ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 19-05-2021

at 00:00 hrs to 24:00 hrs

 

ಕಾರವಾರ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 55/2021, ಕಲಂ: 269, 271 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ಮಾಲಿಕರು, ಅಂಕೋಲಾ ನರಸಿಂಹ ಮಾರ್ಕೆಟ್, ಸಾ|| ರಾಯ್ಕರ್ ಮೆನನ್ ಹತ್ತಿರ, ಕೈಗಾ ರಸ್ತೆ, ಹಬ್ಬುವಾಡ, ಕಾರವಾರ, 2]. ಮಾಲಿಕರು, ಶ್ರೀ ದುರ್ಗಾ ಪ್ರಸಾದ ವಾಗ ಬುಕ್ ಸ್ಟಾಲ್, ಸಾ|| ನವತಾರಾ ಲಾಡ್ಜ್ ಹತ್ತಿರ, ಕಾರವಾರ. ಕೋವಿಡ್-19 ಖಾಯಿಲೆ ಸಂಬಂಧ ಕಾರವಾರ ನಗರವನ್ನು ಸಂಪೂರ್ಣ ಕಂಟೈನಮೆಂಟ್ ಝೋನ್ ಎಂದು ಘೋಷಿಸಿದ ಲಾಕಡೌನ್ ಸಮಯದಲ್ಲಿ ನಮೂದಿತ ಆರೋಪಿತರು ದಿನಾಂಕ: 19-05-2021 ರಂದು 09-30 ಗಂಟೆಗೆ ತಮ್ಮ ಅಂಗಡಿ/ಹೊಟೇಲನ್ನು ತೆರೆದು ಕೋವಿಡ್ ನಿಯಮಗಳನ್ನು ಪಾಲಿಸದೇ ವ್ಯಾಪಾರ ಮಾಡುತ್ತಿದ್ದು, ಪಿರ್ಯಾದಿಯವರು ಅನೇಕ ಬಾರಿ ಮೌಕಿಕವಾಗಿ ಸೂಚಿಸಿದರೂ ಸಹ ಯಾವುದೇ ಸೂಚನೆಯನ್ನು ಲೆಕ್ಕಿಸದೇ ಮಾರಣಾಂತಿಕ ಕೋವಿಡ್ ಖಾಯಿಲೆಯ ವಿರುದ್ಧ ನಿರ್ಲಕ್ಷ್ಯತನ ತೋರಿ ಉದ್ದಿಮೆಯನ್ನು ನಡೆಸುತ್ತಿದ್ದ ಬಗ್ಗೆ ಪಿರ್ಯಾದಿ ಶ್ರೀ ಆರ್. ಪಿ. ನಾಯ್ಕ, ಪೌರಾಯುಕ್ತರು, ನಗರ ಸಭೆ, ಕಾರವಾರ ಬಗ್ಗೆ ಪಿರ್ಯಾದಿ ಶ್ರೀ ಆರ್. ಪಿ. ನಾಯ್ಕ, ಪೌರಾಯುಕ್ತರು, ನಗರ ಸಭೆ, ಕಾರವಾರ ರವರು ದಿನಾಂಕ: 19-05-2021 ರಂದು 18-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹೊನ್ನಾವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 148/2021, ಕಲಂ: ಹುಡುಗ ಕಾಣೆ ನೇದ್ದರ ವಿವರ...... ನಮೂದಿತ ಕಾಣೆಯಾದ ಹುಡುಗ ಕುಮಾರ: ಪ್ರಜ್ವಲ ತಂದೆ ಗೋಪಾಲ ಉಪ್ಪಾರ, ಪ್ರಾಯ-15 ವರ್ಷ, ಸಾ|| ಉಪ್ಪಾರಕೇರಿ, ಸರಳಗಿ, ತಾ: ಹೊನ್ನಾವರ. ಪಿರ್ಯಾದಿಯ ತಮ್ಮನಾದ ಈತನು ದಿನಾಂಕ: 19-05-2021 ರಂದು 12-15 ಗಂಟೆಗೆ ತನ್ನ ಸ್ನೇಹಿತರೊಂದಿಗೆ ಈಜಾಡಲು ಸರಳಗಿಯ ಶರಾವತಿ ಹೊಳೆಗೆ ಹೋದವನು, ಸಮಯ 12-15 ಗಂಟೆಯಿಂದ 13-00 ಗಂಟೆಯ ನಡುವಿನ ಅವಧಿಯಲ್ಲಿ ಶರಾವತಿ ನದಿಯಲ್ಲಿ ಈಜಾಡುತ್ತಿದ್ದಾಗ ಏಕಾಏಕಿ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದು, ಕಾಣೆಯಾದ ತನ್ನ ತಮ್ಮನಿಗೆ ಸರಳಗಿಯ ಶರಾವತಿ ನದಿಯಲ್ಲಿ ಹುಡುಕಾಡಿ ಎಲ್ಲಿಯೂ ಸಿಗದೇ ಇದ್ದಾಗ ಕಾಣೆಯಾದ ತನ್ನ ತಮ್ಮನಿಗೆ ಹುಡುಕಿ ಕೊಡಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ಪ್ರಮೋದ ತಂದೆ ಗೋಪಾಲ ಉಪ್ಪಾರ, ಪ್ರಾಯ-22 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಉಪ್ಪಾರಕೇರಿ, ಸರಳಗಿ, ತಾ: ಹೊನ್ನಾವರ ರವರು ದಿನಾಂಕ: 19-05-2021 ರಂದು 19-40 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ದಾಂಡೇಲಿ ನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 51/2021, ಕಲಂ: 269, 271 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಪ್ರಶಾಂತ ತಂದೆ ರಾಮಚಂದ್ರ ಕಲಾಲ್, ಪ್ರಾಯ-28 ವರ್ಷ, ವೃತ್ತಿ-ಕಿರಾಣಿ ವ್ಯಾಪಾರ, ಸಾ|| ಹಳಿಯಾಳ ರಸ್ತೆ, ದಾಂಡೇಲಿ. ಜಗತ್ತಿನಾದ್ಯಂತ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಹರಡಿಕೊಂಡಿದ್ದು, ಅದು ಭಾರತ ದೇಶದಲ್ಲಿಯೂ ವ್ಯಾಪಕವಾಗಿ ಹರಡುತ್ತಿದ್ದು, ಅದರಂತೆ ಕರ್ನಾಟಕ ರಾಜ್ಯ ಸರಕಾರವು ಜನತಾ ಲಾಕಡೌನ್ ಘೊಷಣೆ ಮಾಡಿ ಆದೇಶಿಸಿದ್ದು, ಮಾನ್ಯ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರು ದಿನಾಂಕ: 16-05-2021 ರಿಂದ 24-05-2021 ರವರೆಗೆ ಹೆಚ್ಚುವರಿ ಕ್ರಮ ಕೈಗೊಳ್ಳಲು ಆದೇಶಿಸಿ, ದಾಂಡೇಲಿ ನಗರವನ್ನು ವಿಶೇಷ ಕಂಟೈನಮೆಂಟ್ ಝೋನ್ ಆಗಿ ಘೋಷಿಸಿ, ಅಂಗಡಿಗಳಲ್ಲಿ ವ್ಯಾಪಾರ ವಹಿವಾಟನ್ನು ನಿಷೇಧಿಸಿದ್ದು ಇರುತ್ತದೆ. ಆದರೆ ನಮೂದಿತ ಆರೋಪಿತನು ತಾನು ಅಂಗಡಿಯನ್ನು ತೆರೆದು ವ್ಯಾಪಾರ ಮಾಡಿದರೆ ಅಲ್ಲಿ ಜನರು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ, ಸಾಂಕ್ರಾಮಿಕ ರೋಗ ಒಬ್ಬರಿಂದ ಒಬ್ಬರಿಗೆ ಹರಡಿ ಪ್ರಾಣಕ್ಕೆ ತೊಂದರೆ ಆಗಬಹುದು ಅಂತಾ ಗೊತ್ತಿದ್ದರೂ ಸಹ ದಿನಾಂಕ: 19-05-2021 ರಂದು 17-15 ಗಂಟೆಯಿಂದ 17-20 ಗಂಟೆಯವರೆಗೆ ದಾಂಡೇಲಿ-ಹಳಿಯಾಳ ರಸ್ತೆಯಲ್ಲಿರುವ ತನ್ನ ಕಿರಾಣಿ ಅಂಗಡಿಯನ್ನು ತೆರೆದು ವ್ಯಾಪಾರ ವಹಿವಾಟು ನಡೆಸಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಯಲ್ಲಪ್ಪ ಎಸ್, ಪಿ.ಎಸ್.ಐ (ಕಾ&ಸು), ದಾಂಡೇಲಿ ನಗರ ಪೊಲೀಸ್ ಠಾಣೆ ರವರು ದಿನಾಂಕ: 19-05-2021 ರಂದು 18-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 99/2021, ಕಲಂ: 269, 271 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ಶ್ರೀಶೈಲ ತಂದೆ ಗಂಗಪ್ಪ ಪುಟಿನ್, ಪ್ರಾಯ-36 ವರ್ಷ, ವೃತ್ತಿ-ಕೃಷಿ ಕೆಲಸ, ಸಾ|| ಸಂಪಗಾವ, ಮೇನ್ ರೋಡ್, ತಾ: ಬೈಲಹೊಂಗಲ್, ಜಿ: ಬೆಳಗಾವಿ, 2]. ಚೇತನ ತಂದೆ ಮಲ್ಲಕಾರ್ಜುನ್ ಸಿದ್ನಾಳ, ಪ್ರಾಯ-26 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ಉಪ್ಪಾರ ಓಣಿ, ಸಂಪಗಾಂವ, ತಾ: ಬೈಲಹೊಂಗಲ್, ಜಿ: ಬೆಳಗಾವಿ, 3]. ಮಹೇಶ ತಂದೆ ಗಂಗಪ್ಪಾ ಉಳ್ಳಾಗಡ್ಡಿ, ಪ್ರಾಯ-41 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ಮೇನ್ ರೋಡ್, ಸಂಪಗಾಂವ, ತಾ: ಬೈಲಹೊಂಗಲ್, ಜಿ: ಬೆಳಗಾವಿ. ಜಗತ್ತಿನಾದ್ಯಂತ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಹರಡಿಕೊಂಡಿದ್ದು, ಅದು ಭಾರತ ದೇಶದಲ್ಲಿಯೂ ವ್ಯಾಪಕವಾಗಿ ಹರಡುತ್ತಿದ್ದು, ಅದರಂತೆ ಕರ್ನಾಟಕ ರಾಜ್ಯ ಸರಕಾರವು ಜನತಾ ಲಾಕಡೌನ್ ಘೊಷಣೆ ಮಾಡಿ ಆದೇಶಿಸಿದ್ದು, ಮಾನ್ಯ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರು ದಿನಾಂಕ: 16-05-2021 ರಿಂದ 24-05-2021 ರವರೆಗೆ ಹೆಚ್ಚುವರಿ ಕ್ರಮ ಕೈಗೊಳ್ಳಲು ಆದೇಶಿಸಿ, ಹಳಿಯಾಳ ಶಹರವನ್ನು ವಿಶೇಷ ಕಂಟೈನಮೆಂಟ್ ಝೋನ್ ಆಗಿ ಘೋಷಿಸಿ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟನ್ನು ಹಾಗೂ ಸಾರ್ವಜನಿಕರ ಅನಾವಶ್ಯಕವಾದ ಓಡಾಟವನ್ನು ನಿಷೇಧಿಸಿದ್ದು ಇರುತ್ತದೆ. ಆದರೆ ನಮೂದಿತ ಆರೋಪಿತರು ತಮ್ಮ ಸಿಲ್ವರ್ ಬಣ್ಣದ ಇಂಡಿಕಾ ಕಾರ್ ನಂ: ಕೆ.ಎ-22/ಪಿ-5659 ನೇದರ ಮೇಲಾಗಿ ಕೂಡಿಕೊಂಡು ಇಡೀ ದೇಶಾದ್ಯಂತ ಕೊರೋನಾ ಸಾಂಕ್ರಾಮಿಕ ರೋಗ ವಿಪರೀತವಾಗಿ ಹರಡುತ್ತಿರುವುದು ಗೊತ್ತಿದ್ದರೂ ಸಹ ಆರೋಪಿತರು ಸದರ ಕಾರನ್ನು ತೆಗೆದುಕೊಂಡು ಹಳಿಯಾಳದಲ್ಲಿ ತಿರುಗಾಡಿ, ಜನತಾ ಲಾಕಡೌನ್ ಮತ್ತು ಸರಕಾರದ ಆದೇಶವನ್ನು ಪಾಲನೆ ಮಾಡದೇ ಉದ್ದೇಶ ಪೂರ್ವಕವಾಗಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ, ಸಾಂಕ್ರಾಮಿಕ ರೋಗ ಒಬ್ಬರಿಂದ ಒಬ್ಬರಿಗೆ ಹರಡಿ ಪ್ರಾಣಕ್ಕೆ ತೊಂದರೆ ಆಗಬಹುದು ಅಂತಾ ಗೊತ್ತಿದ್ದರೂ ಸಹ ದಿನಾಂಕ: 19-05-2021 ರಂದು 18-30 ಗಂಟೆಗೆ ಹಳಿಯಾಳ ಶಹರದ ಶಿವಾಜಿ ಸರ್ಕಲ್ ಹತ್ತಿರ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಶಿವಾನಂದ ನಾವದಗಿ, ಪಿ.ಎಸ್.ಐ (ಕಾ&ಸು), ಹಳಿಯಾಳ ಪೊಲೀಸ್ ಠಾಣೆ ರವರು ದಿನಾಂಕ: 19-05-2021 ರಂದು 20-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 19-05-2021

at 00:00 hrs to 24:00 hrs

 

ಪ್ರಕರಣಗಳು ದಾಖಲಾಗಿರುವುದಿಲ್ಲ....

 

======||||||||======

 

 

ಇತ್ತೀಚಿನ ನವೀಕರಣ​ : 20-05-2021 12:26 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080