ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂ:- 20-04-2022

at 00:00 hrs to 24:00 hrs

 

ಗೋಕರ್ಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 21/2022, ಕಲಂ: 78(3) ಕರ್ನಾಟಕ ಪೊಲೀಸ್ (ತಿದ್ದುಪಡಿ) ಅಧಿನಿಯಮ-2021 ನೇದ್ದರ ವಿವರ...... ನಮೂದಿತ ಆರೋಪಿತ ಜಯರಾಮ ತಂದೆ ಹನುಮಂತ ನಾಯ್ಕ, ಪ್ರಾಯ-38 ವರ್ಷ, ವೃತ್ತಿ-ಬೋಟಿನಲ್ಲಿ ಕೆಲಸ, ಸಾ|| ತದಡಿ, ಗೋಕರ್ಣ, ತಾ: ಕುಮಟಾ. ಈತನು ದಿನಾಂಕ: 20-04-2022 ರಂದು ಬೆಳಿಗ್ಗೆ 11-00 ಗಂಟೆಯ ಸುಮಾರಿಗೆ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯ ತದಡಿ ಗ್ರಾಮದ ಶ್ರೀ ಅಶ್ವಥ್ ಗಣಪತಿ ದೇವಸ್ಥಾನ ಎದುರಿನ ರಸ್ತೆಯ ಮೇಲೆ ಸಾರ್ವಜನಿಕ ಸ್ಥಳದಲ್ಲ್ಲಿ ತನ್ನ ಲಾಭಕ್ಕೋಸ್ಕರ ಬರ-ಹೋಗುವ ಸಾರ್ವಜನಿಕರನ್ನು ಕರೆಯುತ್ತಾ ತಮ್ಮ ತಮ್ಮ ಅದೃಷ್ಟದ ಸಂಖ್ಯೆಗಳ ಮೇಲೆ ಹಣ ಪಂಥ ಕಟ್ಟಿ ಅದೃಷ್ಟ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳಿ ಅವರ ಮನವೊಲಿಸಿ, ಸಾರ್ವಜನಿಕರಿಂದ ಅಕ್ರಮವಾಗಿ ಹಣ ಪಡೆದು ಅವರು ಹೇಳಿದ ಅಂಕೆ-ಸಂಖ್ಯೆಯನ್ನು ತನ್ನ ಹತ್ತಿರ ಇರುವ ಚೀಟಿಯಲ್ಲಿ ಬರೆದುಕೊಂಡು ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿದ್ದಾಗ ನಗದು ಹಣ 1,460/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರವೀಂದ್ರ ಎಮ್. ಬಿರಾದಾರ, ಪಿ.ಎಸ್.ಐ (ಕಾ&ಸು), ಗೋಕರ್ಣ ಪೊಲೀಸ್ ಠಾಣೆ ರವರು ದಿನಾಂಕ: 20-04-2022 ರಂದು 12-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಕುಮಟಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 86/2022, ಕಲಂ: 279, 338 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಶಿವಾನಂದ ತಂದೆ ಗಜಾನನ ಪ್ರಸಾದ, ಪ್ರಾಯ-43 ವರ್ಷ, ಸಾ|| ಗೋಕರ್ಣ, ತಾ: ಕುಮಟಾ (ಮೋಟಾರ್ ಸೈಕಲ್ ನಂ: ಕೆ.ಎ-47/ಇ-0451 ನೇದರ ಚಾಲಕ). ಈತನು ದಿನಾಂಕ: 12-04-2022 ರಂದು ಮುಂಜಾನೆ 06-15 ಗಂಟೆಗೆ ತನ್ನ ಮೋಟಾರ್ ಸೈಕಲ್ ನಂ: ಕೆ.ಎ-47/ಇ-0451 ನೇದರ ಹಿಂಬದಿಯಲ್ಲಿ ತನ್ನ ಮಗ ಕು: ಶರತ ಪ್ರಸಾದ, ಈತನನ್ನು ಕೂರಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-66 ರಲ್ಲಿ ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ಅತೀವೇಗವಾಗಿ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗಿ, ಕುಮಟಾ ದುಂಡಕುಳಿಯ ಬೊಂಬೆಬಬ್ರ ದೇವಸ್ಥಾನದ ಹತ್ತಿರ ರಸ್ತೆಯು ಆತನ ಎಡಕ್ಕೆ ತಿರುವು ಇರುವುದನ್ನು ಗಮನಿಸದೇ ಮೋಟಾರ್ ಸೈಕಲನ್ನು ನೇರವಾಗಿ ಚಲಾಯಿಸಿ, ಮಿರ್ಜಾನ ಕಡೆಯಿಂದ ಕುಮಟಾ ಕಡೆಗೆ ಬರುತ್ತಿದ್ದ ಪಿರ್ಯಾದಿಯಯ ಅಕ್ಕನ ಮಗ ಸುನೀಲ ತಂದೆ ಪುರಸಯ್ಯ ಪಟಗಾರ, ಪ್ರಾಯ-19 ವರ್ಷ, ವೃತ್ತಿ-ಹಣ್ಣಿನ ಅಂಗಡಿಯಲ್ಲಿ ಕೆಲಸ, ಸಾ|| ಗೌಡ್ರಕೇರಿ, ನಾಗೂರು, ತಾ: ಕುಮಟಾ ಈತನು ಚಲಾಯಿಸಿಕೊಂಡು ಬರುತ್ತಿದ್ದ ಮೋಟಾರ್ ಸೈಕಲ್ ನಂ: ಕೆ.ಎ-47/ಇ-8191 ನೇದಕ್ಕೆ ಮುಂದಿನಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿ, ಎರಡು ಮೋಟಾರ್ ಸೈಕಲಿನಲ್ಲಿದ್ದವರು ರಸ್ತೆಯಲ್ಲಿ ಬೀಳುವಂತೆ ಮಾಡಿ, ಮೋಟಾರ್ ಸೈಕಲ್ ಜಖಂಗೊಳಿಸಿದ್ದಲ್ಲದೇ, ಸುನೀಲ ಪಟಗಾರ ಈತನಿಗೆ ತಲೆಯ ಹಿಂಭಾಗಕ್ಕೆ, ಹಣೆಗೆ ಹಾಗೂ ಆತನ ಮೋಟಾರ್ ಸೈಕಲ್ ಹಿಂಬದಿಯಲ್ಲಿ ಕುಳಿತ ಶರತ ಶಿವಾನಂದ ಪ್ರಸಾದ. ಈತನಿಗೆ ತಲೆಗೆ ತೀವೃ ಗಾಯವಾಗುವಂತೆ ಮಾಡಿದ್ದಲ್ಲದೇ, ಆರೋಪಿ ಮೋಟಾರ್ ಸೈಕಲ್ ಸವಾರನು ತನಗೂ ಸಹ ಕಣ್ಣಿನ ಹತ್ತಿರ ತೀವೃ ಸ್ವರೂಪದ ಗಾಯ ಪಡಿಸಿಕೊಂಡ ಬಗ್ಗೆ ಪಿರ್ಯಾದಿ ಶ್ರೀ ಲಕ್ಷ್ಮಣ ತಂದೆ ಪಾಂಡುರಂಗ ಪಟಗಾರ, ಪ್ರಾಯ-45 ವರ್ಷ, ವೃತ್ತಿ-ಗಾರೆ ಕೆಲಸ, ಸಾ|| ಸಂಡೋಳ್ಳಿ, ಮುತ್ತಳ್ಳಿ, ಕತಗಾಲ, ತಾ: ಕುಮಟಾ ರವರು ದಿನಾಂಕ: 20-04-2022 ರಂದು 18-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 37/2022, ಕಲಂ: 78(3) ಕರ್ನಾಟಕ ಪೊಲೀಸ್ (ತಿದ್ದುಪಡಿ) ಅಧಿನಿಯಮ-2021 ನೇದ್ದರ ವಿವರ...... ನಮೂದಿತ ಆರೋಪಿತ ವಿನಾಯಕ ತಂದೆ ತಿಮ್ಮಯ್ಯ ನಾಯ್ಕ, ಪ್ರಾಯ-22 ವರ್ಷ, ವೃತ್ತಿ-ವ್ಯಾಪಾರ, ಸಾ|| ಹಾರ್ನಗದ್ದೆ, ಜಾಲಿ, ತಾ: ಭಟ್ಕಳ. ಈತನು ದಿನಾಂಕ: 20-04-2022 ರಂದು 11-15 ಗಂಟೆಯ ಸಮಯಕ್ಕೆ ಗಾಂಧಿನಗರ, ಹೆಬಳೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 70/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 1,500/- ರೂಪಾಯಿಯೊಂದಿಗೆ ಆರೋಪಿತನು ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ (ಕಾ&ಸು), ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 20-04-2022 ರಂದು 13-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 38/2022, ಕಲಂ: 32, 34 ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ನಾಗರಾಜ ತಂದೆ ಮಾದೇವ ನಾಯ್ಕ, ಪ್ರಾಯ-35 ವರ್ಷ, ವೃತ್ತಿ-ಕಿರಾಣಿ ಅಂಗಡಿ ವ್ಯಾಪಾರ, ಸಾ|| ಕೆ.ಬಿ ರೋಡ್, ಚೌಥಣಿ, ತಾ: ಭಟ್ಕಳ. ಈತನು ದಿನಾಂಕ: 20-04-2022 ರಂದು 15-00 ಗಂಟೆಯ ಸಮಯಕ್ಕೆ ಮಾವಿನಕುರ್ವಾ ಬಂದರ್ ಧಕ್ಕೆಯ ಹತ್ತಿರ ಕರಿಕಲ್ ಹೋಗುವ ರಸ್ತೆಯಲ್ಲಿ ತನ್ನ ಅಂಗಡಿಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ 1). OLD TAVERN WHISKY-180 ML ನ ಪ್ಯಾಕೆಟ್ ಗಳು–7, 2). BAGPIPER WHISKY-180 ML ನ ಪ್ಯಾಕೆಟ್ ಗಳು-8, 3). HAYWARDS WHISKY-90 ML ನ ಪ್ಯಾಕೆಟ್ ಗಳು-12, 4). McDowell’s WHISKY-90 ML ನ ಪ್ಯಾಕೆಟ್ ಗಳು-5, ಹೀಗೆ ಒಟ್ಟು 2,350.55/- ರೂಪಾಯಿ ಮೌಲ್ಯದ ಸರಾಯಿ ಸ್ವತ್ತುಗಳನ್ನು ಒಂದು ಪ್ಲಾಸ್ಟಿಕ್ ಬಕೆಟ್ ನಲ್ಲಿ ತನ್ನ ತಾಬಾದಲ್ಲಿ ಇಟ್ಟುಕೊಂಡು ಯಾವುದೇ ಪಾಸ್ ಯಾ ಪರ್ಮಿಟ್ ಇಲ್ಲದೇ ಮಾರಾಟ ಮಾಡುತ್ತಿದ್ದಾಗ ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ (ಕಾ&ಸು), ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 20-04-2022 ರಂದು 17-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 50/2022, ಕಲಂ: 78(3) ಕರ್ನಾಟಕ ಪೊಲೀಸ್ (ತಿದ್ದುಪಡಿ) ಅಧಿನಿಯಮ-2021 ನೇದ್ದರ ವಿವರ...... ನಮೂದಿತ ಆರೋಪಿತ 1]. ಮಂಜುನಾಥ ತಂದೆ ನಾರಾಯಣ ನಾಯ್ಕ, ಪ್ರಾಯ-35 ವರ್ಷ, ವೃತ್ತಿ-ಪಾನ್ ಶಾಪ್ ಅಂಗಡಿ, ಸಾ|| ತಗ್ಗರಗೋಡ, ಜಾಲಿ, ತಾ: ಭಟ್ಕಳ, 2]. ಈಶ್ವರ ನಾಯ್ಕ, ಸಾ|| ತಗ್ಗರಗೋಡ, ತಾ: ಭಟ್ಕಳ. ಈ ನಮೂದಿತ ಆರೋಪಿತರಲ್ಲಿ ಆರೋಪಿ 1 ನೇಯವನು ಓ.ಸಿ ಮಟಕಾ ಜೂಗಾರಾಟದಿಂದ  ಸಂಗ್ರಹವಾದ ಹಣವನ್ನು ಆರೋಪಿ 2 ನೇಯವನಿಗೆ ಕೊಡುವ ಬಗ್ಗೆ ಮಾತನಾಡಿಕೊಂಡು ದಿನಾಂಕ: 20-04-2022 ರಂದು 10-30 ಗಂಟೆಯ ಸುಮಾರಿಗೆ ಭಟ್ಕಳದ ಶಹರದ ಈದ್ಗಾ ಮೈದಾನದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 4,850/- ರೂಪಾಯಿ ಮತ್ತು ಓ.ಸಿ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡುಗಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 20-04-2022 ರಂದು 12-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 51/2022, ಕಲಂ: 78(3) ಕರ್ನಾಟಕ ಪೊಲೀಸ್ (ತಿದ್ದುಪಡಿ) ಅಧಿನಿಯಮ-2021 ನೇದ್ದರ ವಿವರ...... ನಮೂದಿತ ಆರೋಪಿತ ಸಂತೋಷ ತಂದೆ ಪರಮೇಶ್ವರ ನಾಯ್ಕ, ಪ್ರಾಯ-28 ವರ್ಷ, ಸಾ|| ಕಾರಗದ್ದೆ, ತಾ: ಭಟ್ಕಳ. ಈತನು ದಿನಾಂಕ: 20-04-2022 ರಂದು 12-30 ಗಂಟೆಯ ಸುಮಾರಿಗೆ ಭಟ್ಕಳದ ಶಹರದ ಈದ್ಗಾ ಮೈದಾನದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 2,050/- ರೂಪಾಯಿ ಮತ್ತು ಓ.ಸಿ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡುಗಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 20-04-2022 ರಂದು 14-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 52/2022, ಕಲಂ: 279, 337 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಸುಲೈಮನ್ ತಂದೆ ಅಬ್ದುಲ್ ಶೇಖ್, ಪ್ರಾಯ-28 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬದ್ರಿಯಾ ಕಾಲೋನಿ, ತಾ: ಭಟ್ಕಳ (ಮೋಟಾರ್ ಸೈಕಲ್ ನಂ: ಕೆ.ಎ-47/ಆರ್-3474 ನೇದರ ಸವಾರ). ಈತನು ದಿನಾಂಕ: 15-04-2022 ರಂದು ಮಧ್ಯಾಹ್ನ 15-00 ಗಂಟೆಯ ಸುಮಾರಿಗೆ ಭಟ್ಕಳ ಶಹರದ ಜಾಲಿ ರಸ್ತೆಯ ಖತೀಜಾ ತುಲ್-ಖುಬ್ರಾ ಮಸೀದಿಯ ಹತ್ತಿರ ತನ್ನ ಮೋಟಾರ್ ಸೈಕಲ್ ನಂ: ಕೆ.ಎ-47/ಆರ್-3474 ನೇದರ ಹಿಂಬದಿಯಲ್ಲಿ ತನ್ನ ಸಂಬಂಧಿಯಾದ ಶ್ರೀ ಜಾಪರ್ ಸಾಧಿಕ್ ಖತೀಬ್ ತಂದೆ ಇಬ್ರಾಹಿಮ್, ಪ್ರಾಯ-30 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬದ್ರಿಯಾ ಕಾಲೋನಿ, ತಾ: ಭಟ್ಕಳ ಇವರನ್ನು ಕೂಡ್ರಿಸಿಕೊಂಡು ಸದ್ರಿ ಮೋಟಾರ್ ಸೈಕಲನ್ನು ಜಾಲಿ ಕಡೆಯಿಂದ ಭಟ್ಕಳ ಶಹರದ ಕಡೆಗೆ ಅತೀವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬರುತ್ತಿದ್ದವನು, ಮೋಟಾರ್ ಸೈಕಲ್ ಮೇಲೆ ನಿಯಂತ್ರಣ ಕಳೆದುಕೊಂಡು ಪಲ್ಟಿ ಕೆಡವಿ ಅಪಘಾತ ಪಡಿಸಿ, ಮೋಟಾರ್ ಸೈಕಲ್ ಹಿಂಬದಿಯ ಸವಾರನ ತಲೆಗೆ ಬಲಭುಜಕ್ಕೆ ಸಾದಾ ಸ್ವರೂಪದ ಗಾಯನೋವು ಪಡಿಸಿದ್ದಲ್ಲದೇ, ತನಗೂ ಕೂಡ ಸಾದಾ ಸ್ವರೂಪದ ಗಾಯನೋವು ಪಡಿಸಿಕೊಂಡ ಬಗ್ಗೆ ಪಿರ್ಯಾದಿ ಶ್ರೀ ಇರ್ಪಾನ್ ಅಹ್ಮದ್ ತಂದೆ ಮೊಹಮ್ಮದ್ ಉಸ್ಮಾನ್, ಪ್ರಾಯ-36 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬದ್ರಿಯಾ ಕಾಲೋನಿ, ತಗ್ಗರಗೋಡ, ತಾ: ಭಟ್ಕಳ ರವರು ದಿನಾಂಕ: 20-04-2022 ರಂದು 16-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುಂಡಗೋಡ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 66/2022, ಕಲಂ: 15(ಎ), 32(3) ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ಮಂಜುನಾಥ ತಂದೆ ಸುಬ್ರಾಯ ಗಾಣಿಗ, ಪ್ರಾಯ-53 ವರ್ಷ, ವೃತ್ತಿ-ಹೊಟೇಲ್ ಕೆಲಸ, ಸಾ|| ಮಳಗಿ, ತಾ: ಮುಂಡಗೋಡ. ಈತನು ದಿನಾಂಕ: 20-04-2022 ರಂದು ಬೆಳಿಗ್ಗೆ 10-30 ಗಂಟೆಗೆ ಮುಂಡಗೋಡ ತಾಲೂಕಿನ ಮಳಗಿ ಗ್ರಾಮದ ಶಿರಸಿ-ಮುಂಡಗೋಡ ರಾಜ್ಯ ಹೆದ್ದಾರಿಯ ಪಕ್ಕದ ತನ್ನ ಹೊಟೇಲಿನಲ್ಲಿ ಯಾವುದೇ ಪಾಸ್ ಅಥವಾ ಪರ್ಮಿಟ್ ಇಲ್ಲದೇ ಮದ್ಯ ಸೇವಿಸಲು ಬಂದ ಸಾರ್ವಜನಿಕರಿಗೆ ಮದ್ಯ ಸೇವಿಸಲು ಅನುವು ಮಾಡಿಕೊಟ್ಟು, 90 ML ಅಳತೆಯ HAYWARDS Whisky ಅಂತಾ ಬರೆದ 05 ಪೌಚ್ ಗಳು (01 ಕ್ಕೆ 35.13/- ರೂಪಾಯಿ), ಅ||ಕಿ|| 175.65/- ರೂಪಾಯಿ, 90 ML ಅಳತೆಯ BANGALORE Whisky ಅಂತಾ ಬರೆದ 04 ಪೌಚ್ ಗಳು (01 ಕ್ಕೆ 27.98/- ರೂಪಾಯಿ), ಅ||ಕಿ|| 111.92/- ರೂಪಾಯಿ ಹಾಗೂ 90 ML ಅಳತೆಯ HAYWARDS Whisky ಅಂತಾ ಬರೆದ 02 ಖಾಲಿ ಪೌಚ್ ಗಳು, ಅರ್ಧ ಲೀಟರ್ ನೀರಿನ 01 ಪ್ಲಾಸ್ಟಿಕ್ ಖಾಲಿ ಬಾಟಲಿ ಹಾಗೂ ನಗದು ಹಣ 155/- ರೂಪಾಯಿಯೊಂದಿಗೆ ದಾಳಿ ಕಾಲಕ್ಕೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಬಸವರಾಜ ಮಬನೂರ, ಪಿ.ಎಸ್.ಐ, ಮುಂಡಗೋಡ ಪೊಲೀಸ್ ಠಾಣೆ ರವರು ದಿನಾಂಕ: 20-04-2022 ರಂದು 12-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುಂಡಗೋಡ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 67/2022, ಕಲಂ: 15(ಎ), 32(3) ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ವಿನೋದ ತಂದೆ ರಾಮಾ ನಾಯ್ಕ, ಪ್ರಾಯ-48 ವರ್ಷ, ವೃತ್ತಿ-ಹೊಟೇಲ್ ವ್ಯಾಪಾರ, ಸಾ|| ಸಿದ್ದಾಪುರ ಓಣಿ, ಮಳಗಿ, ತಾ: ಮುಂಡಗೋಡ. ಈತನು ದಿನಾಂಕ: 20-04-2022 ರಂದು 13-15 ಗಂಟೆಗೆ ಮುಂಡಗೋಡ ತಾಲೂಕಿನ ಮಳಗಿ ಗ್ರಾಮದಲ್ಲಿ ಕುರ್ಲಿ ರಸ್ತೆಯಲ್ಲಿರುವ ತನ್ನ ಹೊಟೇಲಿನಲ್ಲಿ ಸಾರ್ವಜನಿಕರಿಗೆ ಯಾವುದೇ ಪಾಸ್ ಅಥವಾ ಪರ್ಮಿಟ್ ಇಲ್ಲದೇ ಮದ್ಯ ಸೇವಿಸಲು ಅನುವು ಮಾಡಿಕೊಟ್ಟಿರುವಾಗ 90 ML ಅಳತೆಯ HAYWARDS CHEERS WHISKY-04 ಪೌಚ್ ಗಳು, 90 ML ಅಳತೆಯ HAYWARDS CHEERS WHISKY ಅಂತಾ ಬರೆದ 03 ಖಾಲಿ 04 ಪೌಚ್ ಗಳು, 02 ಪ್ಲಾಸ್ಟಿಕ್ ಗ್ಲಾಸ್, 01 ನೀರಿನ ಬಾಟಲಿ ಹಾಗೂ ನಗದು ಹಣ 225/- ರೂಪಾಯಿಯೊಂದಿಗೆ ದಾಳಿಯ ಕಾಲಕ್ಕೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಬಸವರಾಜ ಮಬನೂರ, ಪಿ.ಎಸ್.ಐ, ಮುಂಡಗೋಡ ಪೊಲೀಸ್ ಠಾಣೆ ರವರು ದಿನಾಂಕ: 20-04-2022 ರಂದು 15-20 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಸಿದ್ದಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 57/2022, ಕಲಂ: 15(ಎ), 32(3) ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ಪ್ರಶಾಂತ ತಂದೆ ಮಂಜುನಾಥ ನಾಯ್ಕ, ಪ್ರಾಯ-37 ವರ್ಷ, ವೃತ್ತಿ-ಪಾಸ್ಟಪುಡ್ ಅಂಗಡಿ, ಸಾ|| ಅತ್ತಿಕೊಪ್ಪ, ಕವಲಕೊಪ್ಪ ಗ್ರಾಮ, ತಾ: ಸಿದ್ದಾಪುರ. ಈತನು ದಿನಾಂಕ: 20-04-2022 ರಂದು 18-30 ಗಂಟೆಗೆ ಸಿದ್ದಾಪುರ ತಾಲೂಕಿನ ಕವಲಕೊಪ್ಪ ಊರಿನಲ್ಲಿರುವ ತನ್ನ ಪಾಸ್ಟಪುಡ್ ಅಂಗಡಿಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಸಾರ್ವಜನಿಕರಿಗೆ ಮುಕ್ತವಾಗಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿ ಕೊಟ್ಟಿದ್ದಾಗ ಪಿರ್ಯಾದಿಯವರು ಪಂಚರು ಮತ್ತು ಸಿಬ್ಬಂದಿಗಳೊಂದಿಗೆ ಸೇರಿ ದಾಳಿ ಮಾಡಿದಾಗ 1). Original Choice Deluxe Whisky-90 ML ಅಂತಾ ಬರೆದ ಮದ್ಯ ತುಂಬಿದ 04 ಟೆಟ್ರಾ ಪ್ಯಾಕೆಟ್ ಗಳು, 2). Original Choice Deluxe Whisky-90 ML ಅಂತಾ ಬರೆದ ಕಾಲಿ 2 ಮದ್ಯದ ಟೆಟ್ರಾ ಪ್ಯಾಕೆಟ್ ಗಳು ಮತ್ತು 2 ಪ್ಲಾಸ್ಟಿಕ್ ಗ್ಲಾಸ್. ಇವುಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಮಹಾಂತಪ್ಪ ಜಿ. ಕುಂಬಾರ, ಪಿ.ಎಸ್.ಐ, ಸಿದ್ದಾಪುರ ಪೊಲೀಸ್ ಠಾಣೆ ರವರು ದಿನಾಂಕ: 20-04-2022 ರಂದು 20-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 20-04-2022

at 00:00 hrs to 24:00 hrs

 

ಮುಂಡಗೋಡ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 13/2022, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ವ್ಯಕ್ತಿ ಶ್ರೀ ನಾಗರಾಜ ತಂದೆ ದೇವೇಂದ್ರಪ್ಪ ದಡೇದವರ, ಪ್ರಾಯ-48 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ನ್ಯಾಸರ್ಗಿ, ತಾ: ಮುಂಡಗೋಡ. ಪಿರ್ಯಾದಿಯ ಚಿಕ್ಕಪ್ಪನವರಾದ ಇವರು ವಿಪರೀತ ಸರಾಯಿ ಕುಡಿಯುವ ಚಟದವನಿದ್ದು, ಸರಾಯಿ ಕುಡಿದ ನಶೆಯಲ್ಲಿ ನ್ಯಾಸರ್ಗಿ ಗ್ರಾಮದಲ್ಲಿಯ ಅವರ ಹೊಲದ ಪಕ್ಕದಲ್ಲಿ ಹಾದಿರುವ ರಸ್ತೆಯಲ್ಲಿ ದಿನಾಂಕ: 19-04-2022 ರಂದು 20-30 ಗಂಟೆಯಿಂದ 21-30 ಗಂಟೆಯ ನಡುವಿನ ಅವಧಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಜೋಲಿ ತಪ್ಪಿ ಬಿದ್ದು, ಮಾತನಾಡದ ಸ್ಥಿತಿಯಲ್ಲಿದ್ದವನಿಗೆ ಮುಂಡಗೋಡದ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 20-04-2022 ರಂದು ಬೆಳಿಗ್ಗೆ 11-00 ಗಂಟೆಗೆ ಮೃತಪಟ್ಟಿರುತ್ತಾರೆ. ಇದರ ಹೊರತು ಅವರ ಮರಣದ ಬಗ್ಗೆ ಬೇರೇ ಯಾವುದೇ ಸಂಶಯವಿರುವುದಿಲ್ಲ. ಈ ಕುರಿತು ನನ್ನ ಚಿಕ್ಕಪ್ಪನವರ ಮೃತದೇಹವು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಇರುತ್ತದೆ. ಈ ಕುರಿತು ಮುಂದಿನ ಕಾನೂನು ಕ್ರಮ ಜರುಗಿಸಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ಪ್ರಮೋದ ತಂದೆ ಸುರೇಶ ದಡೇದವರ, ಪ್ರಾಯ-36 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ನ್ಯಾಸರ್ಗಿ, ತಾ: ಮುಂಡಗೋಡ ರವರು ದಿನಾಂಕ: 20-04-2022 ರಂದು 14-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

 

 

ಇತ್ತೀಚಿನ ನವೀಕರಣ​ : 04-05-2022 06:53 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080