ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 17-03-2021

at 00:00 hrs to 24:00 hrs

 

ಕಾರವಾರ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 40/2021, ಕಲಂ: 96(ಎ) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಜಗದೀಶ ತಂದೆ ದುರ್ಗಾ ನಾಯ್ಕ, ಪ್ರಾಯ-28 ವರ್ಷ, ವೃತ್ತಿ-ಪೇಂಟಿಂಗ್ ಕೆಲಸ, ಸಾ|| ಕೆ.ಇ.ಬಿ ರೋಡ್, ಕೋಣೆ, ಕಾರವಾರ. ನಮೂದಿತ ಆರೋಪಿತನು ದಿನಾಂಕ: 17-03-2021 ರಂದು 02-30 ಗಂಟೆಗೆ ತನ್ನ ಜೀವನೋಪಾಯಕ್ಕೆ ಯಾವುದೇ ಕಸಬು ಇಲ್ಲದೇ ಬೆಳಗಿನ ಜಾವದ ವೇಳೆಯಲ್ಲಿ ಯಾವುದೋ ಕಳುವಿನಂತಹ ಗುನ್ನೆ ಮಾಡುವ ಉದ್ದೇಶದಿಂದ ತನ್ನ ತಾಬಾದಲ್ಲಿ ಮೋಟಾರ್ ಸೈಕಲ್ ನಂ: ಕೆ.ಎ-30/ವಿ-2077 ನೇದನ್ನು ಇಟ್ಟುಕೊಂಡು ಅದರಲ್ಲಿ ಕಳುವು ಮಾಡಲು ಬಳಸುವಂಥಹ ಕಬ್ಬಿಣದ ಪಟ್ಟಿಯನ್ನು ಇಟ್ಟುಕೊಂಡು ತನ್ನ ಇರುವಿಕೆಯನ್ನು ಮರೆಮಾಚಿ ಅಡಗಿ ನಿಂತಿದ್ದು ಮತ್ತು ತನ್ನ ಇರುವಿಕೆಯ ಬಗ್ಗೆ ಯಾವುದೇ ಸಮರ್ಪಕ ಉತ್ತರ ಕೊಡದೇ ಸಂಶಯಾಸ್ಪದ ರೀತಿಯಲ್ಲಿ ಸಿಕ್ಕಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಸ್. ಬಿ. ಪೂಜಾರಿ, ಪಿ.ಎಸ್.ಐ (ಕಾ&ಸು-3), ಕಾರವಾರ ಶಹರ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 19-35 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಅಂಕೋಲಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 51/2021, ಕಲಂ: 325 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ಸಾಬೀರ್, ಸಾ|| ಕಾಕರಮಠ, ತಾ: ಅಂಕೋಲಾ, 2]. ಖಜರ್ ಅಕ್ಬರ್ ಶೇಖ್, ಸಾ|| ಕೋಟೆವಾಡ, ತಾ: ಅಂಕೋಲಾ. ದಿನಾಂಕ: 16-02-20201 ರಂದು ರಾತ್ರಿ 00-45 ಗಂಟೆಗೆ ಪಿರ್ಯಾದಿಯವರು ಅಂಕೋಲಾ ಶಹರದ ಜೈಹಿಂದ್ ಹೈಸ್ಕೂಲ್ ಪಕ್ಕದಲ್ಲಿರುವ ದರ್ಗಾದಲ್ಲಿ ಉರುಸ್ ಇದ್ದು, ಪಿರ್ಯಾದಿಯವರು ಮತ್ತು ಆತನ ಸ್ನೇಹಿತರೊಂದಿಗೆ ಉರುಸಿಗೆ ಬಂದಿದ್ದು, ನಂತರ ಗೋಬಿ ತಿನ್ನಲು ರಸ್ತೆಯ ಹತ್ತಿರ ಬಂದಾಗ ಜೋಳ ತಿನ್ನುತ್ತಿರಬೇಕಾದರೆ ನಮೂದಿತ ಆರೋಪಿತರು ಒಟ್ಟಾಗಿ ಬಂದು ಆರೋಪಿ 1 ನೇಯವನು ಪಿರ್ಯಾದಿಯವರಿಗೆ ಕೈಯಿಂದ ಕೆನ್ನೆಯ ಮೇಲೆ ಹೊಡೆದಿರುತ್ತಾನೆ. ನಂತರ ಆರೋಪಿ 2 ನೇಯವನು ಸಹ ಕೆನ್ನೆಯ ಮೇಲೆ ಹೊಡೆದಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ಪೈಜಾನ್ ತಂದೆ ಪೂರೋಜ್ ಶೇಕ್, ಪ್ರಾಯ-18 ವರ್ಷ, ವೃತ್ತಿ-ವಿದ್ಯಾರ್ಥಿ, ಸಾ|| ಪಳ್ಳಿಕೇರಿ, ತಾ: ಅಂಕೋಲಾ ರವರು ದಿನಾಂಕ: 17-03-2021 ರಂದು 19-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹೊನ್ನಾವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 81/2021, ಕಲಂ: 279, 337 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ವೈಭವ ತಂದೆ ವಿವೇಕ ವೆರ್ಣೇಕರ, ಪ್ರಾಯ-24 ವರ್ಷ, ಸಾ|| ಶಹಾಪುರ, ಬೆಳಗಾವಿ (ಕಾರ್ ನಂ: ಕೆ.ಎ-22/ಎನ್-7601 ನೇದರ ಚಾಲಕ). ನಮೂದಿತ ಆರೋಪಿತನು ದಿನಾಂಕ: 17-03-2021 ರಂದು ಮಧ್ಯಾಹ್ನ 03-30 ಗಂಟೆಗೆ ತಾನು ಚಲಾಯಿಸುತ್ತಿದ್ದ ಕಾರ್ ನಂ: ಕೆ.ಎ-22/ಎನ್-7601 ನೇದನ್ನು ಸಿದ್ದಾಪುರ ಕಡೆಯಿಂದ ಹೊನ್ನಾವರ ಕಡೆಗೆ ಅತೀವೇಗವಾಗಿ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದವನು, ಅತೀವೇಗದಲ್ಲಿದ್ದ ತನ್ನ ಕಾರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲಾಗದೇ ಚಂದಾವರ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಪಿರ್ಯಾದಿಗೆ ಬಲಬದಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿ, ಪಿರ್ಯಾದಿಯವರ ಹೊಟ್ಟೆಯ ಬಲಬದಿಗೆ, ಬಲಗೈಗೆ, ಎಡಗೈಗೆ ತೆರಚಿದ ಗಾಯವುಂಟಾಗಲು ಹಾಗೂ ಒಳ ನೋವುಂಟಾಗಲು ಕಾರಣನಾದ ಬಗ್ಗೆ ಪಿರ್ಯಾದಿ ಶ್ರೀ ಜಟ್ಟಿ ತಂದೆ ನಾರಾಯಣ ನಾಯ್ಕ, ಪ್ರಾಯ-63 ವರ್ಷ, ವೃತ್ತಿ-ನಿವೃತ್ತ ನೌಕರ, ಸಾ|| ಮಾಡಗೇರಿ, ತಾ: ಹೊನ್ನಾವರ ರವರು ದಿನಾಂಕ: 17-03-2021 ರಂದು 18-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮಂಕಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 44/2021, ಕಲಂ: 341, 323, 324, 109, 504, 506 ಸಹಿತ 149 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ಶ್ರೀಧರ ತಂದೆ ಮಂಜುನಾಥ ದೇವಾಡಿಗ, ಸಾ|| ಸಣ್ಣಬಲ್ಸೆ, ಬೈಲೂರು, ತಾ: ಭಟ್ಕಳ ಹಾಗೂ ಇನ್ನೂ ನಾಲ್ಕು ಜನರು (ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ). ಈ ನಮೂದಿತ ಆರೋಪಿತರು ದಿನಾಂಕ: 16-03-2021 ರಂದು 17-45 ಗಂಟೆಗೆ ಸೂಳೆಬೀಳು ಈಶ್ವರ ನಾಯ್ಕ, ಇವರ ಅಂಗಡಿಯ ಹತ್ತಿರ ಪಿರ್ಯಾದಿಯ ಜೊತೆ ಈ ಹಿಂದಿನಿಂದಲೂ ತಂಟೆ ತಕರಾರು ಮಾಡುತ್ತಾ ಪಿರ್ಯಾದಿಯ ಸಂಬಂಧಿಕರಲ್ಲಿ ಮತ್ತು ಪರಿಚಯಸ್ಥರಲ್ಲಿ ಪಿರ್ಯಾದಿಯನ್ನು ಉದ್ದೇಶಿಸಿ ‘ಅವನಿಗೆ ಬಿಡುವುದಿಲ್ಲ’ ಅಂತಾ ಹೇಳುತ್ತಾ ದ್ವೇಷದಿಂದ ಇದ್ದ ಆರೋಪಿತರೆಲ್ಲರೂ ಆರೋಪಿ 1 ನೇಯವನ ದುಷ್ಪ್ರೇರಣೆಯಿಂದ ನಾಲ್ಕು ಜನ ಆರೋಪಿತರು ಎರಡು ಮೋಟಾರ್ ಸೈಕಲಗಳ ಮೇಲೆ ಬಂದು ಪಿರ್ಯಾದಿಯ ಮೋಟಾರ್ ಸೈಕಲನ್ನು ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿ ತಡೆದು ನಿಲ್ಲಿಸಿ, ಪಿರ್ಯಾದಿಗೆ ಕೈಯಿಂದ ಹೊಡೆದು ಬೀಳಿಸಿ, ಕಾಲಿನಿಂದ ತುಳಿದು, ಕಲ್ಲಿನಿಂದ ಹಣೆಯ ಮೇಲೆ ಹೊಡೆದು ಗಾಯನೋವು ಪಡಿಸಿದ್ದಲ್ಲದೇ, ಜಗಳ ಬಿಡಿಸಲು ಬಂದ ಪಿರ್ಯಾದಿಯ ಜೊತೆಗೆ ಇದ್ದ ಗಣಪತಿ ಜಟ್ಟಪ್ಪ ನಾಯ್ಕ, ಇವರಿಗೆ ಮುಖದ ಮೇಲೆ ಕೈಯಿಂದ ಹೊಡೆದು ಗಾಯನೋವು ಪಡಿಸಿದ್ದಲ್ಲದೇ, ಪಿರ್ಯಾದಿಯನ್ನು ಉದ್ದೇಶಿಸಿ ‘ಇನ್ನೊಮ್ಮೆ ಆರೋಪಿ 1 ನೇಯವನ ಸುದ್ದಿಗೆ ಬಂದರೆ ನಿನಗೆ ಒಂದು ಗತಿ ಕಾಣಿಸುತ್ತೇವೆ’ ಅಂತಾ ಜೀವ ಬೆದರಿಕೆ ಹಾಕಿ ಹೋದ ಬಗ್ಗೆ ಪಿರ್ಯಾದಿ ಶ್ರೀ ದೇವಿದಾಸ ತಂದೆ ಮಂಜಪ್ಪ ನಾಯ್ಕ, ಪ್ರಾಯ-40 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ಕಾಸ್ಗೇರಿ, ಬೈಲೂರು, ತಾ: ಹೊನ್ನಾವರ ರವರು ದಿನಾಂಕ: 17-03-2021 ರಂದು 02-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುರ್ಡೇಶ್ವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 27/2021, ಕಲಂ: ಹುಡುಗಿ ಕಾಣೆ ನೇದ್ದರ ವಿವರ...... ನಮೂದಿತ ಕಾಣೆಯಾದ ಹುಡುಗಿ ಕುಮಾರಿ: ಶಾಫಿಯಾನಾಜ್ ತಂದೆ ಮಕ್ಬೂಲ್ ಹಸನ್ ತಮ್ಮು, ಪ್ರಾಯ-18 ವರ್ಷ, ವೃತ್ತಿ-ಮನೆ ಕೆಲಸ, ಸಾ|| ನ್ಯಾಶನಲ್ ಕಾಲೋನಿ, 1 ನೇ ಕ್ರಾಸ್, ನೂರು ಮಸೀದಿ ರಸ್ತೆ, ಮಾವಳ್ಳಿ-1, ಮುರ್ಡೇಶ್ವರ, ತಾ: ಭಟ್ಕಳ. ಪಿರ್ಯಾದುದಾರರ ತಮ್ಮನ ಮಗಳಾದ ಇವಳು ಚಿಕ್ಕವಳಿದ್ದಾಗಲೇ ತಂದೆ ತಾಯಿ ಮೃತಪಟ್ಟಿದ್ದು, ಅವಳನ್ನು ದೊಡ್ಡಪ್ಪನಾದ ಪಿರ್ಯಾದುದಾರರು ಪೋಷಿಸಿ ಬೆಳೆಸಿದ್ದು, ಶಾಫಿಯಾನಾಜ್ ಇವಳು ನ್ಯಾಶನಲ್ ಹೈಸ್ಕೂಲಿನಲ್ಲಿ ಎಸ್.ಎಸ್.ಎಲ್.ಸಿ ಯವರೆಗೆ ವ್ಯಾಸಂಗ ಮಾಡಿ ನಂತರ ಮನೆಯಲ್ಲಿಯೇ ಇದ್ದಳು. ಆಕೆಯ ಅಜ್ಜಿ ಮನೆ (ತಾಯಿಯ ತವರು ಮನೆ) ಹೊನ್ನಾವರ ತಾಲೂಕಿನ ರೋಶನ್ ಮೊಹಲ್ಲಾ ಆಗಿದ್ದು, ಆಗಾಗ ಅಜ್ಜಿ ಮನೆಗೆ ಹೋಗಿ ಬರುತ್ತಿದ್ದಳು. ಶಾಫಿಯಾನಾಜ್ ಇವಳು ಕಳೆದ 2 ತಿಂಗಳಿಂದ ಮೊಬೈಲ್ ಹೆಚ್ಚು ಬಳಕೆ ಮಾಡುತ್ತಿದ್ದರಿಂದ ಪಿರ್ಯಾದುದಾರರು ಅವಳಿಗೆ ಬುದ್ಧಿವಾದ ಹೇಳಿ ಅವಳ ಬಳಿ ಇದ್ದ ಮೊಬೈಲ್ ಸಿಮ್ ನಂ: 74113XXXXX, 95388XXXXX ನೇದನ್ನು ವಾಪಸ್ ತೆಗೆದುಕೊಂಡಿದ್ದು, ಮೊಬೈಲ್ ಮಾತ್ರ ಅವಳ ಬಳಿಯೇ ಇತ್ತು. ಹೀಗಿರುತ್ತಾ ದಿನಾಂಕ: 14-03-2021 ರಂದು ಮಧ್ಯಾಹ್ನ 12-00 ಗಂಟೆಯ ಸುಮಾರಿಗೆ ಶಾಫಿಯಾನಾಜ್ ಇವಳು ನ್ಯಾಶನಲ್ ಕಾಲೋನಿಯಲ್ಲಿರುವ ದೂರದ ಸಂಬಂಧಿ ‘ಶಿರೂರು ಜಾಫರ್ ಇವರ ಮಗನ ಮದುವೆಯ ಕಾರ್ಯಕ್ಕೆ ಹೋಗಿ ಬರುತ್ತೇನೆ’ ಅಂತಾ ಹೇಳಿ ಹೋದವಳು, ಮದುವೆ ಮನೆಗೆ ಹೋಗದೇ ಹಾಗೂ ವಾಪಸ್ ಮನೆಗೂ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾಳೆ. ಕಾರಣ ಕಾಣೆಯಾದ ಶಾಫಿಯಾನಾಜ್ ಇವಳನ್ನು ಹುಡುಕಿ ಕೊಡುವಂತೆ ಕೋರಿದ ಬಗ್ಗೆ ಪಿರ್ಯಾದಿ ಶ್ರೀ ಅಶ್ರಫ್ ತಂದೆ ಹಸನ್ ತಮ್ಮು ಪ್ರಾಯ-50 ವರ್ಷ, ವೃತ್ತಿ-ಮೀನುಗಾರಿಕೆ, ಸಾ|| ನ್ಯಾಶನಲ್ ಕಾಲೋನಿ 1 ನೇ ಕ್ರಾಸ್, ನೂರ್ ಮಸೀದಿ ರಸ್ತೆ, ಮಾವಳ್ಳಿ-1, ಮುರ್ಡೇಶ್ವರ, ತಾ: ಭಟ್ಕಳ ರವರು ದಿನಾಂಕ: 17-03-2021 ರಂದು 20-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುರ್ಡೇಶ್ವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 28/2021, ಕಲಂ: 87 ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತರು 1]. ಪಾಂಡು ತಂದೆ ವೆಂಕಟೇಶ ದೇವಾಡಿಗ, ಪ್ರಾಯ-35 ವರ್ಷ, ವೃತ್ತಿ-ವೆಲ್ಡಿಂಗ್ ಶಾಪ್, ಸಾ|| ಕೆಳಗಿನಮನೆ, ಕೊಟದಮಕ್ಕಿ ಮುರ್ಡೇಶ್ವರ, ತಾ: ಭಟ್ಕಳ, 2]. ಜಯಂತ ತಂದೆ ಸುಕ್ರಾ ದೇವಾಡಿಗ, ಪ್ರಾಯ-25 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಗಾಯಲಿಮನೆ, ಮಕ್ಕಿಗದ್ದೆ, ಮೇಲಿನಕಟ್ಟೆ, ತಾ: ಭಟ್ಕಳ, 3]. ರಘುನಾಥ ತಂದೆ ಸಾತ್ಯಾ ಭಂಡಾರಿ, ಪ್ರಾಯ-30 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಮಾವಿನಕಟ್ಟೆ, ಚಿಟ್ಟಿಹಕ್ಲು, ತಾ: ಭಟ್ಕಳ, 4]. ಗೋಯ್ದಾ ತಂದೆ ಕೋರ್ಗಾ ದೇವಾಡಿಗ, ಪ್ರಾಯ-35 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಗಿರಿನಮನೆ, ಹೆದ್ದಾರಿಮನೆ, ಕೋಕತಿ ರಸ್ತೆ, ತಾ: ಭಟ್ಕಳ, 5]. ಮೋಹನ ತಂದೆ ಸೋಮಯ್ಯ ದೇವಾಡಿಗ, ಪ್ರಾಯ-35 ವರ್ಷ, ವೃತ್ತಿ-ಕೂಲಿ ಕೆಲಸ. ಸಾ|| ಕೇಶು ಮನೆ, ಮಾವಿನಕಟ್ಟೆ, ಶಿರಾಲಿ, ತಾ: ಭಟ್ಕಳ. ಈ ನಮೂದಿತ ಆರೋಪಿತರು ದಿನಾಂಕ: 17-03-2021 ರಂದು ತಮ್ಮ ತಮ್ಮ ಲಾಭಕ್ಕೋಸ್ಕರ ಮಾವಿನಕಟ್ಟಾ ಚಿಟ್ಟಿಹಕ್ಲ ಕನ್ನಡ ಶಾಲೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಂಥವಾಗಿ ಕಟ್ಟಿ ಅಂದರ್-ಬಾಹರ್ ಜುಗಾರಾಟ ಆಡುತ್ತಿದ್ದಾಗ ಪಿರ್ಯಾದಿಯವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಸೇರಿ 18-35 ಗಂಟೆಗೆ ದಾಳಿ ಮಾಡಿ, ದಾಳಿಯ ಕಾಲಕ್ಕೆ 1). ನಗದು ಹಣ 2,520/- ರೂಪಾಯಿ, 2). ಇಸ್ಪೀಟ್ ಎಲೆಗಳು 52, 3). ಹಳೆಯ ಪಾಲಿಥಿನ್ ಚೀಲ-1. ಇವುಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರವೀಂದ್ರ ಬಿರಾದಾರ, ಪಿ.ಎಸ್.ಐ (ಕಾ&ಸು), ಮುರ್ಡೇಶ್ವರ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 20-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 43/2021, ಕಲಂ: 87 ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತರು 1]. ಸೂರಜ್ ತಂದೆ ಸುಭಾಷ ಬಾಂದೇಕರ್, ಪ್ರಾಯ-26 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಮಲ್ಲಾಪುರ, ಕೈಗಾವಾಡ, ಕಾರವಾರ, 2]. ತಿಮ್ಮಣ್ಣ ತಂದೆ ದಾಮು ತಳೇಕರ್, ಪ್ರಾಯ-39 ವರ್ಷ, ವೃತ್ತಿ-ಕೂಲಿ ಕೆಲಸ ಸಾ|| ಬಾಸಲ್ ಸೂಸೈಟಿ ಹತ್ತಿರ, ತಾ: ಯಲ್ಲಾಪುರ, 3]. ನಾರಾಯಣ ತಂದೆ ಪೀತಾಂಬರ ಗೌಡ, ಪ್ರಾಯ-38 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಹಿಲ್ಲೂರ, ತಾ: ಅಂಕೋಲಾ, 4]. ಮಹಾಬಲೇಶ್ವರ ತಂದೆ ಶಾತಾ ಕುಣಬಿ, ಪ್ರಾಯ-22 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬಾರೆ, ತಾ: ಯಲ್ಲಾಪುರ, 5]. ಆನಂತ ತಂದೆ ಗಣಪು ಗೌಡ, ಪ್ರಾಯ-32 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಮಾವಿನಮನೆ, ತಾ: ಯಲ್ಲಾಪುರ, 6]. ಮೋಹನ ತಂದೆ ಆನಂತ ಗೌಡ, ಪ್ರಾಯ-33 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಈರಾಪುರ, ತಾ: ಯಲ್ಲಾಪುರ. ಈ ನಮೂದಿತ ಆರೋಪಿತರೆಲ್ಲರೂ ಸೇರಿ ದಿನಾಂಕ: 17-03-2021 ರಂದು ಬೆಳಗಿನ ಜಾವ 04-00 ಗಂಟೆಯ ಸುಮಾರಿಗೆ ಯಲ್ಲಾಪುರ ತಾಲೂಕಿನ ಮಾವಿನಮನೆ ಚಾವಡಿ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಧಳದಲ್ಲಿ ಸಾರ್ವನಿಕ ರಸ್ತೆಯ ಮೇಲೆ ತಮ್ಮ ಲಾಭದ ಸಲುವಾಗಿ ಕುಟಿಕುಟಿ ಜೂಜಾಟ ಆಡುತ್ತಿದ್ದಾಗ, ನಗದು ಹಣ 4,180/- ರೂಪಾಯಿ ಮತ್ತು ಜೂಜಾಟದ ಸಲಕರಣೆಗಳೊಂದಿಗೆ 1). ಚಿತ್ರ ಇರುವ ಫ್ಲೆಕ್ಸ್-01, 2). ಸ್ಟೀಲ್ ಡಬ್ಬಿ-01, 3). ಚಿತ್ರ ಇರುವ ಮರದ ಗುಂಡುಗಳು-03, 4). ಮೇಣದ ಬತ್ತಿಯ ತುಂಡುಗಳು-02. ಇವುಗಳೊಂದಿಗೆ ಆರೋಪಿ 1 ರಿಂ 4 ನೇಯವರು ಸೆರೆ ಸಿಕ್ಕಿದ್ದು ಹಾಗೂ ಆರೋಪಿ 5 ಮತ್ತು 6 ನೇಯವರು ಓಡಿ ಹೋಗಿ ಪರಾರಿಯಾದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಮಂಜುನಾಥ ಗೌಡರ, ಪಿ.ಎಸ್.ಐ, ಯಲ್ಲಾಪುರ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 11-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 13/2021, ಕಲಂ: 8, 20(ಬಿ) ಎನ್.ಡಿ.ಪಿ.ಎಸ್ ಎಕ್ಟ್ ನೇದ್ದರ ವಿವರ...... ನಮೂದಿತ ಆರೋಪಿತ ಮೋತಿನ್ @ ಬಾಬು ತಂದೆ ಭೀಮರಾವ್ ಗಾಬ್ರೇಕರ್, ಪ್ರಾಯ-42 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಚರ್ಚ್ ಗಲ್ಲಿ, ಭಾಗವತಿ, ತಾ: ಹಳಿಯಾಳ. ನಮೂದಿತ ಆರೋಪಿತನು ದಿನಾಂಕ: 17-03-2021 ರಂದು 09-15 ಗಂಟೆಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯ ಜೋಯಿಡಾ ತಾಲೂಕಿನ ಜನತಾ ಕಾಲೋನಿಯ ಪಣಸೋಲಿ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದ ಮೇಲೆ ಗಾಂಜಾ ಮಾದಕ ವಸ್ತುವನ್ನು ಯಾವುದೇ ಪಾಸ್ ಯಾ ಪರ್ಮಿಟ್ ಇಲ್ಲದೇ ತನ್ನ ಲಾಭಕ್ಕೋಸ್ಕರ ಮಾರಾಟ ಮಾಡುತ್ತಿದ್ದಾಗ 274 ಗ್ರಾಂ ತೂಕದ ಒಣಗಿದ 24 ಗಾಂಜಾ ಮಾದಕ ಪದಾರ್ಥ ಇರುವ ಚೀಟುಗಳು (ಪಾಲಿಥಿನ್ ಕೈಚೀಲ ಸಮೇತ), ಅದರ ಅಂದಾಜು ಮೊತ್ತ 6,000/- ರೂಪಾಯಿ ಮತ್ತು ಗಾಂಜಾ ಮಾರಾಟದಿಂದ ಸಂಗ್ರಹಿಸಿದ ನಗದು ಹಣ 300/- ರೂಪಾಯಿಯೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಹಣಮಂತ ಎಸ್. ಬಿರಾದಾರ, ಪಿ.ಎಸ್.ಐ (ಕಾ&ಸು), ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 10-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 28/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ವೆಂಕಟೇಶ ತಂದೆ ಸುಭಾಷ ಗೌಳಿ, ಪ್ರಾಯ-37 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಹತ್ತಿರ, ಬಸವೇಶ್ವರ ನಗರ, ತಾ: ಶಿರಸಿ. ನಮೂದಿತ ಆರೋಪಿತನು ದಿನಾಂಕ: 17-03-2021 ರಂದು 12-00 ಗಂಟೆಗೆ ಶಿರಸಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಎದುರಿನ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ ಅದೃಷ್ಟದ ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥವಾಗಿ ಕಟ್ಟಿದರೆ 01/- ರೂಪಾಯಿಗೆ 80/- ರೂಪಾಯಿ ಹಣವನ್ನು ಕೊಡುತ್ತೇನೆ ಅಂತಾ ಹೇಳಿ ಜನರಿಗೆ ಕರೆದು ಜನರಿಂದ ಹಣವನ್ನು ಅದೃಷ್ಟದ ಅಂಕೆ-ಸಂಖ್ಯೆಗಳ ಪಂಥವಾಗಿ ಕಟ್ಟಿಸಿಕೊಂಡು ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿರುವಾಗ ಪಿರ್ಯಾದಿಯವರು ಪಂಚರು ಮತ್ತು ಸಿಬ್ಬಂದಿಗಳೊಂದಿಗೆ ಸೇರಿ ದಾಳಿ ನಡೆಸಿದಾಗ ಓ.ಸಿ ಮಟಕಾ ಜೂಗಾರಾಟದಿಂದ ಸಂಗ್ರಹವಾದ ನಗದು ಹಣ 1,340/- ರೂಪಾಯಿ ಹಾಗೂ ಓ.ಸಿ ಜೂಗರಾಟಕ್ಕೆ ಬಳಸಿದ ಅಂಕೆ-ಸಂಖ್ಯೆ ಬರೆದ ಚೀಟಿ-01, ಅ||ಕಿ|| 00.00/- ರೂಪಾಯಿ ಮತ್ತು ಬಾಲ್ ಪೆನ್-01, ಅ||ಕಿ|| 00.00/- ರೂಪಾಯಿಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ನಾಗಪ್ಪ, ಪಿ.ಎಸ್.ಐ, ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 16-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಮುಂಡಗೋಡ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 41/2021, ಕಲಂ: 379 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರಾದ ಯಾರೋ ಕಳ್ಳರು ದಿನಾಂಕ: 11-11-2020 ರಂದು ಮಧ್ಯಾಹ್ನ 04-30 ಗಂಟೆಯಿಂದ ಸಂಜೆ 05-30 ಗಂಟೆಯ ನಡುವಿನ ಅವಧಿಯಲ್ಲಿ ಪಿರ್ಯಾದಿಯವರ ಜಮೀನಿನ ಹತ್ತಿರ ಇರುವ ಬೇಣದಲ್ಲಿ ಮೇಯಲು ಬಿಟ್ಟಿದ್ದ ಪಿರ್ಯಾದಿಯ ಬಾಬ್ತು ಅದರ ಅ||ಕಿ|| 35,000/- ರೂಪಾಯಿ ಮೌಲ್ಯದ ಕಂದು ಬಣ್ಣದ 08 ವರ್ಷ ಪ್ರಾಯದ ಆಕಳನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪಿರ್ಯಾದಿ ಶ್ರೀಮತಿ ಶಾರದಾ ಕೋಂ. ನಾಗರಾಜ ದೇವಾಡಿಗ, ಪ್ರಾಯ-35 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಅಮಟಗಾರ, ತಾ: ಮುಂಡಗೋಡ ರವರು ದಿನಾಂಕ: 17-03-2021 ರಂದು 14-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 59/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಪ್ರಮೋದ ತಂದೆ ರಾಜಶೇಖರಪ್ಪ ವಡಗೇರಿ, ಪ್ರಾಯ-45 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ದೇಶಪಾಂಡೆ ನಗರ, ಹಳಿಯಾಳ ಶಹರ. ನಮೂದಿತ ಆರೋಪಿತನು ದಿನಾಂಕ: 17-03-2021 ರಂದು 13-50 ಗಂಟೆಗೆ ಹಳಿಯಾಳ ಶಹರದ ದೇಶಪಾಂಡೆ ನಗರ ಕರೆಮ್ಮಾ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ತನ್ನ ಅಕ್ರಮ ಲಾಭಕ್ಕೋಸ್ಕರ ಬರ-ಹೋಗುವ ಜನರನ್ನು ಕರೆದು, ಸಂಖ್ಯೆಗಳ ಮೇಲೆ ಹಣ ಪಂಥ ಕಟ್ಟಿರಿ, ಅದೃಷ್ಟ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುತ್ತೇನೆ ಅಂತಾ ಹೇಳಿ ಆಸೆ ಆಮಿಷ ತೋರಿಸಿ ಕೂಗಿ ಕರೆದು, ಬಂದಂತಹ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳನ್ನು ಚೀಟಿಯಲ್ಲಿ ಬರೆದುಕೊಂಡು ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿದ್ದಾಗ ದಾಳಿಯ ಕಾಲಕ್ಕೆ ಓ.ಸಿ ಮಟಕಾ ಜೂಗಾರಾಟದ ನಗದು ಹಣ 780/- ರೂಪಾಯಿ ಮತ್ತು ಜೂಗಾರಾಟದ ಸಾಮಗ್ರಿಗಳಾದ 1). ಓ.ಸಿ ಅಂಕೆ-ಸಂಖ್ಯೆ ಬರೆದ ಚೀಟಿ-1, 2). ಬಾಲ್ ಪೆನ್-01 ಇವುಗಳೊಂದಿಗೆ ಆರೋಪಿತನು ಸೆರೆ ಸಿಕ್ಕಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಯಲ್ಲಾಲಿಂಗ ಕುನ್ನೂರ, ಪಿ.ಎಸ್.ಐ (ಎಲ್&ಓ), ಹಳಿಯಾಳ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 15-20 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 60/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಮತ್ತಯ್ಯ ತಂದೆ ದಾನೇಲ್ ಮಾದರ, ಪ್ರಾಯ-50 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಇಂದಿರಾ ನಗರ, ಹಳಿಯಾಳ ಶಹರ. ನಮೂದಿತ ಆರೋಪಿತನು ದಿನಾಂಕ: 17-03-2021 ರಂದು 16-20 ಗಂಟೆಗೆ ಹಳಿಯಾಳ ಶಹರದ ಬಸವೇಶ್ವರ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ತನ್ನ ಅಕ್ರಮ ಲಾಭಕ್ಕೋಸ್ಕರ ಬರ-ಹೋಗುವ ಜನರನ್ನು ಕರೆದು, ಸಂಖ್ಯೆಗಳ ಮೇಲೆ ಹಣ ಪಂಥ ಕಟ್ಟಿರಿ, ಅದೃಷ್ಟ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುತ್ತೇನೆ ಅಂತಾ ಹೇಳಿ ಆಸೆ ಆಮಿಷ ತೋರಿಸಿ ಕೂಗಿ ಕರೆದು, ಬಂದಂತಹ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳನ್ನು ಚೀಟಿಯಲ್ಲಿ ಬರೆದುಕೊಂಡು ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿದ್ದಾಗ ದಾಳಿಯ ಕಾಲಕ್ಕೆ ಓ.ಸಿ ಮಟಕಾ ಜೂಗಾರಾಟದ ನಗದು ಹಣ 350/- ರೂಪಾಯಿ ಮತ್ತು ಜೂಗಾರಾಟದ ಸಾಮಗ್ರಿಗಳಾದ 1). ಓ.ಸಿ ಅಂಕೆ-ಸಂಖ್ಯೆ ಬರೆದ ಚೀಟಿ-1, 2). ಬಾಲ್ ಪೆನ್-01 ಇವುಗಳೊಂದಿಗೆ ಆರೋಪಿತನು ಸೆರೆ ಸಿಕ್ಕಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಯಲ್ಲಾಲಿಂಗ ಕುನ್ನೂರ, ಪಿ.ಎಸ್.ಐ (ಎಲ್&ಓ), ಹಳಿಯಾಳ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 18-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 61/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಶಂಕರ ತಂದೆ ಬಸಪ್ಪಾ ಚಲವಾದಿ, ಪ್ರಾಯ-53 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಯಲ್ಲಾಪುರ ನಾಕಾ, ತಾ: ಹಳಿಯಾಳ. ನಮೂದಿತ ಆರೋಪಿತನು ದಿನಾಂಕ: 17-03-2021 ರಂದು 17-45 ಗಂಟೆಗೆ ಹಳಿಯಾಳ ಶಹರದ ಯಲ್ಲಾಪುರ ನಾಕಾ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ಬರ-ಹೋಗುವ ಜನರಿಗೆ ಕರೆದು ಅದೃಷ್ಟ ಸಂಖ್ಯೆಗಳ ಮೇಲೆ ಹಣ ಪಂಥ ಕಟ್ಟಿರಿ. ಅದೃಷ್ಟದ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುತ್ತೇನೆ ಅಂತಾ ಜನರ ಮನವೊಲಿಸಿ ಅವರಿಂದ ಹಣ ಪಡೆದು, ಓ.ಸಿ ಮಟಕಾ ಜೂಗಾರಾಟದ ಮೇಲೆ ಹಣ ಪಂಥ ಕಟ್ಟಿಸಿಕೊಳ್ಳುತ್ತಿದ್ದಾಗ, ದಾಳಿಯ ಕಾಲಕ್ಕೆ 1). ನಗದು ಹಣ 475/- ರೂಪಾಯಿ, 2). ಓ.ಸಿ ಅಂಕೆ-ಸಂಖ್ಯೆ ಬರೆದ ಚೀಟಿ-1, ಅ||ಕಿ|| 00.00/- ರೂಪಾಯಿ, 3). ಬಾಲ್ ಪೆನ್-01, ಅ||ಕಿ|| 00.00/- ರೂಪಾಯಿ. ಇವುಗಳೊಂದಿಗೆ ಸೆರೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರಾಜಕುಮಾರ, ಪಿ.ಎಸ್.ಐ (ಕ್ರೈಂ), ಹಳಿಯಾಳ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 19-10 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 62/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಶ್ರೀಕಾಂತ ತಂದೆ ಬಾಬು ಬೋಬಾಟಿ, ಪ್ರಾಯ-54 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ದುಸಗಿ, ತಾ: ಹಳಿಯಾಳ. ನಮೂದಿತ ಆರೋಪಿತನು ದಿನಾಂಕ: 17-03-2021 ರಂದು 19-45 ಗಂಟೆಗೆ ಹಳಿಯಾಳ ತಾಲೂಕಿನ ದುಸಗಿ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ಬರ-ಹೋಗುವ ಜನರಿಗೆ ಕರೆದು ಅದೃಷ್ಟ ಸಂಖ್ಯೆಗಳ ಮೇಲೆ ಹಣ ಪಂಥ ಕಟ್ಟಿರಿ. ಅದೃಷ್ಟ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುತ್ತೇನೆ ಅಂತಾ ಜನರ ಮನವೊಲಿಸಿ ಅವರಿಂದ ಹಣ ಪಡೆದು, ಓ.ಸಿ ಮಟಕಾ ಜೂಗಾರಾಟದ ಮೇಲೆ ಹಣ ಪಂಥ ಕಟ್ಟಿಸಿಕೊಳ್ಳುತ್ತಿದ್ದಾಗ, ದಾಳಿಯ ಕಾಲಕ್ಕೆ 1). ನಗದು ಹಣ 705/- ರೂಪಾಯಿ, 2). ಓ.ಸಿ ಅಂಕೆ-ಸಂಖ್ಯೆ ಬರೆದ ಚೀಟಿ-1, ಅ||ಕಿ|| 00.00/- ರೂಪಾಯಿ, 3). ಬಾಲ್ ಪೆನ್-01, ಅ||ಕಿ|| 00.00/- ರೂಪಾಯಿ. ಇವುಗಳೊಂದಿಗೆ ಸೆರೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರಾಜಕುಮಾರ, ಪಿ.ಎಸ್.ಐ (ಕ್ರೈಂ), ಹಳಿಯಾಳ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 21-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ರಾಮನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 25/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಜೋಯ್ ತಂದೆ ಸಿ. ವಿ. ವರ್ಗಿಸ್, ಪ್ರಾಯ-67 ವರ್ಷ, ವೃತ್ತಿ-ವ್ಯಾಪಾರ, ಸಾ|| ಬಸ್ ನಿಲ್ದಾಣದ ಹತ್ತಿರ, ಗಣೇಶಗುಡಿ, ತಾ: ಜೋಯಿಡಾ. ನಮೂದಿತ ಆರೋಪಿತನು ಗಣೇಶಗುಡಿಯ ಬಸ್ ನಿಲ್ದಾಣದ ಒಂದು ಮೂಲೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ತನ್ನ ಲಾಭಕ್ಕಾಗಿ ಓ.ಸಿ ಮಟಕಾ ಜೂಗಾರಾಟದ ಬಗ್ಗೆ ಜನರಿಗೆ ಆಸೆ ತೋರಿಸಿ ಅವರಿಂದ ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥವಾಗಿ ಕಟ್ಟಿಸಿಕೊಂಡು ಓಸಿ ಮಟಕಾ ಎಂಬ ಜೂಗಾರಾಟ ಆಡಿಸುತ್ತಿರುವಾಗ ದಿನಾಂಕ: 17-03-2021 ರಂದು 15-40 ಗಂಟೆಗೆ ಪಿರ್ಯಾದಿಯವರು ದಾಳಿ ಮಾಡಿದಾಗ ಸದ್ರಿಯವನ ತಾಬಾದಲ್ಲಿ ನಗದು ಹಣ 3,170/- ರೂಪಾಯಿ ಮತ್ತು ಓ.ಸಿ ಮಟಕಾ ಚೀಟಿ-01 ಹಾಗೂ ಬಾಲ್ ಪೆನ್-01 ನೇದವುಗಳೊಂದಿಗೆ ಸೆರೆ ಸಿಕ್ಕಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಬಿ. ಬಿ. ಕಾಳೆ, ಎ.ಎಸ್.ಐ, ರಾಮನಗರ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 17-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ರಾಮನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 26/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಸಲೀಂ ತಂದೆ ಅಬ್ದುಲ್ ಮಜೀದ್ ನಾಯಿಕ, ಪ್ರಾಯ-50 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ನವಗ್ರಾಮ ಕಾಲೋನಿ, ಸೀತಾವಾಡಾ, ರಾಮನಗರ, ತಾ: ಜೋಯಿಡಾ. ನಮೂದಿತ ಆರೋಪಿತನು ರಾಮನಗರದ ಚರ್ಚ್ ಹತ್ತಿರ ನಿಂತುಕೊಂಡು ತನ್ನ ಲಾಭಕ್ಕಾಗಿ ಓ.ಸಿ ಮಟಕಾ ಎಂಬ ಜೂಗಾರಾಟದ ಬಗ್ಗೆ ಜನರಿಗೆ ಆಸೆ ತೋರಿಸಿ, ಅವರಿಂದ ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥವಾಗಿ ಕಟ್ಟಿಸಿಕೊಂಡು ಓ.ಸಿ ಮಟಕಾ ಎಂಬ ಜೂಗಾರಾಟ ಆಡಿಸುತ್ತಿರುವಾಗ ದಿನಾಂಕ: 17-03-2021 ರಂದು 16-25 ಗಂಟೆಗೆ ಪಿರ್ಯಾದಿಯವರು ದಾಳಿ ಮಾಡಿದಾಗ ಸದ್ರಿಯವನ ತಾಬಾದಲ್ಲಿ ನಗದು ಹಣ 1,270/- ರೂಪಾಯಿ ಮತ್ತು ಓ.ಸಿ ಮಟಕಾ ಚೀಟಿ-01 ಹಾಗೂ ಬಾಲ್ ಪೆನ್-01 ನೇದವುಗಳೊಂದಿಗೆ ಸೆರೆ ಸಿಕ್ಕಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಬಿ. ಎಸ್. ನಾಯಕ, ಎ.ಎಸ್.ಐ, ರಾಮನಗರ ಪೊಲೀಸ್ ಠಾಣೆರವರು ದಿನಾಂಕ: 17-03-2021 ರಂದು 17-40 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ರಾಮನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 27/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಮಂಜುನಾಥ ತಂದೆ ಆತ್ಮಾರಾಮ ನಾರ್ವೇಕರ, ಪ್ರಾಯ-34 ವರ್ಷ, ವೃತ್ತಿ-ವ್ಯಾಪಾರ, ಸಾ|| ಹೈಸ್ಕೂಲ್ ಹತ್ತಿರ, ಜಗಲಬೇಟ, ತಾ: ಜೋಯಿಡಾ. ನಮೂದಿತ ಆರೋಪಿತನು ಜಗಲಬೇಟ ಮಾರುತಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ತನ್ನ ಲಾಭಕ್ಕಾಗಿ ಓ.ಸಿ ಮಟಕಾ ಎಂಬ ಜೂಗಾರಾಟದ ಬಗ್ಗೆ ಜನರಿಗೆ ಆಸೆ ತೋರಿಸಿ ಅವರಿಂದ ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥವಾಗಿ ಕಟ್ಟಿಸಿಕೊಂಡು ಓ.ಸಿ ಮಟಕಾ ಎಂಬ ಜೂಗಾರ ಆಟ ಆಡಿಸುತ್ತಿರುವಾಗ ದಿನಾಂಕ: 17-03-2021 ರಂದು 16-15 ಗಂಟೆಗೆ ಪಿರ್ಯಾದಿಯವರು ದಾಳಿ ಮಾಡಿದಾಗ ಸದ್ರಿಯವನ ತಾಬಾದಲ್ಲಿ ನಗದು ಹಣ 1,850/- ರೂಪಾಯಿ ಮತ್ತು ಓ.ಸಿ ಮಟಕಾ ಚೀಟಿ-01 ಹಾಗೂ ಬಾಲ್ ಪೆನ್-01 ನೇದವುಗಳೊಂದಿಗೆ ಸೆರೆ ಸಿಕ್ಕಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಕಿರಣ ಬಿ. ಪಾಟೀಲ, ಪಿ.ಎಸ್.ಐ (ಕಾ&ಸು), ರಾಮನಗರ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 18-40 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ರಾಮನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 28/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ವೈಜನಾಥ ತಂದೆ ವಿಠೋಬಾ ಬೆಣಕಿ, ಪ್ರಾಯ-54 ವರ್ಷ, ವೃತ್ತಿ-ವ್ಯಾಪಾರ, ಸಾ|| ಜನತಾ ಪ್ಲಾಟ್, ಜಗಲಬೇಟ, ತಾ: ಜೋಯಿಡಾ. ನಮೂದಿತ ಆರೋಪಿತನು ಜಗಲಬೇಟದ ದನದ ಆಸ್ಪತ್ರೆ ಹತ್ತಿರದ ಮಾರ್ಕೆಟ್ ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ತನ್ನ ಲಾಭಕ್ಕಾಗಿ ಓ.ಸಿ ಮಟಕಾ ಎಂಬ ಜೂಗಾರಾಟದ ಬಗ್ಗೆ ಜನರಿಗೆ ಆಸೆ ತೋರಿಸಿ ಅವರಿಂದ ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥವಾಗಿ ಕಟ್ಟಿಸಿಕೊಂಡು ಓ.ಸಿ ಮಟಕಾ ಎಂಬ ಜೂಗಾರಾಟ ಆಡಿಸುತ್ತಿರುವಾಗ ದಿನಾಂಕ: 17-03-2021 ರಂದು 17-20 ಗಂಟೆಗೆ ಪಿರ್ಯಾದಿಯವರು ದಾಳಿ ಮಾಡಿದಾಗ ಸದ್ರಿಯವನ ತಾಬಾದಲ್ಲಿ ನಗದು ಹಣ 2,050/- ರೂಪಾಯಿ ಮತ್ತು ಓ.ಸಿ ಮಟಕಾ ಚೀಟಿ-01 ಹಾಗೂ ಬಾಲ್ ಪೆನ್-01 ನೇದವುಗಳೊಂದಿಗೆ ಸೆರೆ ಸಿಕ್ಕಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಕಿರಣ ಬಿ. ಪಾಟೀಲ, ಪಿ.ಎಸ್.ಐ.(ಕಾ&ಸು), ರಾಮನಗರ ಪೊಲೀಸ್ ಠಾಣೆ ರವರು ದಿನಾಂಕ: 17-03-2021 ರಂದು 19-10 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 17-03-2021

at 00:00 hrs to 24:00 hrs

 

ಚಿತ್ತಾಕುಲಾ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 04/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಸುಧಾಕರ ತಂದೆ ಕುಶಾಲಿ ನಾಯ್ಕ, ಪ್ರಾಯ-55 ವರ್ಷ, ವೃತ್ತಿ-ತೆಂಗಿನ ಮರ ಹತ್ತುವ ಕೆಲಸ, ಸಾ|| ಅರವ, ತೋರ್ಲೆಭಾಗ, ಹೊಸಾಳಿ, ಕಾರವಾರ. ಪಿರ್ಯಾಧಿಯ ಸಂಬಂದಿಯಾದ ಈತನು ತೆಂಗಿನಮರ ಹತ್ತಿ ಕಾಯಿ ತೆಗೆಯುವ ಕೆಲಸ ಮಾಡಿಕೊಂಡಿದ್ದವನು, ದಿನಾಂಕ: 15-03-2021 ರಂದು ಸಾಯಂಕಾಲ ತನ್ನ ಮನೆಯ ಬಾಗಾಯತದಲ್ಲಿರುವ ತೆಂಗಿನಮರ ಹತ್ತಿ ಕಾಯಿ ತೆಗೆದು ನಂತರ ಕೆಳಗೆ ಇಳಿಯುತ್ತಿರುವಾಗ ಆಕಸ್ಮಿಕವಾಗಿ ಆಯ ತಪ್ಪಿ ಕೆಳಗಡೆ ಬಿದ್ದು, ಎದೆಯ ಹಾಗೂ ಬೆನ್ನಿನ ಭಾಗದಲ್ಲಿ ಒಳ ಗಾಯವಾಗಿದ್ದವನಿಗೆ, ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಕಾರವಾರದಲ್ಲಿ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೆನಪೋಯಾ ಆಸ್ಪತ್ರೆ, ದೇರಳಕಟ್ಟೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದು ಇರುತ್ತದೆ, ಸುಧಾಕರ ಈತನು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 17-03-2021 ರಂದು 04-30 ಘಂಟೆಗೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದು, ಇದರ ಹೊರತು ಅವನ ಮರಣದಲ್ಲಿ ಬೇರೇ ಯಾವುದೇ ಸಂಶಯವಿರುವುದಿಲ್ಲ. ಈ ಕುರಿತು ಮುಂದಿನ ಕಾನೂನು ಕ್ರಮ ಜರುಗಿಸಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ಮಾರುತಿ ತಂದೆ ಬಾಲಚಂದ್ರ ನಾಯ್ಕ, ಪ್ರಾಯ-60 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ಅರವ, ತೋರ್ಲೆಭಾಗ, ಸದಾಶಿವಗಡ, ಕಾರವಾರ ರವರು ದಿನಾಂಕ: 17-03-2021 ರಂದು 13-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಸಿದ್ದಾಪುರ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 13/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಈರಪ್ಪ ತಂದೆ ವಿರುಪಾಕ್ಷಪ್ಪ ಚಕ್ರಸಾಲಿ, ಪ್ರಾಯ-34 ವರ್ಷ, ವೃತ್ತಿ-ಚಾಲಕ, ಸಾ|| ಕಾನಗೋಡ, ತಾ: ಸಿದ್ದಾಪುರ. ಪಿರ್ಯಾದಿಯ ತಮ್ಮನಾದ ಈತನು ಸಂಸಾರಿಕ ಜೀವನದಲ್ಲಿ ಬಿರುಕು ಆಗಿ ಡೈವೋರ್ಸ್ ಆಗಿದ್ದರಿಂದ ಸಂಸಾರಿಕ ಜೀವನದ ವೈಫಲ್ಯದಿಂದ ಬೇಸತ್ತು ವಿಪರೀತ ಸರಾಯಿ ಕುಡಿಯುತ್ತಿದ್ದವನು, ಅನಾರೋಗ್ಯಕ್ಕೆ ತುತ್ತಾಗಿ ದಿನಾಂಕ: 12-03-2021 ರಂದು ಸಿದ್ದಾಪುರದ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಿದ್ದು, ವೈದ್ಯರು ಅವನ ಚಿಕಿತ್ಸಾ ಹಾಳೆಯಲ್ಲಿ ಒಂದು ವಾರದಿಂದ ರಕ್ತ ಮಿಶ್ರಿತ ವಾಂತಿ ಆಗುತ್ತಿರುವ ಬಗ್ಗೆಯೂ ತಜ್ಞ ವೈದ್ಯರಿಂದ ಪರೀಕ್ಷಿಸಿಕೊಳ್ಳುವಂತೆಯೂ ನಮೂದಿಸಿ, ಔಷಧೋಪಚಾರ ನೀಡಿ ಕಳಿಸಿದ್ದು, ದಿನಾಂಕ: 12-03-2021 ರಂದು ಸಂಜೆ ಡಿಸ್ಚಾರ್ಜ್ ಆಗಿ ಆಸ್ಪತ್ರೆಯಿಂದ ಮನೆಗೆ ಬಂದವನು, ದಿನಾಂಕ: 13-03-2021 ರಂದು ರಾತ್ರಿ 02-00 ಗಂಟೆಯ ಸುಮಾರಿಗೆ ಅವನ ಮನೆಯ ಹತ್ತಿರ ರಾಮ ಮಡಿವಾಳ ಎನ್ನುವರ ಮನೆಗೆ ಹೋಗಿ ವಿಮಲ್ ಕೊಡುವಂತೆ ಸತಾಯಿಸಿದ್ದು, ರಾಮ ಮಡಿವಾಳ ರವರು ಅವನಿಗೆ ಬುದ್ಧಿವಾದ ಹೇಳಿ ಮನೆಗೆ ಕಳಿಸಿದಾಗ ಜೋಲಾಡುತ್ತಾ ಅಸ್ವಸ್ಥನಂತೆ ಮನೆಗೆ ಹೋದವನು, ನಂತರದಲ್ಲಿ ಮನೆಯಿಂದ ಎಲ್ಲಿಯೋ ಹೋಗಿ ಕಾಣೆಯಾಗಿದ್ದವವನಿಗೆ ಹುಡುಕಾಡುತ್ತಿದ್ದಾಗ ದಿನಾಂಕ: 17-03-2021 ರಂದು 11-30 ಗಂಟೆಯ ಸುಮಾರಿಗೆ ಅವನ ಮನೆ ಹತ್ತಿರದ ಮಾರುತಿ ನಾಯ್ಕ ರವರ ಮನೆಯ ಸಮೀಪ ಜಂಗಲಿನಲ್ಲಿ ಮೃತಪಟ್ಟು ದೇಹವು ಕೊಳೆತ ಸ್ಥಿತಿಯಲ್ಲಿ ಸಿಕ್ಕಿದ್ದು ಇರುತ್ತದೆ. ತನ್ನ ತಮ್ಮನು ವಿಪರೀತ ಸಾರಾಯಿ ಕುಡಿತದ ಚಟಕ್ಕೆ ಬಿದ್ದು ಆರೋಗ್ಯ ಹಾಳು ಮಾಡಿಕೊಂಡಿದ್ದವನು, ಅವನಿಗೆ ಇದ್ದ ಖಾಯಲೆ ಉಲ್ಭಣವಾಗಿ ಇಲ್ಲವೇ ಇನ್ಯಾವುದೋ ರೀತಿಯಲ್ಲಿ ಮೃತಪಟ್ಟಿದ್ದು, ಈ ಕುರಿತು ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿದ ಬಗ್ಗೆ ಪಿರ್ಯಾದಿ ಶ್ರೀ ಬಸವರಾಜ ತಂದೆ ವಿರುಪಾಕ್ಷಪ್ಪ ಚಕ್ರಸಾಲಿ, ಪ್ರಾಯ-44 ವರ್ಷ, ವೃತ್ತಿ-ಚಾಲಕ, ಸಾ|| ಕಾನಗೋಡ, ತಾ: ಸಿದ್ದಾಪುರ ರವರು ದಿನಾಂಕ: 17-03-2021 ರಂದು 13-10 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

ಇತ್ತೀಚಿನ ನವೀಕರಣ​ : 19-03-2021 06:04 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080