ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 18-03-2021

at 00:00 hrs to 24:00 hrs

 

ಕುಮಟಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 53/2021, ಕಲಂ: 279, 337 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಕಿರಣ ತಂದೆ ಸುಕ್ರು ಪಟಗಾರ, ಪ್ರಾಯ-29 ವರ್ಷ, ವೃತ್ತಿ-ಚಾಲಕ, ಸಾ|| ಪಡುವಣಿ, ತಾ: ಕುಮಟಾ (ಪ್ಯಾಸೆಂಜರ್ ಟೆಂಪೋ ವಾಹನ ನಂ: ಕೆ.ಎ-34/ಎ-5456 ನೇದರ ಚಾಲಕ). ನಮೂದಿತ ಆರೋಪಿತನು ದಿನಾಂಕ: 17-03-2021 ರಂದು 13-15 ಗಂಟೆಗೆ ಕುಮಟಾ–ಅಘನಾಶಿನಿ ಡಾಂಬರ್ ರಸ್ತೆಯ ಮೇಲೆ ತಾನು ಚಲಾಯಿಸುತ್ತಿದ್ದ ಪ್ಯಾಸೆಂಜರ್ ಟೆಂಪೋ ವಾಹನ ನಂ: ಕೆ.ಎ-34/ಎ-5456 ನೇದನ್ನು ಕುಮಟಾ ಕಡೆಯಿಂದ ಅಘನಾಶಿನಿ ಕಡೆಗೆ ಅತೀವೇಗವಾಗಿ ಚಲಾಯಿಸಿಕೊಂಡು ಬಂದವನು, ಜ್ಯೇಷ್ಡಪುರದ ಕಟ್ಟಿಗೆ ಡಿಪೋ ಹತ್ತಿರ ತಾನು ಚಲಾಯಿಸುತ್ತಿದ್ದ ಟೆಂಪೋವನ್ನು ಒಮ್ಮೇಲೆ ನಿಷ್ಕಾಳಜಿತನದಿಂದ ರಸ್ತೆಯ ಎಡಕ್ಕೆ ಚಲಾಯಿಸಿ, ರಸ್ತೆಯ ಎಡಬದಿಯಲ್ಲಿ ಮಣ್ಣಿನ ಕಚ್ಚಾ ರಸ್ತೆಯಲ್ಲಿ ಪಿರ್ಯಾದಿಯು ತನ್ನ ಬಾಬ್ತು ಮೋಟಾರ್ ಸೈಕಲ್ ನಂ: ಕೆ.ಎ-47/ವಿ-1690 ನೇದನ್ನು ನಿಲ್ಲಿಸಿಕೊಂಡು ಹಿಂಬದಿಯಲ್ಲಿ ರಾಮ ತಂದೆ ವೆಂಕ್ಟಾ ನಾಯ್ಕ ಈತನನ್ನು ಕೂಡ್ರಿಸಿಕೊಂಡು ನಿಂತಿರುವಾಗ, ಹಿಂಬದಿಯ ಸೀಟಿನಲ್ಲಿ ಕುಳಿತ ರಾಮ ತಂದೆ ವೆಂಕ್ಟಾ ನಾಯ್ಕ ಈತನ ತಲೆಗೆ ಟೆಂಪೋವಿನ ಮುಂಭಾಗದ ಎಡಗಡೆಯ ಮಿರರ್ (ಕನ್ನಡಿ) ಯನ್ನು ತಾಗಿಸಿ ಮೋಟಾರ್ ಸೈಕಲ್ ಸಮೇತ ರಸ್ತೆಯ ಬದಿಯಲ್ಲಿ ಬೀಳುವಂತೆ ಮಾಡಿ, ಮೋಟಾರ್ ಸೈಕಲ್ ಹಿಂಬದಿಯಲ್ಲಿ ಕುಳಿತ ರಾಮ ತಂದೆ ವೆಂಕ್ಟಾ ನಾಯ್ಕ ಈತನ ತಲೆಯ ಹಿಂಭಾಗಕ್ಕೆ ಗಾಯವಾಗಲು ಕಾರಣವಾದ ಬಗ್ಗೆ ಪಿರ್ಯಾದಿ ಶ್ರೀ ರಾಮಕೃಷ್ಣ ತಂದೆ ಅನಂತ ಆಚಾರಿ, ಪ್ರಾಯ-52 ವರ್ಷ, ವೃತ್ತಿ-ಸೆಂಟ್ರಿಂಗ್ ಕೆಲಸ, ಸಾ|| ತುಂಬರೆಮಠ, ಹೊಲನಗದ್ದೆ, ತಾ: ಕುಮಟಾ ರವರು ದಿನಾಂಕ: 18-03-2021 ರಂದು 15-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮಂಕಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 45/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಸುಭಾಷ ತಂದೆ ಗೋಪಾಲ ಶೆಟ್ಟಿ, ಪ್ರಾಯ-58 ವರ್ಷ, ಸಾ|| ದೇವರಗದ್ದೆ, ಮಂಕಿ, ತಾ: ಹೊನ್ನಾವರ. ನಮೂದಿತ ಆರೋಪಿತನು ದಿನಾಂಕ: 17-03-2021 ರಂದು 17-30 ಗಂಟೆಗೆ ಮಂಕಿ ಹಳೇಮಠ ರಸ್ತೆಯಲ್ಲಿ ಅಂಗಡಿ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಬರ-ಹೋಗುವ ಜನರಿಗೆ ಕೂಗಿ ಕರೆದು ನಿಮಗೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳಿ ಅವರಿಂದ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥವಾಗಿ ಕಟ್ಟಿಸಿ ಅವರಿಗೆ ಓ.ಸಿ ಮಟಕಾ ಅಂಕೆ-ಸಂಖ್ಯೆಯ ಚೀಟಿಯನ್ನು ಬರೆದು ಕೊಡುತ್ತಾ ಜನರಿಂದ ಹಣ ಪಡೆದುಕೊಂಡು ಓ.ಸಿ ಮಟಕಾ ಜುಗರಾಟ ಆಡಿಸುತ್ತಿದ್ದಾಗ ದಾಳಿಯ ಸಮಯಕ್ಕೆ ಆರೋಪಿತನ ತಾಬಾದಲ್ಲಿ ಸಿಕ್ಕ ಒಟ್ಟು ನಗದು ಹಣ 5,120/- ರೂಪಾಯಿಗಳು ಹಾಗೂ ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳಾದ ಓ.ಸಿ ಸಂಖ್ಯೆಗಳನ್ನು ಬರೆದ ಚೀಟಿ-1 ಮತ್ತು ಕಪ್ಪು ಬಾಲ್ ಪೆನ್-1 ಗಳ ಸಮೇತ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ  ಪಿರ್ಯಾದಿ ಸ||ತ|| ಶ್ರೀ ಪರಮಾನಂದ ಬಿ. ಕೊಣ್ಣುರು, ಪಿ.ಎಸ್.ಐ (ಕಾ&ಸು), ಮಂಕಿ ಪೊಲೀಸ್ ಠಾಣೆ ರವರು ದಿನಾಂಕ: 18-03-2021 ರಂದು 18-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 37/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಜನಾರ್ಧನ ತಂದೆ ನಾಗಪ್ಪ ಮೊಗೇರ, ಪ್ರಾಯ-20 ವರ್ಷ, ವೃತ್ತಿ-ಬೀಡಾ ಅಂಗಡಿ ವ್ಯಾಪಾರ, ಸಾ|| ಅಳ್ವೆಕೋಡಿ, ತುಳಸಿ ಮನೆ, ತಾ: ಭಟ್ಕಳ. ನಮೂದಿತ ಆರೋಪಿತನು ದಿನಾಂಕ: 18-03-2021 ರಂದು 19-00 ಗಂಟೆಯ ಸಮಯಕ್ಕೆ ಶಿರಾಲಿ ಗ್ರಾಮದ ಕಾಮತ್ ಬೇಕರಿ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 70/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 1,600/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಓಂಕಾರಪ್ಪ ಪಿ.ಎಸ್.ಐ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 18-03-2021 ರಂದು 20-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಜೋಯಿಡಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 15/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ರಾಜು ತಂದೆ ಪ್ರೇಮಾನಂದ ನಾಯ್ಕ, ಪ್ರಾಯ-35 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಜನತಾ ಕಾಲೋನಿ ತಾ: ಜೋಯಿಡಾ. ನಮೂದಿತ ಆರೋಪಿತನು ದಿನಾಂಕ: 18-03-2021 ರಂದು 13-35 ಗಂಟೆಯ ಸುಮಾರಿಗೆ ತನ್ನ ಲಾಭಕ್ಕೋಸ್ಕರ ಜೋಯಿಡಾ ತಾಲೂಕಿನ ಜನತಾ ಕಾಲೋನಿಯ ಹನುಮಾನ ಮಂದಿರದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬರಿಗೆ ಅನ್ಯಾಯದ ಲಾಭ ಇನ್ನೊಬ್ಬರಿಗೆ ಅನ್ಯಾಯದ ನಷ್ಟವಾಗುವಂತೆ ಸಾರ್ವಜನಿಕರಿಂದ ಹಣವನ್ನು ಸ್ವೀಕರಿಸಿಕೊಂಡು ಓ.ಸಿ. ಚೀಟಿ ಬರೆಯುತ್ತಿದ್ದಾಗ ನಗದು ಹಣ 920/- ರೂಪಾಯಿ, ಬಾಲ್ ಪೆನ್ ಹಾಗೂ ಅಂಕೆ-ಸಂಖ್ಯೆ ಬರೆದ ಓ.ಸಿ ಚೀಟಿಗಳ ಸಮೇತ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀಮತಿ ಮಂಜುಳಾ ರಾವೋಜಿ, ಡಬ್ಲ್ಯೂ.ಪಿ.ಎಸ್.ಐ, ಜೋಯಿಡಾ ಪೊಲೀಸ್ ಠಾಣೆ ರವರು ದಿನಾಂಕ: 18-03-2021 ರಂದು 15-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಜೋಯಿಡಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 16/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಮನೋಜ ತಂದೆ ಮಹಾದೇವ ಶಿರಸಾಟ್, ಪ್ರಾಯ-40 ವರ್ಷ, ವೃತ್ತಿ-ಹೊಟೇಲ್ ವ್ಯಾಪಾರ, ಸಾ|| ಮನೆ ನಂ: 104/ಎ, ಕಾತೇಲಿ, ಕುಂಬಾರವಾಡಾ, ತಾ: ಜೋಯಿಡಾ. ನಮೂದಿತ ಆರೋಪಿತನು ದಿನಾಂಕ: 18-03-2021 ರಂದು ಸಾಯಂಕಾಲ 15-45 ಗಂಟೆಯ ಸುಮಾರಿಗೆ ತನ್ನ ಲಾಭಕ್ಕೋಸ್ಕರ ಜೋಯಿಡಾ ತಾಲೂಕಿನ ಕುಂಬಾರವಾಡ ಗ್ರಾಮದ ಶಿರಸಾಟ್ ಹೊಟೇಲ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಒಬ್ಬರಿಗೆ ಅನ್ಯಾಯದ ಲಾಭ ಇನ್ನೊಬ್ಬರಿಗೆ ಅನ್ಯಾಯದ ನಷ್ಟವಾಗುವಂತೆ ಸಾರ್ವಜನಿಕರಿಂದ ಹಣವನ್ನು ಸ್ವೀಕರಿಸಿಕೊಂಡು ಓ.ಸಿ ಚೀಟಿ ಬರೆಯುತ್ತಿದ್ದಾಗ ನಗದು ಹಣ 3,510/- ರೂಪಾಯಿ, ಬಾಲ್ ಪೆನ್ ಹಾಗೂ ಅಂಕೆ-ಸಂಖ್ಯೆ ಬರೆದ ಓ.ಸಿ ಚೀಟಿಗಳ ಸಮೇತ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಪ್ರಶಾಂತ ಡಿ. ಸಾವಂತ, ಎ.ಎಸ್.ಐ, ಜೋಯಿಡಾ ಪೊಲೀಸ್ ಠಾಣೆ ರವರು ದಿನಾಂಕ: 18-03-2021 ರಂದು 17-10 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಜೋಯಿಡಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 17/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ರಮೇಶ ತಂದೆ ಭಿವಾ ವೇಳಿಪ, ಪ್ರಾಯ-46 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಚೌಕನಗಾಳಿ ತಾ: ಜೋಯಿಡಾ. ನಮೂದಿತ ಆರೋಪಿತನು ದಿನಾಂಕ: 18-03-2021 ರಂದು 16-30 ಗಂಟೆಯ ಸುಮಾರಿಗೆ ತನ್ನ ಲಾಭಕ್ಕೋಸ್ಕರ ಜೋಯಿಡಾ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬರಿಗೆ ಅನ್ಯಾಯದ ಲಾಭ ಇನ್ನೊಬ್ಬರಿಗೆ ಅನ್ಯಾಯದ ನಷ್ಟವಾಗುವಂತೆ ಸಾರ್ವಜನಿಕರಿಂದ ಹಣವನ್ನು ಸ್ವೀಕರಿಸಿಕೊಂಡು ಓ.ಸಿ ಚೀಟಿ ಬರೆಯುತ್ತಿದ್ದಾಗ ನಗದು ಹಣ 750/- ರೂಪಾಯಿ, ಬಾಲ್ ಪೆನ್ ಹಾಗೂ ಅಂಕೆ-ಸಂಖ್ಯೆ ಬರೆದ ಓ.ಸಿ ಚೀಟಿಗಳ ಸಮೇತ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀಮತಿ ಮಂಜುಳಾ ರಾವೋಜಿ, ಡಬ್ಲ್ಯೂ.ಪಿ.ಎಸ್.ಐ, ಜೋಯಿಡಾ ಪೊಲೀಸ್ ಠಾಣೆ ರವರು ದಿನಾಂಕ: 18-03-2021 ರಂದು 18-05 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 14/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಮುನಿರಾಜ ತಂದೆ ಗೋವಿಂದಸ್ವಾಮಿ ನಾಯ್ಡು, ಪ್ರಾಯ-45 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಪಣಸೋಲಿ, ತಾ: ಜೋಯಿಡಾ. ನಮೂದಿತ ಆರೋಪಿತನು ದಿನಾಂಕ: 18-03-2021 ರಂದು 21-00 ಗಂಟೆಗೆ ಜೋಯಿಡಾ ತಾಲೂಕಿನ ಪಣಸೋಲಿ ಗ್ರಾಮದ ಶಿವಾಜಿ ಸರ್ಕಾಲ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ ಓ.ಸಿ ಅದೃಷದ ಅಂಕೆಯ ಮೇಲೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ಪಡೆದು ಓ.ಸಿ ಮಟಕಾ ಜುಗಾರಾಟ ನಡೆಸುತ್ತಿದ್ದಾಗ, ಓ.ಸಿ ಮಟಕಾ ಜುಗಾರಾಟದ ಸಲಕರಣೆಗಳಾದ ಬಾಲ್ ಪೆನ್, ಅಂಕೆ-ಸಂಖ್ಯೆ ಬರೆದ ಓ.ಸಿ ಚೀಟಿ ಹಾಗೂ ನಗದು ಹಣ 710/- ರೂಪಾಯಿಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಹಣಮಂತ ಎಸ್. ಬಿರಾದಾರ, ಪಿ.ಎಸ್.ಐ, ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 18-03-2021 ರಂದು 22-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುಂಡಗೋಡ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 42/2021, ಕಲಂ: ಗಂಡಸು ಕಾಣೆ ನೇದ್ದರ ವಿವರ...... ನಮೂದಿತ ಕಾಣೆಯಾದ ಗಂಡಸು ಶ್ರೀ ಪೀಶಣ್ಣ ತಂದೆ ಸುಂಕಪ್ಪ ಕೊರವರ, ಪ್ರಾಯ-38 ವರ್ಷ, ವೃತ್ತಿ-ಬುಟ್ಟಿ ಹಣಿಯುವ ಕೆಲಸ, ಸಾ|| ಗಣೇಶ ನಗರ, ತಾ: ಮುಂಡಗೋಡ. ಪಿರ್ಯಾದುದಾರಳ ಗಂಡನಾದ ಈತನು ದಿನಾಂಕ: 19-02-2021 ರಂದು ಬೆಳಗ್ಗೆ 07-30 ಗಂಟೆಯಿಂದ ಮಧ್ಯಾಹ್ನ 12-00 ಗಂಟೆಯ ನಡುವಿನ ಅವಧಿಯಲ್ಲಿ ಮನೆಯಲ್ಲಿ ಮಲಗಿದ್ದವನು, ಯಾರಿಗೂ ಹೇಳದೇ ತನ್ನ ಸ್ಕೂಟರ್ ನಂ: ಕೆ.ಎ-65/ಇ-8190 ನೇದನ್ನು ತೆಗೆದುಕೊಂಡು ಹೋದವನು, ವಾಪಸ್ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾದವನಿಗೆ ಮುಂಡಗೋಡ ಪಟ್ಟಣದಲ್ಲಿ, ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ, ಕವಲವಾಡಾ ಕಡೆ ಹುಡಕಾಡಿದರೂ ಸಿಕ್ಕಿದ್ದು ಇರುವುದಿಲ್ಲ. ಸದ್ರಿ ಕಾಣೆಯಾದವರನ್ನು ಹುಡುಕಿ ಕೊಡಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀಮತಿ ಭಾರತಿ ಕೋಂ. ಪೀಶಣ್ಣ ಕೊರವರ, ಪ್ರಾಯ-27 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಗಣೇಶನಗರ, ತಾ: ಮುಂಡಗೋಡ ರವರು ದಿನಾಂಕ: 18-03-2021 ರಂದು 10-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 63/2021, ಕಲಂ: 279, 337 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ವಿನಯ ತಂದೆ ಸುಭಾಷಚಂದ್ರ ಮೋರೆ ಪ್ರಾಯ-35 ವರ್ಷ, ವೃತ್ತಿ-ಖಾಸಗಿ ಕೆಲಸ, ಸಾ|| ಬಸವ ನಗರ, ಧಾರವಾಡ (ಕಾರ್ ನಂ: ಕೆ.ಎ-01/ಎಮ್.ಎಮ್-8567 ನೇದರ ಚಾಲಕ). ನಮೂದಿತ ಆರೋಪಿತನು ದಿನಾಂಕ: 18-03-2021 ರಂದು 03-30 ಗಂಟೆಗೆ ತನ್ನ ಕಾರ್ ನಂ: ಕೆ.ಎ-01/ಎಮ್.ಎಮ್-8567 ನೇದನ್ನು ಯಲ್ಲಾಪುರ ಕಡೆಯಿಂದ ಹಳಿಯಾಳ ಕಡೆಗೆ ಅತೀವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬರುತ್ತಾ, ಹಳಿಯಾಳ ತಾಲೂಕಿನ ನಾರನಳ್ಳಿ ಹತ್ತಿರ ರಸೆಗ್ತೆ ಅಡ್ಡ ಬಂದ ಕಾಡು ಪ್ರಾಣಿಯನ್ನು ತಪ್ಪಿಸಲು ಹೋಗಿ ರಸ್ತೆಯ ಬಲಬದಿಗೆ ಕಾರ ಚಲಾಯಿಸಿ, ಕಾರನ್ನು ಪಲ್ಟಿ ಕೆಡವಿ ಅಪಘಾತ ಪಡಿಸಿ, ಕಾರಿನಲ್ಲಿದ್ದ ಸತ್ಯನಾರಾಯಣ ಪವಾರ ಇವರಿಗೆ ಸಾಧಾರಣ ಗಾಯನೋವು ಪಡಿಸಿದ್ದಲ್ಲದೇ, ಆರೋಪಿ ಚಾಲಕನು ತನಗೂ ಸಹ ಸಾಧಾರಣ ಸ್ವರೂಪದ ಗಾಯನೋವು ಪಡಿಸಿಕೊಂಡ ಬಗ್ಗೆ ಪಿರ್ಯಾದಿ ಶ್ರೀಮತಿ ವಿಜಯಲಕ್ಷ್ಮೀ ಕೋಂ. ಕಿರಣಕುಮಾರ ನೀರಾವರಿ, ಪ್ರಾಯ-34 ವರ್ಷ, ವೃತ್ತಿ-ಖಾಸಗಿ ಕಂಪನಿಯಲ್ಲಿ ಕೆಲಸ, ಸಾ|| ಮನೆ ನಂ: 12, ಶಿವಬಾಬಾ ನಿಲಯ, ಮೈಲಾರಲಿಂಗ ನಗರ, ಕಲಘಟಗಿ ರೋಡ್, ಧಾರವಾಡ ರವರು ದಿನಾಂಕ: 18-03-2021 ರಂದು 11-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 64/2021, ಕಲಂ: 323, 324, 504, 506 ಸಹಿತ 34 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ಜಯದೇವ ತಂದೆ ನಾಮದೇವ ಘಾಡಿ, ಪ್ರಾಯ-30 ವರ್ಷ, ವೃತ್ತಿ-ಗೌಂಡಿ ಕೆಲಸ, ಸಾ|| ನೀರಲಗಾ ಗ್ರಾಮ, ತಾ: ಹಳಿಯಾಳ, 2]. ಶ್ರೀಮತಿ ಲಕ್ಷ್ಮೀ ಕೋಂ. ಜಯದೇವ ಘಾಡಿ, ಪ್ರಾಯ-30 ವರ್ಷ, ವೃತ್ತಿ-ಮನೆ ಕೆಲಸ, ಸಾ|| ನೀರಲಗಾ ಗ್ರಾಮ, ತಾ: ಹಳಿಯಾಳ. ಈ ನಮೂದಿತ ಆರೋಪಿತರು ಹಾಗೂ ಪಿರ್ಯಾದಿಯು ಒಂದೆ ಮನೆಯಲ್ಲಿ ಬೇರೆ ಬೇರೆ ಅಡುಗೆ ಮಾಡಿಕೊಂಡು ವಾಸವಾಗಿದ್ದು, ಪಿರ್ಯಾದಿಯು ದಿನಾಂಕ: 18-03-2021 ರಂದು ಬೆಳಗ್ಗೆ 09-00 ಗಂಟೆಗೆ ಆರೋಪಿ 1 ನೇಯವನಿಗೆ ಟಿ.ವಿ ಸೌಂಡ್ ಕಡಿಮೆ ಮಾಡಲು ತಿಳಿಸಿದ್ದರಿಂದ ‘ನಾವು ನಿಮ್ಮಿಂದ ಬೇರೆ ಇದ್ದೇವೆ. ನಮಗೆ ಟಿ.ವಿ ಸೌಂಡ್ ಕಡಿಮೆ ಮಾಡು ಅಂತಾ ಹೇಳತಿ ಬೋಸಡಿಕೆ, ಚಿನಾಲಿ ಮಗನಾ’ ಅಂತಾ ಅವಾಚ್ಯವಾಗಿ ಬೈಯ್ದು, ಅಲ್ಲಿಯೇ ಇದ್ದ ಒಂದು ಕಲ್ಲಿನಿಂದ ಪಿರ್ಯಾದಿಯ ಎಡಗೈಗೆ ಹೊಡೆದು ಗಾಯನೋವುಗೊಳಿಸಿ, ಮತ್ತೆ ಕೈಯಿಂದ ತಲೆಗೆ ಹೊಡೆದಿರುತ್ತಾನೆ. ಆಗ ಆರೋಪಿತೆ 2 ನೇಯವಳು ‘ನಾಲಾಯಕ ಬಾವಾ, ಚಪಲಾನಿ ಮಾರತು ತುಜಾ’ ಅಂತಾ ಅವಾಚ್ಯವಾಗಿ ಪಿರ್ಯಾದಿಗೆ ಬೈಯ್ಯುತ್ತಿದ್ದಳು. ಅಲ್ಲದೇ ಪಿರ್ಯಾದಿಯ ಹೆಂಡತಿ ರುಕ್ಮಾಬಾಯಿ ಇವಳಿಗೆ ಆರೋಪಿ 1 ನೇಯವನು ಕೈಯಿಂದ ಮೈ ಹಾಗೂ ಕೈಗೆ ಹೊಡೆದು ದುಃಖಾಪತ್ ಪಡಿಸಿದ್ದಲ್ಲದೇ, ಇಬ್ಬರಿಗೂ ಜೀವದ ಬೆದರಿಕೆ ಹಾಕಿದ ಬಗ್ಗೆ ಪಿರ್ಯಾದಿ ಶ್ರೀ ನಾಮದೇವ ತಂದೆ ಹನ್ಮಂತ ಘಾಡಿ, ಪ್ರಾಯ-60 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ನೀರಲಗಾ ಗ್ರಾಮ, ತಾ: ಹಳಿಯಾಳ ರವರು ದಿನಾಂಕ: 18-03-2021 ರಂದು 13-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಅಂಬಿಕಾನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 03/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಭೈರು ತಂದೆ ವಿಠ್ಠು ಆಡೊಳಕರ, ಪ್ರಾಯ-36 ವರ್ಷ,  ವೃತ್ತಿ-ಕೂಲಿ ಕೆಲಸ, ಸಾ|| ಅಡಿಟ್ ನಂ: 3, ಅಂಬಿಕಾನಗರ, ಜೋಯಿಡಾ. ನಮೂದಿತ ಆರೋಪಿತನು ದಿನಾಂಕ: 18-3-2021 ರಂದು 10-00 ಗಂಟೆಯ ಸುಮಾರಿಗೆ ಅಂಬಿಕಾನಗರದ ಕೆ.ಪಿ.ಸಿ ಕಚೇರಿ ಎದುರು ಇರುವ ಕೆ.ಪಿ.ಸಿ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕಾಗಿ ಬರ-ಹೋಗುವ ಜನರಿಂದ ಅಂಕೆ-ಸಂಖ್ಯೆಗಳ ಮೇಲೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹಣವನ್ನು ಪಂಥ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿದ್ದಾಗ ಓ.ಸಿ ಜೂಗಾರಾಟದ ಸಲಕರಣೆಗಳಾದ ಓ.ಸಿ ಬರೆದ ಚೀಟಿ-01, ಬಾಲ ಪೆನ್-1 ಮತ್ತು ನಗದು ಹಣ 570/- ರೂಪಾಯಿಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಅನೀಲಕುಮಾರ ಟಿ. ನಾಯಕ, ಪಿ.ಎಸ್.ಐ, ಅಂಬಿಕಾನಗರ ಪೊಲೀಸ್ ಠಾಣೆ ರವರು ದಿನಾಂಕ: 18-03-2021 ರಂದು 11-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 18-03-2021

at 00:00 hrs to 24:00 hrs

 

ಸಿದ್ದಾಪುರ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 14/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಕುಮಾರ: ದೀಪಕ ತಂದೆ ಹನುಮಂತ ಗೌಡ, ಪ್ರಾಯ-10 ವರ್ಷ, ವೃತ್ತಿ-ವಿದ್ಯಾರ್ಥಿ (ಕಿಲವಳ್ಳಿ ಶಾಲೆಯಲ್ಲಿ 04 ನೇ ತರಗತಿ), ಸಾ|| ಕಿಲವಳ್ಳಿ, ಪೋ: ಸೋವಿನಕೊಪ್ಪ, ತಾ:  ಸಿದ್ದಾಪುರ. ಪಿರ್ಯಾದಿಯ ಮಗನಾದ ಈತನು ದಿನಾಂಕ: 18-03-2021 ರಂದು ಮಧ್ಯಾಹ್ನ ಅವನ ವಾರಿಗೆಯ ಹುಡುಗರೊಂದಿಗೆ ತಮ್ಮ ಮನೆ ಹತ್ತಿರ ಇರುವ ಹಳ್ಳಕ್ಕೆ ಸ್ನಾನ ಮಾಡಲು ಹೋಗಿದ್ದವನು, ಹಳ್ಳದಲ್ಲಿ ಕಾನಮನೆಗುಂಡಿ ಹತ್ತಿರ ಸ್ನಾನ ಮಾಡುತ್ತಿದ್ದಾಗ 12-00 ಗಂಟೆಯ ಸುಮಾರಿಗೆ ಅಕಸ್ಮಿಕವಾಗಿ ಕಾಲು ಜಾರಿಯೋ ಅಥವಾ ಇನ್ನಾವುದೋ ರೀತಿಯಿಂದ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾಗಿ ಇರುತ್ತದೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ಹನುಮಂತ ತಂದೆ ವೆಂಕ ಗೌಡ, ಪ್ರಾಯ-42 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಕಿಲವಳ್ಳಿ, ಪೋ: ಸೋವಿನಕೊಪ್ಪ, ತಾ: ಸಿದ್ದಾಪುರ ರವರು ದಿನಾಂಕ: 18-03-2021 ರಂದು 14-05 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

ಇತ್ತೀಚಿನ ನವೀಕರಣ​ : 19-03-2021 07:38 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080