ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 19-06-2021

at 00:00 hrs to 24:00 hrs

 

ಮಂಕಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 93/2021, ಕಲಂ: 279, 337 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ರಂಜಿತ ತಂದೆ ಶ್ರೀಧರ ನಾಯ್ಕ, ಸಾ|| ಬಳ್ಕೂರ, ತಾ: ಹೊನ್ನಾವರ (ಬೊಲೆರೋ ವಾಹನ ನಂ: ಕೆ.ಎ-47/6719 ನೇದರ ಚಾಲಕ). ದಿನಾಂಕ: 19-06-2021 ರಂದು 13-00 ಗಂಟೆಗೆ ಮಂಕಿಯ ಖಾಜಿ ಮನೆಯಲ್ಲಿ ಪಿರ್ಯಾದಿಯು ಕೆಲಸಗಾರರನ್ನು ಕರೆದುಕೊಂಡು ವಿದ್ಯುತ್ ಕಂಬದ ಲೈನ್ ರಿಪೇರಿ ಮಾಡಿಸುತ್ತಿರುವಾಗ ರಾಷ್ಟ್ರೀಯ ಹೆದ್ದಾರಿಯ ಕಡೆಯಿಂದ ಖಾಜಿ ಮನೆ ಕಡೆಗೆ ಹೋಗಲು ಬಂದ ಬೊಲೆರೋ ವಾಹನ ನಂ: ಕೆ.ಎ-47/6719 ನೇದರ ಆರೋಪಿ ಚಾಲಕನು ತನ್ನ ವಾಹನವನ್ನು ವೇಗವಾಗಿ ಚಾಲನೆ ಮಾಡಿಕೊಂಡು ಹೋಗಿ, ರಸ್ತೆಯ ತಿರುವಿನಲ್ಲಿ ವಾಹನದ ವೇಗವನ್ನು ನಿಯಂತ್ರಿಸಲಾಗದೇ ರಸ್ತೆಯ ಬದಿಯಲ್ಲಿ ನಿಂತು ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಉಮೇಶ ತಂದೆ ಪಾಂಡು ನಾಯ್ಕ, ಇವನಿಗೆ ವಾಹನದ ಎಡಬದಿಯ ಭಾಗದಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿ, ಎರಡು ಕೈಗಳಿಗೆ ಗಾಯ ಹಾಗೂ ಒಳನೋವು ಮತ್ತು ಮೈ ಕೈಗೆ ಅಲ್ಲಲ್ಲಿ ಗಾಯ ಪಡಿಸಿದ ಬಗ್ಗೆ ಪಿರ್ಯಾದಿ ಶ್ರೀ ಪ್ರವೀಣ ತಂದೆ ಸುರೇಶ ನಾಯ್ಕ, ಪ್ರಾಯ-27 ವರ್ಷ, ವೃತ್ತಿ-ಗುತ್ತಿಗೆದಾರ, ಸಾ|| ಮಾಸ್ತಿಮನೆ, ಮಂಕಿ, ತಾ: ಹೊನ್ನಾವರ ರವರು ದಿನಾಂಕ: 19-06-2021 ರಂದು 21-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುಂಡಗೋಡ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 81/2021, ಕಲಂ: 3, 25(1ಬಿ)(ಎ) ಭಾರತೀಯ ಆಯುಧ ಕಾಯ್ದೆ-1959 ನೇದ್ದರ ವಿವರ...... ನಮೂದಿತ ಆರೋಪಿತ ನಾರಾಯಣ ತಂದೆ ಲಕ್ಷ್ಮಣ ಬನವಾಸಿ, ಪ್ರಾಯ-60 ವರ್ಷ, ವೃತ್ತಿ ಕೂಲಿ ಕೆಲಸ, ಸಾ|| ಪಾಳಾ ಗ್ರಾಮ, ತಾ: ಮುಂಡಗೋಡ. ಈತನು ದಿನಾಂಕ: 19-06-2021 ರಂದು 18-45 ಗಂಟೆಗೆ ಮುಂಡಗೋಡ ತಾಲೂಕಿನ ಪಾಳಾ ಗ್ರಾಮದಲ್ಲಿ ಒಂಟಿ ನಳಿಕೆಯ ನಾಡ ಬಂದೂಕನ್ನು ಯಾವುದೇ ಅಧೀಕೃತ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ತನ್ನ ಸ್ವಾಧೀನದಲ್ಲಿ ಇಟ್ಟುಕೊಂಡು ತನ್ನ ಹೊಲದಿಂದ ಮನೆಯ ಕಡೆಗೆ ಹೋಗುತ್ತಿರುವಾಗ ಪೊಲೀಸರನ್ನು ನೋಡಿ ಬಂದೂಕನ್ನು ಶ್ರೀಮೈಲಾರಲಿಂಗೇಶ್ವರ ದೇವಸ್ಥಾನದ ಹತ್ತಿರದ ಬೇಲಿಯಲ್ಲಿ ಬಿಸಾಡಿ ಓಡಿ ಹೋಗುತ್ತಿರುವಾಗ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಬಸವರಾಜ ಮಬನೂರ, ಪಿ.ಎಸ್.ಐ, ಮುಂಡಗೋಡ ಪೊಲೀಸ್ ಠಾಣೆ ರವರು ದಿನಾಂಕ: 19-06-2021 ರಂದು 21-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 19-06-2021

at 00:00 hrs to 24:00 hrs

 

ಪ್ರಕರಣಗಳು ದಾಖಲಾಗಿರುವುದಿಲ್ಲ....

 

======||||||||======

 

ಇತ್ತೀಚಿನ ನವೀಕರಣ​ : 21-06-2021 11:02 AM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080