ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 19-03-2021

at 00:00 hrs to 24:00 hrs

 

ಮಂಕಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 49/2021, ಕಲಂ: 3 ಸಹಿತ 25 ಭಾರತೀಯ ಆಯುಧ ಕಾಯ್ದೆ-1959 ನೇದ್ದರ ವಿವರ...... ನಮೂದಿತ ಆರೋಪಿತನು ಯಾರೋ ಅಪರಿಚಿತನಾಗಿದ್ದು, ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಈತನು ದಿನಾಂಕ: 19-03-2021 ರಂದು 20-15 ಗಂಟೆಗೆ ಅಡಿಕೆಕುಳಿ ಗ್ರಾಮದ ಹಾಲಳ್ಳಿ ಅರಣ್ಯ ಪ್ರದೇಶದಲ್ಲಿ ಅನಧೀಕೃತ ನಾಡ ಬಂದೂಕನ್ನು ಮತ್ತು ಅದಕ್ಕೆ ಸಂಬಂಧಿಸಿದ ಮದ್ದು ಗುಂಡುಗಳನ್ನು ತನ್ನ ತಾಬಾದಲ್ಲಿ ಇಟ್ಟುಕೊಂಡು ಪ್ರಾಣಿಗಳನ್ನು ಬೇಟೆಯಾಡುವ ಅಥವಾ ಕೊಲ್ಲುವ ಉದ್ದೇಶದಿಂದ ಅಲೆದಾಡುತ್ತಿದ್ದವನು, ಪೊಲೀಸ್ ವಾಹನವನ್ನು ನೋಡಿ ಕೈಯಲ್ಲಿದ್ದ ನಾಡ ಬಂದೂಕು ಹಾಗೂ ಮದ್ದು ಗುಂಡುಗಳಿರುವ ಕೈ ಚೀಲವನ್ನು ಎಸೆದು ಓಡಿ ಹೋದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಪರಮಾನಂದ ಬಿ. ಕೊಣ್ಣುರ, ಪಿ.ಎಸ್.ಐ, ಮಂಕಿ ಪೊಲೀಸ್ ಠಾಣೆ ರವರು ದಿನಾಂಕ: 19-03-2021 ರಂದು 23-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 38/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಮಂಜುನಾಥ ತಂದೆ ಭೀಮಾ ಗೊಂಡ, ಪ್ರಾಯ-26 ವರ್ಷ, ವೃತ್ತಿ-ವ್ಯಾಪಾರ, ಸಾ|| ಜಾಲಿ, ಸಂಪನಕೇರಿ, ತಾ: ಭಟ್ಕಳ. ನಮೂದಿತ ಆರೋಪಿತನು ದಿನಾಂಕ: 19-03-2021  ರಂದು ಬೆಳಿಗ್ಗೆ 09-15 ಗಂಟೆಯ ಸಮಯಕ್ಕೆ ಭಟ್ಕಳದ ಶಿರಾಲಿ ಚಿತ್ರಾಪುರ ಸ್ವಾಗತ ಕಮಾನ ಹತ್ತಿರ ಬೀಡಾ ಅಂಗಡಿಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 80/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 1,200/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಓಂಕಾರಪ್ಪ, ಪಿ.ಎಸ್.ಐ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 19-03-2021 ರಂದು 10-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 39/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಆನಂದ ತಂದೆ ಜಟ್ಟಾ ನಾಯ್ಕ, ಪ್ರಾಯ-38 ವರ್ಷ, ವೃತ್ತಿ-ವ್ಯಾಪಾರ, ಸಾ|| ಶಿರಾಲಿ, ಚೆಕಪೋಸ್ಟ್ ಹತ್ತಿರ, ತಾ: ಭಟ್ಕಳ. ನಮೂದಿತ ಆರೋಪಿತನು ದಿನಾಂಕ: 19-03-2021 ರಂದು 11-15 ಗಂಟೆಯ ಸಮಯಕ್ಕೆ ಭಟ್ಕಳದ ಶಿರಾಲಿ ಕೋಟೆಬಾಗಿಲು ಕ್ರಾಸ್ ಹತ್ತಿರ ಬೀಡಾ ಅಂಗಡಿಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 80/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 1,200/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಓಂಕಾರಪ್ಪ, ಪಿ.ಎಸ್.ಐ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 19-03-2021 ರಂದು 12-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 40/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ವಾಸುದೇವ ತಂದೆ ತಿಮ್ಮಯ್ಯಾ ನಾಯ್ಕ, ಪ್ರಾಯ-35 ವರ್ಷ, ವೃತ್ತಿ-ಪಾನಬೀಡಾ ಅಂಗಡಿ, ಸಾ|| ಕರಿಕಲ್, ಜ್ಞಾನ ಮಂದಿರ ಹತ್ತಿರ, ತಾ: ಭಟ್ಕಳ. ನಮೂದಿತ ಆರೋಪಿತನು ದಿನಾಂಕ: 19-03-2021 ರಂದು 15-00 ಗಂಟೆಯ ಸಮಯಕ್ಕೆ ಶಿರಾಲಿ ಚಂದನ ಹೊಟೇಲ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 70/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 1,050/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ (ಕಾ&ಸು), ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 19-03-2021 ರಂದು 16-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 45/2021, ಕಲಂ: 323, 324, 504, 506 ಸಹಿತ 34 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ಚಿನ್ಮಯ ದೇವಳಿ, ಸಾ|| ಗುಳ್ಳಾಪುರ, ತಾ: ಯಲ್ಲಾಪುರ, 2]. ವಿನಾಯಕ ತಂದೆ ವಿಷ್ಣು ಕಂಡೇಕರ್, ಸಾ|| ಒಡೆಹುಕ್ಕಳಿ, ತಾ: ಯಲ್ಲಾಪುರ, 3]. ವಿಘ್ನೇಶ್ವರ ತಂದೆ ವಿಷ್ಣು ಕಂಡೇಕರ್, ಸಾ|| ಒಡೆಹುಕ್ಕಳಿ, ತಾ: ಯಲ್ಲಾಪುರ, 4]. ವಿನಾಯಕ ದೇವಳಿ, ಸಾ|| ಗುಳ್ಳಾಪುರ, ತಾ: ಯಲ್ಲಾಪುರ. ದಿನಾಂಕ: 19-03-2021. ರಂದು ಬೆಳಗಿನ ಜಾವ 02-00 ಗಂಟೆಯ ಸುಮಾರಿಗೆ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಸ್ ಸ್ಟ್ಯಾಂಡ್ ಹತ್ತಿರ ನಮೂದಿತ ಆರೋಪಿತರ ಪೈಕಿ ಆರೋಪಿ 2 ನೇಯವನ ಕಾರಿನ ಚಾವಿಯನ್ನು ಪಿರ್ಯಾದಿಯವರು ಆರೋಪಿ 1 ನೇಯವನಿಗೆ ಕೊಡಲು ನಿರಾಕರಿಸಿದಾಗ ಸಿಟ್ಟಾದ ಆರೋಪಿ1 ನೇಯವನು ಪಿರ್ಯಾದಿಗೆ ಉದ್ದೇಶಿಸಿ ‘ಬೋಳಿ ಮಗನೆ, ತನಗೆ ಚಾವಿ ಕೊಡುವುದಿಲ್ಲ ಅಂತಿಯಾ?  ಅಂತಾ ಅವಾಚ್ಯವಾಗಿ ಬೈಯ್ದು, ಅಲ್ಲಿಯೇ ಬಿದ್ದ ಸಣ್ಣ ರಾಡ್ ಅನ್ನು ತೆಗೆದುಕೊಂಡು ಪಿರ್ಯಾದಿಯ ಎಡಕಿವಿಗೆ ಹೊಡೆದು ದೂಡಿ ಕೆಳಗೆ ಬೀಳಿಸಿದಾಗ, ಅಲ್ಲೇ ಸಮಿಪದಲ್ಲಿ ಇದ್ದ ಆರೋಪಿ 2 ರಿಂದ 4 ನೇಯವರು ಸಹ ಓಡಿ ಬಂದು ಆರೋಪಿ1 ನೇಯವನೊಂದಿಗೆ ಸೇರಿ ಏಕೋದ್ದೇಶದಿಂದ ಪಿರ್ಯಾದಿಗೆ ಕೈಯಿಂದ ಮೈ ಮೇಲೆ ಹಲ್ಲೆ ಮಾಡಿ, ಸಾದಾ ಸ್ವರೂಪದ ಗಾಯನೋವು ಪಡಿಸಿದ ಬಗ್ಗೆ ಪಿರ್ಯಾದಿ ಶ್ರೀ ವಿನೋದ ತಂದೆ ರಾಜೇಂದ್ರ ನಾಯ್ಕ, ಪ್ರಾಯ-25 ವರ್ಷ, ವೃತ್ತಿ-ಮೊಬೈಲ್ ಅಂಗಡಿ ವ್ಯಾಪಾರ, ಸಾ|| ಗುಳ್ಳಾಪುರ, ತಾ: ಯಲ್ಲಾಪುರ ರವರು ದಿನಾಂಕ: 19-03-2021 ರಂದು 14-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 15/2021, ಕಲಂ: ಹುಡುಗಿ ಕಾಣೆ ನೇದ್ದರ ವಿವರ...... ನಮೂದಿತ ಕಾಣೆಯಾದ ಹುಡುಗಿ ಕುಮಾರಿ: ಅಶ್ವಿನಿ ತಂದೆ ಮಹೇಶ ಜುಂಜವಾಡಕರ್, ಪ್ರಾಯ-18 ವರ್ಷ, ವೃತ್ತಿ-ವಿದ್ಯಾರ್ಥಿ, ಸಾ|| ಜಾವಳ್ಳಿ, ತಾ: ಹಳಿಯಾಳ. ಇವಳು ದಿನಾಂಕ: 17-03-2021 ರಂದು ಬೆಳಿಗ್ಗೆ 08-00 ಗಂಟೆಗೆ ಕಾಲೇಜಿಗೆ ಹೋಗಿ ಬರುತ್ತೇನೆ ಅಂತ ಜಾವಳ್ಳಿಯ ತನ್ನ ಮನೆಯಿಂದ ಬಸ್ಸಿನಲ್ಲಿ ಹಳಿಯಾಳಕ್ಕೆ ಹೋದವಳು ಕಾಲೇಜಿಗೆ ಹೋಗದೇ, ಮರಳಿ ಮನೆಗೆ ಬರದೇ ಕಾಣೆಯಾಗಿದ್ದು, ಸದ್ರಿಯವಳಿಗೆ ಪತ್ತೆಯ ಕುರಿತು ಹುಡುಕಾಡಿದ್ದರಲ್ಲಿ ಈವರೆಗೆ ಸಿಗದೇ ಇರುವುದರಿಂದ ಈ ಕುರಿತು ಸದ್ರಿಯವಳನ್ನು ಹುಡುಕಿ ಕೊಡಬೇಕಾಗಿ ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ಮಹೇಶ ತಂದೆ ಮಸಣು ಜುಂಜವಾಡಕರ್, ಪ್ರಾಯ-43 ವರ್ಷ, ವೃತ್ತಿ-ಇಲೆಕ್ಟ್ರೀಶಿಯನ್ ಕೆಲಸ, ಸಾ|| ಜಾವಳ್ಳಿ, ತಾ: ಹಳಿಯಾಳ ರವರು ದಿನಾಂಕ: 19-03-2021 ರಂದು 11-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 16/2021, ಕಲಂ: 279, 337, 338 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಸಂಕೇತ ತಂದೆ ಮುರಳೀಧರ ಮಿಸ್ಕಿ, ಪ್ರಾಯ-17 ವರ್ಷ, ವೃತ್ತಿ-ವಿದ್ಯಾರ್ಥಿ, ಸಾ|| ಟೌನಶಿಪ್, ದಾಂಡೇಲಿ (ಹೋಂಡಾ ಡಿಯೋ ಮೋಟಾರ್ ಸೈಕಲ್ ನಂ: ಕೆ.ಎ-53/ಇ.ಜೆಡ್-5449 ನೇದರ ಸವಾರ). ನಮೂದಿತ ಆರೋಪಿತನು ದಿನಾಂಕ: 19-03-2021 ರಂದು 18-00 ಗಂಟೆಗೆ ದಾಂಡೇಲಿಯ ಮೊಹಿನ್ ಸರ್ಕಲ್ ಹತ್ತಿರ ಡಾಂಬರ್ ರಸ್ತೆಯ ಮೇಲೆ ತಾನು ಚಲಾಯಿಸುತ್ತಿದ್ದ ಹೋಂಡಾ ಡಿಯೋ ಮೋಟಾರ್ ಸೈಕಲ್ ನಂ: ಕೆ.ಎ-53/ಇ.ಜೆಡ್-5449 ನೇದರ ಹಿಂಬದಿ ತನ್ನ ಸ್ನೇಹಿತ ಪ್ರೀತಮ ತಂದೆ ಭೀಮಸೇನ್ ಥಾಪಾ, ಪ್ರಾಯ-17 ವರ್ಷ, ವೃತ್ತಿ-ವಿದ್ಯಾರ್ಥಿ, ಸಾ|| ಗಣೇಶನಗರ, ದಾಂಡೇಲಿ, ಈತನನ್ನು ಕೂಡ್ರಿಸಿಕೊಂಡು ಕುಳಗಿ ಕಡೆಯಿಂದ ದಾಂಡೇಲಿ ಕಡೆಗೆ ಅತೀವೇಗವಾಗಿ ಹಾಗೂ ನಿರ್ಲಕ್ಷ್ಯತನದಿಂದ ಮಾನವಿಯ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ ವೇಗವನ್ನು ನಿಯಂತ್ರಿಸಲಾಗದೇ ಡಾಂಬರ್ ರಸ್ತೆಯ ಮೇಲೆ ಕೆಡವಿ ಅಪಘಾತ ಪಡಿಸಿ, ತನ್ನ ಸ್ನೇಹಿತ ಪ್ರೀತಮನಿಗೆ ಬಲಗಾಲು ಫ್ರ್ಯಾಕ್ಚರ್ ಆಗುವಂತೆ ಮಾಡಿ, ತೀವೃ ಸ್ವರೂಪದ ಗಾಯ ಪಡಿಸಿ, ಆರೋಪಿತನು ತನಗೂ ಸಹ ತಲೆಗೆ ತೀವೃ ಸ್ವರೂಪದ ಗಾಯನೋವು ಪಡಿಸಿಕೊಂಡ ಬಗ್ಗೆ ಪಿರ್ಯಾದಿ ಕುಮಾರಿ: ಪ್ರೀತಿ ತಂದೆ ಭೀಮಸೇನ್ ಥಾಪಾ, ಪ್ರಾಯ-21 ವರ್ಷ, ವೃತ್ತಿ-ಬಿ.ಕಾಂ ವಿದ್ಯಾರ್ಥಿ, ಸಾ|| ಗಣೇಶನಗರ, ದಾಂಡೇಲಿ ರವರು ದಿನಾಂಕ: 19-03-2021 ರಂದು 20-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ದಾಂಡೇಲಿ ನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 32/2021, ಕಲಂ: 8, 20(b)(ii)(A) ಎನ್.ಡಿ.ಪಿ.ಎಸ್ ಎಕ್ಟ್-1985 ನೇದ್ದರ ವಿವರ...... ನಮೂದಿತ ಆರೋಪಿತ ಅಲ್ತಾಫ್ ಉಮ್ಮಾರ್ ಮನಿಯಾರ್, ಪ್ರಾಯ-19 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಮಡ್ಡಿ ಮಸೀದಿ ಹತ್ತಿರ, ಸ್ಲಮ್ ಏರಿಯಾ, ತಾ: ಹಳಿಯಾಳ. ನಮೂದಿತ ಆರೋಪಿತನು ದಿನಾಂಕ: 19-03-2021 ರಂದು 12-20 ಗಂಟೆಯ ಸುಮಾರಿಗೆ ದಾಂಡೇಲಿಯ ನಂಬರ್ 1 ಗೇಟ್ ಹತ್ತಿರದ ಲಾರಿ ಪಾರ್ಕಿಂಗ್ ಮಾಡುವ ಸ್ಥಳದ ಹತ್ತಿರ ಯಾವುದೇ ಪಾಸ್ ಯಾ ಪರ್ಮಿಟ್ ಇಲ್ಲದೇ ಅನಧೀಕೃತವಾಗಿ ಸುಮಾರು 8,500/- ರೂಪಾಯಿ ಮೌಲ್ಯದ 454 ಗ್ರಾಂ ತೂಕದ ಒಣಗಿರುವ ಗಾಂಜಾವನ್ನು ತನ್ನ ತಾಬಾದಲ್ಲಿಟ್ಟುಕೊಂಡು ಮಾರಾಟ ಮಾಡುತ್ತಾ ಇರುವಾಗ ದಾಳಿಯ ಕಾಲಕ್ಕೆ ಗಾಂಜಾ ಮಾದಕ ವಸ್ತು ಹಾಗೂ ಗಾಂಜಾ ಮಾರಾಟದಿಂದ ಸಂಗ್ರಹಿಸಿದ ನಗದು ಹಣ 450/- ರೂಪಾಯಿ, ಸಣ್ಣ ಸಣ್ಣ ಪ್ಲ್ಯಾಸ್ಟಿಕ್ ಕವರಗಳು-15. ಇವುಗಳೊಂದಿಗೆ ಪಿರ್ಯಾದಿಯವರಿಗೆ ಸೆರೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಯಲ್ಲಪ್ಪ ಎಸ್, ಪಿ.ಎಸ್.ಐ, ದಾಂಡೇಲಿ ನಗರ ಪೊಲೀಸ್ ಠಾಣೆ ರವರು ದಿನಾಂಕ: 19-03-2021 ರಂದು 13-10 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಶಿರಸಿ ನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 10/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ನೂರಅಹಮ್ಮದ್ ತಂದೆ ಖಾಸಿಂಸಾಬ್ ತಿಮ್ಮಾಪುರ, ಪ್ರಾಯ-54 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಕಸ್ತೂರಬಾ ನಗರ, ತಾ: ಶಿರಸಿ. ನಮೂದಿತ ಆರೋಪಿತನು ದಿನಾಂಕ: 19-03-2021 ರಂದು 13-45 ಗಂಟೆಯ ಸುಮಾರಿಗೆ ಶಿರಸಿ ಶಹರದ ಡ್ರೈವರಕಟ್ಟಾ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ತನ್ನ ಅನ್ಯಾಯದ ಲಾಭಕ್ಕೋಸ್ಕರ ಓ.ಸಿ ಮಟಕಾ ಜುಗಾರಾಟ ನಡೆಸುತ್ತಿರುವಾಗ ಓ.ಸಿ ಮಟಕಾ ಜುಗಾರಾಟದ ಸಲಕರಣೆಗಳಾದ ನಗದು ಹಣ ಒಟ್ಟೂ 470/- ರೂಪಾಯಿ, ಓ.ಸಿ ಅಂಕೆ-ಸಂಖ್ಯೆ ಬರೆದ ಚೀಟಿ-01, ಬಾಲ್ ಪೆನ್-01 ಇವುಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಶಿವಾನಂದ ನಾವದಗಿ, ಪಿ.ಎಸ್.ಐ (ಕಾ&ಸು), ಶಿರಸಿ ನಗರ ಪೊಲೀಸ್ ಠಾಣೆ ರವರು ದಿನಾಂಕ: 19-03-2021 ರಂದು 16-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 29/2021, ಕಲಂ: 8 (c), 20(b)(ii)(B) ಎನ್.ಡಿ.ಪಿ.ಎಸ್ ಎಕ್ಟ್-1985 ನೇದ್ದರ ವಿವರ...... ನಮೂದಿತ ಆರೋಪಿತರು 1]. ಶಬ್ಬೀರ್ ತಂದೆ ಫೀರಸಾಬ್ ಶೇಖ್, ಪ್ರಾಯ-33 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಸಿದ್ದಾಪುರ ಓಣಿ, ಮಳಗಿ, ತಾ: ಮುಂಡಗೋಡ, 2]. ಮಹಮ್ಮದ್ ಅಶ್ಫಾಕ್ ತಂದೆ ಜಹೀರ್ ಅಹಮ್ಮದ್ ಶೇಖ್, ಸಾ|| ಉಪ್ಪಳ, ಕಾಸರಗೋಡ, ಕೇರಳ, ಹಾಲಿ ಸಾ|| ಗ್ಯಾಸ್ ಗೋಡೌನ್ ಹತ್ತಿರ, ತಾ: ಅಕ್ಕಿಆಲೂರ, ಜಿ: ಹಾವೇರಿ. ಈ ನಮೂದಿತ ಆರೋಪಿತರು ದಿನಾಂಕ: 19-03-2021 ರಂದು 13-00 ಗಂಟೆಯ ಸುಮಾರಿಗೆ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್.ಇ.ಎಸ್ ಕಾಲೇಜ್ ರಸ್ತೆಯ ಶ್ರೀ ಮಾರಿಕಾಂಬಾ ಕ್ರೀಡಾಂಗಣದ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪಾಸ್ ಯಾ ಪರ್ಮಿಟ್ ಇಲ್ಲದೇ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಸಾಗಾಟ ಮಾಡಿಕೊಂಡು ಬಂದು ಮಾರಾಟ ಮಾಡಲು ತಮ್ಮ ವಶದಲ್ಲಿಟ್ಟುಕೊಂಡಿರುವಾಗ ಪಿರ್ಯಾದಿಯವರು ಪಂಚರು, ಪತ್ರಾಂಕಿತ ಅಧಿಕಾರಿಯವರು ಹಾಗೂ ಸಿಬ್ಬಂದಿಗಳ ಸಮಕ್ಷಮ ದಾಳಿ ನಡೆಸಿದಾಗ ಆರೋಪಿ 1 ನೇಯವನು ಸೆರೆ ಸಿಕ್ಕಿದ್ದು ಹಾಗೂ ಆರೋಪಿ 2 ನೇಯವನು ಓಡಿ ಹೋಗಿದ್ದು, ದಾಳಿಯ ಕಾಲ ಸಿಕ್ಕ ಆರೋಪಿ 1 ನೇಯವನ ಅಂಗ ಶೋಧನೆಯನ್ನು ಪಂಚರ ಸಮಕ್ಷಮ ಪತ್ರಾಂಕಿತ ಅಧಿಕಾರಿಯವರು ಮಾಡಿದಾಗ ಅವನ ತಾಬಾ 1). 2 ಕೆ.ಜಿ 530 ಗ್ರಾಂ ತೂಕದ ಅ||ಕಿ|| 75,900/- ರೂಪಾಯಿ ಮೌಲ್ಯದ ಗಾಂಜಾ ಮಾದಕ ವಸ್ತು, 2). ಸಣ್ಣ ಸಣ್ಣ ಖಾಲಿ ಪ್ಲಾಸ್ಟಿಕ್ ಕವರಗಳು-56, ಅ||ಕಿ|| 00.00/- ರೂಪಾಯಿ, 3). ಪಾಲಿಥಿನ್ ಕೈ ಚೀಲ-01, ಅ||ಕಿ|| 00.00/- ರೂಪಾಯಿ, 4). ರೆಡ್ಮಿ ಕಂಪನಿಯ ಅಂಡ್ರಾಯ್ಡ್ ಮೊಬೈಲ್ ಪೋನ್, ಅದಕ್ಕೆ ಅಳವಡಿಸಿದ ಏರಟೆಲ್ ಕಂಪನಿಯ ಸಿಮ್ ನಂ: 7349057747 ನೇದು ಸಹಿತ-01, ಅ||ಕಿ|| 2,000/- ರೂಪಾಯಿ, 5). ವಿವಿಧ ಮುಖಬೆಲೆಯ ನಗದು ಹಣ 710/- ರೂಪಾಯಿಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ನಾಗಪ್ಪ, ಪಿ.ಎಸ್.ಐ, ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆ ರವರು ದಿನಾಂಕ: 19-03-2021 ರಂದು 15-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 65/2021, ಕಲಂ: 8, 20(b)(ii)(A) ಎನ್.ಡಿ.ಪಿ.ಎಸ್ ಎಕ್ಟ್-1985 ನೇದ್ದರ ವಿವರ...... ನಮೂದಿತ ಆರೋಪಿತ ಮಹೇಶ ತಂದೆ ಅಶೋಕ ಕಿತ್ತೂರ, ಪ್ರಾಯ-35 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಜವಾಹರ್ ರಸ್ತೆ, ಹಳಿಯಾಳ ಶಹರ. ನಮೂದಿತ ಆರೋಪಿತನು ತನ್ನ ಅಕ್ರಮ ಲಾಭಕ್ಕಾಗಿ ದಿನಾಂಕ: 19-03-2021 ರಂದು 13-50 ಗಂಟೆಗೆ ಹಳಿಯಾಳ ಶಹರದ ಬಿ.ಕೆ ಹಳ್ಳಿ ಕ್ರಾಸ್ ಹತ್ತಿರ ಹಳಿಯಾಳ-ಬಿ.ಕೆ ಹಳ್ಳಿ ಡಾಂಬರ್ ರಸ್ತೆಯ ಬದಿಯಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದಾಗ ದಾಳಿಯ ಕಾಲಕ್ಕೆ 1). 150 ಗ್ರಾಂ ಹಸಿ ಗಾಂಜಾ, ಅಂದಾಜು ಮೌಲ್ಯ 1,500/- ರೂಪಾಯಿ, 2). ಕೆಂಪು ಬಣ್ಣದ ಚೀಲ-01, 3). ಪೇಪರ್-01, 4). ನಗದು ಹಣ 120/- ರೂಪಾಯಿ. ಇವುಗಳೊಂದಿಗೆ ದಾಳಿಯ ಕಾಲಕ್ಕೆ ಸಿಕ್ಕಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಯಲ್ಲಾಲಿಂಗ ಕುನ್ನೂರ, ಪಿ.ಎಸ್.ಐ (ಕಾ&ಸು), ಹಳಿಯಾಳ ಪೊಲೀಸ್ ಠಾಣೆ ರವರು ದಿನಾಂಕ: 19-03-2021 ರಂದು 15-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 66/2021, ಕಲಂ: 8, 20(b)(ii)(A) ಎನ್.ಡಿ.ಪಿ.ಎಸ್ ಎಕ್ಟ್-1985 ನೇದ್ದರ ವಿವರ...... ನಮೂದಿತ ಆರೋಪಿತ ಭರತ ತಂದೆ ಮಾರುತಿ ಪಾಟೋಳೆ, ಪ್ರಾಯ-35 ವರ್ಷ, ವೃತ್ತಿ-ಮಕ್ಕಳ ತಿನಿಸು ಮಾರಾಟ, ಸಾ|| ದಲಾಯತ್ ಗಲ್ಲಿ, ಹಳಿಯಾಳ ಶಹರ. ನಮೂದಿತ ಆರೋಪಿತನು ತನ್ನ ಅಕ್ರಮ ಲಾಭಕ್ಕಾಗಿ ದಿನಾಂಕ: 19-03-2021 ರಂದು 15-45 ಗಂಟೆಗೆ ಹಳಿಯಾಳ ತಾಲೂಕಿನ ಕುರಿಗದ್ದಾ ಕ್ರಾಸ್ ಬಸ್ ನಿಲ್ದಾಣದ ಹತ್ತಿರ ಗಾಂಜಾವನ್ನು ಮಾರಾಟ ಮಾಡುತ್ತಿದ್ದಾಗ ದಾಳಿಯ ಕಾಲಕ್ಕೆ 1). 134 ಗ್ರಾಂ ಪ್ರತಿಶತ 25 ರಷ್ಟು ಹಸಿಯಾಗಿರುವ ಗಾಂಜಾ, ಅ||ಕಿ|| 1,300/- ರೂಪಾಯಿ, 2). ಕಪ್ಪು ಬಣ್ಣದ ಪ್ಲಾಸ್ಟಿಕ್ ಚೀಲ್-01, ಅ||ಕಿ|| 00.00/- ರೂಪಾಯಿ, 3). ನಗದು ಹಣ 75/- ರೂಪಾಯಿ. ಇವುಗಳೊಂದಿಗೆ ದಾಳಿಯ ಕಾಲಕ್ಕೆ ಸಿಕ್ಕಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಮೋತಿಲಾಲ್ ಆರ್ ಪವಾರ, ಪೊಲೀಸ್ ವೃತ್ತ ನಿರೀಕ್ಷಕರು, ಹಳಿಯಾಳ ವೃತ್ತ, ಹಳಿಯಾಳ ರವರು ದಿನಾಂಕ: 19-03-2021 ರಂದು 17-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 19-03-2021

at 00:00 hrs to 24:00 hrs

 

ಗೋಕರ್ಣ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 06/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತಳಾದ ಶ್ರೀಮತಿ ಸೋಮಿ ಕೋಂ. ಬಲಿಯಾ ಗೌಡ, ಪ್ರಾಯ-80 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಬಾವಿಕೊಡ್ಲ, ಗೋಕರ್ಣ, ತಾ: ಕುಮಟಾ. ಮೃತಳು ಅನಾರೋಗ್ಯದಿಂದ ಬಳಲುತ್ತಿದ್ದವಳು, ದಿನಾಲೂ ಔಷಧೋಪಚಾರ ಪಡೆಯುತ್ತಿದ್ದವಳು. ತನ್ನ ಅನಾರೋಗ್ಯದ ಬಗ್ಗೆ ಮನಸ್ಸಿಗೆ ಹಚ್ಚಿಕೊಂಡು ದಿನಾಂಕ: 18-03-2021 ರಂದು ಮಧ್ಯಾಹ್ನ 03-00 ಗಂಟೆಯ ಸುಮಾರಿಗೆ ತನ್ನ ಮನೆಯಲ್ಲಿದ್ದ ಕ್ರಿಮಿನಾಶಕ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಳಾದವಳಿಗೆ ಚಿಕಿತ್ಸೆಯ ಕುರಿತು ಕುಮಟಾದ ಸರ್ಕಾರಿ ಆಸ್ಪತ್ರೆಗೆ ಒಯ್ದು ದಾಖಲು ಪಡಿಸಿ, ಚಿಕಿತ್ಸೆಯಲ್ಲಿರುವಾಗ ದಿನಾಂಕ: 13-03-2021 ರಂದು ಬೆಳಿಗ್ಗೆ 09-45 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ಪಿರ್ಯಾದಿ ಶ್ರೀ ಮಹಾಬಲೇಶ್ವರ ತಂದೆ ಬಲಿಯಾ ಗೌಡ, ಪ್ರಾಯ-51 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ಬಾವಿಕೊಡ್ಲ, ಗೋಕರ್ಣ, ತಾ: ಕುಮಟಾ ರವರು ದಿನಾಂಕ: 19-03-2021 ರಂದು 11-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಶಿರಸಿ ಗ್ರಾಮೀಣ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 10/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ರಾಜು ಬೀರಾ @ ಸನಿಯಾ ಕೊರಗ, ಪ್ರಾಯ-55 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಮನೆ ನಂ: 1-191, ಶಾರದಾಹೊಳೆ, ಎಳಜೀತ, ತಾ: ಬೈಂದೂರ, ಜಿ: ಉಡುಪಿ. ಪಿರ್ಯಾದಿಯ ಮಾವನಾದ ಈತನು ಮೊದಲಿನಿಂದಲೂ ವಿಪರೀತ ಸರಾಯಿ ಕುಡಿಯುವ ಚಟ ಹೊಂದಿದ್ದವನು. ಕಳೆದ 3 ತಿಂಗಳ ಹಿಂದೆ ತನ್ನ ಊರಿನಿಂದ ಶಿರಸಿ ತಾಲೂಕಿನ ಹುಲೇಕಲ್ ಗ್ರಾಮಕ್ಕೆ ಕೂಲಿ ಕೆಲಸಕ್ಕೆಂದು ಬಂದವನು, ದಿನಾಂಕ: 17-03-2021 ರಂದು 18-00 ಗಂಟೆಗೆ ಕೂಲಿ ಕೆಲಸಕ್ಕೆ ಹೋಗಿ ವಾಪಸ್ ಮನೆಗೆ ಬರುವಾಗ ಸರಾಯಿ ತಂದು ತಾನು ಉಳಿದುಕೊಂಡಿರುವ ಹುಲೇಕಲ್ ಹಂಚರಟಾದ ಖಾಸೀಂಸಾಬ್ ಇವರ ತೋಟದ ಮನೆಯ ಮುಂದಿನ ಅಂಗಳದಲ್ಲಿ ವಿಪರೀತ ಸರಾಯಿ ಕುಡಿದು ಊಟ ಮಾಡದೇ ಮಲಗಿದವನು ಏಳದೇ ದಿನಾಂಕ: 18-03-2021 ರಂದು ಮಧ್ಯಾಹ್ನ 15-00 ಗಂಟೆಯ ನಡುವಿನ ಅವಧಿಯಲ್ಲಿ ಅಶಕ್ತತೆಯಿಂದ ಸ್ವಾಭಾವಿಕವಾಗಿ ಮೃತಪಟ್ಟಿರುತ್ತಾನೆಯೇ ಹೊರತು ಅವನ ಮರಣದಲ್ಲಿ ಬೇರೇ ಯಾವುದೇ ಸಂಶಯ ಇರುವುದಿಲ್ಲ ಎಂಬ ಬಗ್ಗೆ ಪಿರ್ಯಾದಿ ಶ್ರೀ ಶಂಕರ ತಂದೆ ನಾರಾಯಣ ಕೊರಗ, ಪ್ರಾಯ-35 ವರ್ಷ, ವೃತ್ತಿ-ಬೈಂದೂರ ಸರ್ಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರ, ಸಾ|| ಮನೆ ನಂ: 1-191, ಶಾರದಾಹೊಳೆ, ಎಳಜೀತ, ತಾ: ಬೈಂದೂರ, ಜಿ: ಉಡುಪಿ ರವರು ದಿನಾಂಕ: 19-03-2021 ರಂದು 10-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

ಇತ್ತೀಚಿನ ನವೀಕರಣ​ : 20-03-2021 12:54 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080