ್, ಪ್ರಾಯ-24 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಚಿಗಳ್ಳಿ, ತಾ: ಮುಂಡಗೋಡ, ಹಾಲಿ ಸಾ|| ಹನುಮಾಪುರ, ತಾ: ಮುಂಡಗೋಡ. ಪಿರ್ಯಾದಿಯ ಹೆಂಡತಿಯಾದ ಇವಳು ಮುಂಡಗೋಡದ ದವಾಖಾನೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ದಿನಾಂಕ: 27-01-2021 ರಂದು ಬೆಳಿಗ್ಗೆ 10-00 ಗಂಟೆಗೆ ಹನುಮಾಪುರದಿಂದ ಹೋದವಳು, ಇದುವರೆಗೂ ಮನೆಗೆ ಬಾರದೇ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಕಾಣೆಯಾಗಿರುತ್ತಾಳೆ. ಕಾರಣ ಅವಳು ಈವರೆಗೆ ಮನೆಗೆ ಬಾರದೇ ಇದ್ದುದರಿಂದ ಮತ್ತು ಅವಳ ಫೋನ್ ಸ್ವಿಚ್ ಆಫ್ ಅಂತಾ ಬರುತ್ತಿದ್ದರಿಂದ ಪಿರ್ಯಾದ ನೀಡಲು ವಿಳಂಬವಾಗಿರುತ್ತದೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ಬಸವರಾಜ ತಂದೆ ಹನುಮಂತಪ್ಪ ವಡ್ಡರ್, ಪ್ರಾಯ-32 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಚಿಗಳ್ಳಿ, ತಾ: ಮುಂಡಗೋಡ, ಹಾಲಿ ಸಾ|| ಹನುಮಾಪುರ, ತಾ: ಮುಂಡಗೋಡ ರವರು ದಿನಾಂಕ: 12-02-2021 ರಂದು 16-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 12-02-2021

at 00:00 hrs to 24:00 hrs

 

ದಾಂಡೇಲಿ ನಗರ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 05/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಧರ್ಮಾ ತಂದೆ ಕಾಡಪ್ಪ ಸೂರನಾಯಕ, ಪ್ರಾಯ-59 ವರ್ಷ, ವೃತ್ತಿ-ಚಾಲಕ, ಸಾ|| ಮೌಳಂಗಿ, ದಾಂಡೇಲಿ. ಸುದ್ದಿದಾರರ ತಂದೆಯವರಾದ ಇವರು ದಿನಾಂಕ: 12-02-2021 ರಂದು 15-45 ಗಂಟೆಯ ಸುಮಾರಿಗೆ ಮೃತಳ ಮಗಳಾದ ಸ್ವಾತಿ ಇವಳನ್ನು ದಾಂಡೇಲಿಯ ಡಿಗ್ರಿ ಕಾಲೇಜಿನಿಂದ ಕರೆದುಕೊಂಡು ಹೋಗಲು ಬಂದವರು, ದಾಂಡೇಲಿಯ ಡಿಗ್ರಿ ಕಾಲೇಜಿನ ಎದುರಿಗೆ ಇರುವ ಶಬಾನಾ ಸ್ಟೋರ್ ಮುಂದೆ ಆಕಸ್ಮಾತ್ ಆಗಿ ತಲೆ ತಿರುಗಿ ನೆಲಕ್ಕೆ ಬಿದ್ದು, ಮೂಗಿಗೆ ಬಾಯಿಗೆ ರಕ್ತಗಾಯವಾಗಿ ಚಿಕಿತ್ಸೆಗೆ ದಾಂಡೇಲಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿರುವಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದು, ಇದರ ಹೊರತು ಮೃತನ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ ಬಗ್ಗೆ ಪಿರ್ಯಾದಿ ಶ್ರೀಮತಿ ಪೂಜಾ ಕೋಂ. ಆನಂದ ಕಲಬಾವಿ, ಪ್ರಾಯ-23 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಮೌಳಂಗಿ, ದಾಂಡೇಲಿ ರವರು ದಿನಾಂಕ: 12-02-2021 ರಂದು 16-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಶಿರಸಿ ನಗರ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 02/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಪರಮೇಶ್ವರ ತಂದೆ ಭೀಮ್ಮಣ್ಣ ಭೋವಿ, ಪ್ರಾಯ-38 ವರ್ಷ, ವೃತ್ತಿ-ಕಾಂಟ್ರ್ಯಾಕ್ಟರ್, ಸಾ|| ರಾಜೀವನಗರ, ತಾ: ಶಿರಸಿ. ಈತನು ದಿನಾಂಕ: 12-02-2021 ರಂದು ಸಾಯಂಕಾಲ ಸರಾಯಿ ಕುಡಿದು ಬಂದವನು, ರಾತ್ರಿ 20-00 ಗಂಟೆಯ ಸುಮಾರಿಗೆ ತಮ್ಮ ಆರ್.ಸಿ.ಸಿ ಮನೆಯ ಮೇಲೆ ಮಲಗಿಕೊಂಡಿದ್ದವನು, 21-00 ಗಂಟೆಯ ಸುಮಾರಿಗೆ ಊಟ ಮಾಡಲು ಆರ್.ಸಿ.ಸಿ ಮೇಲಿನಿಂದ ಕೆಳಗೆ ಇಳಿಯುತ್ತಿರುವಾಗ ಸರಾಯಿ ಕುಡಿದ ನಶೆಯಲ್ಲಿ ಹಾಗೂ ನಿದ್ದೆಯ ಮಬ್ಬಿನಲ್ಲಿ ಜೋಲಿ ಹೊಡೆದು ಆರ್.ಸಿ.ಸಿ ಮನೆಯ ತಡೆಗೋಡೆಯ ಮೇಲೆ ಬಿದ್ದು, ತಡೆಗೋಡೆ ಮುರಿದು ತಡೆಗೋಡೆಯೊಂದಿಗೆ ಮನೆಯ ಮೇಲಿನಿಂದ ಕೆಳಗೆ ಬಿದ್ದು, ತಲೆಗೆ ಗಂಭೀರ ಸ್ವರೂಪದ ಗಾಯವಾದವನಿಗೆ ಚಿಕಿತ್ಸೆಯ ಕುರಿತು ಶಿರಸಿಯ ಟಿ.ಎಸ್.ಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗಮಧ್ಯದಲ್ಲಿ 22-10 ಗಂಟೆಯ ಪೂರ್ವದಲ್ಲಿ ಮೃತಪಟ್ಟ ಬಗ್ಗೆ ಪಿರ್ಯಾದಿ ಶ್ರೀಮತಿ ಅನುಷಾ ಕೋಂ. ಪರಮೇಶ್ವರ ಭೋವಿ, ಪ್ರಾಯ-28 ವರ್ಷ, ವೃತ್ತಿ-ಮನೆ ಕೆಲಸ, ಸಾ|| ರಾಜೀವನಗರ, ತಾ: ಶಿರಸಿ ರವರು ದಿನಾಂಕ: 12-02-2021 ರಂದು 01-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಹಳಿಯಾಳ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 04/2021, ಕಲಂ: 174 ಸಿ.ಆರ್.ಪಿ.ಸಿ  ನೇದ್ದರ ವಿವರ...... ಮೃತನಾದ ಶ್ರೀ ದೇಮಾಣಿ ತಂದೆ ಪಕೀರಪ್ಪ ಅರಶಿನಗೇರಿ, ಪ್ರಾಯ-23 ವರ್ಷ, ವೃತ್ತಿ-ಖಾಸಗಿ ಕೆಲಸ, ಸಾ|| ಕೆರವಾಡ ಗ್ರಾಮ, ತಾ: ಹಳಿಯಾಳ. ಪಿರ್ಯಾದಿಯ ಸಹೋದರನ ಮಗನಾದ ಈತನು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು, ದಿನಾಂಕ: 25-01-2021 ರಂದು ಬೆಳಿಗ್ಗೆ 10-00 ಗಂಟೆಯಿಂದ ರಾತ್ರಿ 08-00 ಗಂಟೆಯ ನಡುವಿನ ಅವಧಿಯಲ್ಲಿ ಯಾವುದೋ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡವನಿಗೆ ಹಳಿಯಾಳದ ಮೂಡಬಾಗಿಲ ಆಸ್ಪತ್ರೆ, ದಾಂಡೇಲಿಯ ಭಟ್ ಡಾಕ್ಟರ್ ಹಾಗೂ ಹುಬ್ಬಳ್ಳಿಯ ತತ್ವದರ್ಶಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದಾಗ ಉಪಚಾರ ಫಲಕಾರಿಯಾಗದೇ ದಿನಾಂಕ: 12-02-2021 ರಂದು ಬೆಳಗ್ಗೆ 06-00 ಗಂಟೆಗೆ ಮೃತಪಟ್ಟಿರುತ್ತಾನೆ. ಇದರ ಹೊರತು ಅವನ ಮರಣದಲ್ಲಿ ಬೇರೇ ಯಾವುದೇ ಸಂಶಯ ಇರುವುದಿಲ್ಲ ಎಂಬ ಬಗ್ಗೆ ಪಿರ್ಯಾದಿ ಶ್ರೀ ಪೀಶಪ್ಪ ತಂದೆ ದೇಮಣ್ಣಾ ಅರಶಿನಗೇರಿ, ಪ್ರಾಯ-60 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ಕೆರವಾಡ ಗ್ರಾಮ, ತಾ: ಹಳಿಯಾಳ ರವರು ದಿನಾಂಕ: 12-02-2021 ರಂದು 07-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

ಇತ್ತೀಚಿನ ನವೀಕರಣ​ : 13-02-2021 03:51 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080