ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 20-08-2021

at 00:00 hrs to 24:00 hrs

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 99/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ವಸಂತ ತಂದೆ ಮಾದೇವ ನಾಯ್ಕ, ಪ್ರಾಯ-39 ವರ್ಷ, ವೃತ್ತಿ-ವ್ಯಾಪಾರ, ಸಾ|| ಕೋಟೆಬಾಗಿಲು, ಶಿರಾಲಿ, ತಾ: ಭಟ್ಕಳ. ಈತನು ದಿನಾಂಕ: 20-08-2021 ರಂದು 18-00 ಗಂಟೆಯ ಸಮಯಕ್ಕೆ ಶಿರಾಲಿ ಕೋಟೆಬಾಗಿಲು ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 70/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ, ಓ.ಸಿ ಮಟಕಾ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 730/- ರೂಪಾಯಿಯೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ (ಕಾ&ಸು), ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 20-08-2021 ರಂದು 19-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹಳಿಯಾಳ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 99/2021, ಕಲಂ: ಹೆಂಗಸು ಕಾಣೆ ನೇದ್ದರ ವಿವರ...... ನಮೂದಿತ ಕಾಣೆಯಾದ ಹೆಂಗಸು ಶ್ರೀಮತಿ ಲಕ್ಷ್ಮೀ ಕೋಂ. ಮನೀಷ್ ಜೈನ್, ಪ್ರಾಯ-27 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಬಾಸ್ವಾಡ, ರಾಜಸ್ಥಾನ, ಹಾಲಿ ಸಾ|| ದೇಶಪಾಂಡೆ ನಗರ, ತಾ: ಹಳಿಯಾಳ. ಪಿರ್ಯಾದಿಯ ಮಗಳಾದ ಇವಳು 2 ತಿಂಗಳ ಹಿಂದೆ ರಾಜಸ್ಥಾನ ರಾಜ್ಯದಿಂದ ಹಳಿಯಾಳಕ್ಕೆ ಪಿರ್ಯಾದಿಯ ಮನೆಗೆ ಬಂದವಳು, ದಿನಾಂಕ: 19-08-2021 ರಂದು ರಾತ್ರಿ 08-00 ಗಂಟೆಗೆ ಹಳಿಯಾಳ ಶಹರದ ದೇಶಪಾಂಡೆ ನಗರದ ಪಿರ್ಯಾದಿಯ ಮನೆಯಿಂದ ‘ಮೊಹರಂ ಹಬ್ಬವನ್ನು ನೋಡಿಕೊಂಡು ಬರುತ್ತೇನೆ’ ಅಂತಾ ಪಿರ್ಯಾದಿಗೆ ಹೇಳಿ ಮನೆಯಿಂದ ಹೋದವಳು, ಇಲ್ಲಿಯವರೆಗೆ ವಾಪಸ್ ಮನೆಗೆ ಬಾರದೇ ಸಂಬಂಧಿಕರ ಮನೆಗೂ ಹೋಗದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾಳೆ, ಸದ್ರಿ ಕಾಣೆಯಾದವಳನ್ನು ಹುಡುಕಿ ಕೊಡಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀಮತಿ ರೇಣುಕಾ ಕೋಂ. ಬಸವಂತ ಚಲವಾದಿ, ಪ್ರಾಯ-38 ವರ್ಷ, ವೃತ್ತಿ-ಮನೆ ಕೆಲಸ, ಸಾ|| ದೇಶಪಾಂಡೆ ನಗರ, ತಾ: ಹಳಿಯಾಳ ರವರು ದಿನಾಂಕ: 20-08-2021 ರಂದು 19-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 20-08-2021

at 00:00 hrs to 24:00 hrs

 

ಹಳಿಯಾಳ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 21/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ವ್ಯಕ್ತಿ ಶ್ರೀ ಪರಶುರಾಮ ತಂದೆ ರಾಮ ಡೇಪಿ, ಪ್ರಾಯ-57 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬಿದ್ರೊಳ್ಳಿ ಗ್ರಾಮ, ತಾ: ಹಳಿಯಾಳ. ಈತನು ದಿನಾಂಕ: 20-08-2021 ರಂದು ಬೆಳಿಗ್ಗೆ 09-00 ಗಂಟೆಯ ಸುಮಾರಿಗೆ ತಮ್ಮ ಊರಿನ ಜನರೊಂದಿಗೆ ಹಳಿಯಾಳ ತಾಲೂಕಿನ ಮೊದಲಗೇರಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಅಂಬುಡಗಾ ಅರಣ್ಯ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಕೆಲಸಕ್ಕೆ ಅಂತ ಹೋದವನು, ಕೆಲಸ ಮಾಡುತ್ತಿದ್ದಾಗ 12-00 ಗಂಟೆಯ ಸುಮಾರಿಗೆ ಆಕಸ್ಮಿಕವಾಗಿ ಕುಸಿದು ಬಿದ್ದು ಹೃದಯಾಘಾತದಿಂದಲೋ ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿದ್ದು, ಇದರ ಹೊರತಾಗಿ ಮೃತನ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ. ಅವನ ಮೃತದೇಹವು ಹಳಿಯಾಳದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದು, ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ಮಾರುತಿ ತಂದೆ ರಾಮ ಡೇಪಿ, ಪ್ರಾಯ-45 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬಿದ್ರೊಳ್ಳಿ ಗ್ರಾಮ, ತಾ: ಹಳಿಯಾಳ ರವರು ದಿನಾಂಕ: 20-08-2021 ರಂದು 13-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

ಇತ್ತೀಚಿನ ನವೀಕರಣ​ : 21-08-2021 01:24 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080