ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂ:- 22-04-2022

at 00:00 hrs to 24:00 hrs

 

ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆ ಕಾರವಾರ

ಅಪರಾಧ ಸಂಖ್ಯೆಃ 12/2022, ಕಲಂ: 420 ಐಪಿಸಿ ಹಾಗೂ ಕಲಂ: 66(ಸಿ)(ಡಿ) ಮಾಹಿತಿ ತಂತ್ರಜ್ಞಾನ ಕಾಯ್ದೆ-2000 ನೇದ್ದರ ವಿವರ...... ನಮೂದಿತ ಆರೋಪಿತರು ಮೊಬೈಲ್ ನಂ: +639296451627 ನೇದರ ಬಳಕೆದಾರರಾಗಿದ್ದು, ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ದಿನಾಂಕ: 17-04-2022 ರಂದು ಪಿರ್ಯಾದಿಯವರು ಸಾಮಾಜಿಕ ಜಾಲತಾಣದಲ್ಲಿ ಆನಲೈನ್ ಜಾಬ್ ಕುರಿತು ಪರಿಶೀಲಿಸುತ್ತಿರುವಾಗ ಅವರಿಗೆ ‘Shopee’ ಎಂಬ ಹೆಸರಿನ ಆ್ಯಪ್ ದೊರೆಕಿದ್ದು, ಸದರಿ ಆ್ಯಪ್ ನಲ್ಲಿ ಪಿರ್ಯಾದಿಯವರು ಆನಲೈನ್ ಜಾಬ್ ಕುರಿತು ಪರಿಶೀಲಿಸುತ್ತಿರುವಾಗ ನಮೂದಿತ ಆರೋಪಿತರ ಮೊಬೈಲ್ ನಂ: +639296451627 ನೇದರೊಂದಿಗೆ ವಾಟ್ಸಪ್ ಮೂಲಕ ಸಂಪರ್ಕ ಸಾಧಿಸಿದ್ದು, ಸದರಿಯವರು ಪ್ರಾರಂಭದಲ್ಲಿ ಕಮೀಷನ್ ರೂಪದಲ್ಲಿ ಚಿಕ್ಕ ಮೊತ್ತದ ಹಣವನ್ನು ಪಿರ್ಯಾದಿಯವರಿಗೆ ಪಾವತಿಸಿದ್ದು, ನಂತರದಲ್ಲಿ ಆರೋಪಿತರು ಪಿರ್ಯಾದಿಯವರಿಗೆ ಹಣವನ್ನು ಪಾವತಿಸಲು ನಿಲ್ಲಿಸಿ, ಸದರಿ ಹಣವನ್ನು ಪಾವತಿಸಲು ಕೆಲವು ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿ, ಪಿರ್ಯಾದಿಯವರಿಗೆ ಆರೋಪಿತನು ತನ್ನ ಮೊಬೈಲ್‍ನಿಂದ ಪಿರ್ಯಾದಿಯವರ ಮೊಬೈಲ್‍ಗೆ  ಕ್ಯೂ.ಆರ್ ಕೋಡಗಳನ್ನು ಕಳುಹಿಸಿಕೊಟ್ಟಿದ್ದು, ಸದರಿ ಆರೋಪಿತರು ವಾಟ್ಸಪ್ ಮುಖಾಂತರ ಕಳುಹಿಸಿಕೊಟ್ಟ ಕ್ಯೂ.ಆರ್ ಕೋಡ್ ಅನ್ನು ಪಿರ್ಯಾದಿಯವರು ಸ್ಕ್ಯಾನ್ ಮಾಡಿದ ಕೂಡಲೇ ಪಿರ್ಯಾದಿಯವರ ಬ್ಯಾಂಕ್ ಖಾತೆಯಿಂದ ಒಟ್ಟು 1,17,600/- ರೂಪಾಯಿ ಹಣವು ಡೆಬಿಟ್ ಆಗಿರುತ್ತದೆ ಎಂಬ ಬಗ್ಗೆ ಪಿರ್ಯಾದಿ ಶ್ರೀಮತಿ ಪ್ರಿಯಾಂಕಾ ಕೋಂ. ನವಶೇಖ ಪಠಾನಿಯಾ, ಪ್ರಾಯ-27 ವರ್ಷ, ವೃತ್ತಿ-ಮನೆವಾರ್ತೆ, ಸಾ|| ಪಿ80/4, ಕದಂಬ ವನಂ, ನೇವಲ್ ಬೇಸ್, ಕಾರವಾರ, ಹಾಲಿ ಸಾ|| ಭಾರಿ, ಫತೇಪುರ, ದಮೇತಾಖಾಸ ಕಂಗ್ರಾ, ಹಿಮಾಚಲ್ ಪ್ರದೇಶ-176025 ರವರು ದಿನಾಂಕ: 22-04-2022 ರಂದು 21-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಕಾರವಾರ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 24/2022, ಕಲಂ: 15(ಎ), 32(3) ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ಸಂತೋಷ ತಂದೆ ದತ್ತಾರಾಮ ನಾಯ್ಕ, ಪ್ರಾಯ-44 ವರ್ಷ, ವೃತ್ತಿ-ವ್ಯಾಪಾರ, ಸಾ|| ತಾರೆಭಾಗ, ಅವರ್ಸಾ, ತಾ: ಅಂಕೋಲಾ, ಹಾಲಿ ಸಾ|| ತೋಡೂರು ಕಾಲೋನಿ, ಕಾರವಾರ. ಈತನು ದಿನಾಂಕ: 22-04-2022 ರಂದು ಮಧ್ಯಾಹ್ನ 12-15 ಗಂಟೆಯ ಸಮಯಕ್ಕೆ ಕಾರವಾರದ ತೋಡೂರು ಕಾಲೋನಿಯ ರಸ್ತೆಯ ಪಕ್ಕದಲ್ಲಿ ತನ್ನ ಲಾಭದ ಸಲುವಾಗಿ ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ರೀತಿಯ ಲೈಸನ್ಸ್ ಇಲ್ಲದೇ ಮದ್ಯ ಸೇವಿಸಲು ಬಂದ ಸಾರ್ವಜನಿಕರಿಗೆ ತನ್ನ ಅಂಗಡಿಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಲು ಅನುವು ಮಾಡಿಕೊಡುತ್ತಿರುವಾಗ ದಾಳಿಯ ಕಾಲಕ್ಕೆ ಸಿಕ್ಕಿದ ಬಗ್ಗೆ ಪಿರ್ಯಾದಿ ಸ||ತ|| ಕು: ವಿಜಯಲಕ್ಷ್ಮೀ ಕಟಕದೊಂಡ, ಡಬ್ಲ್ಯೂ.ಪಿ.ಎಸ್.ಐ (ತನಿಖೆ), ಕಾರವಾರ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 15-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಚಿತ್ತಾಕುಲಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 21/2022, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಸುಶಲ್ ತಂದೆ ಪ್ರಕಾಶ ತೋಡುರಕರ್, ಪ್ರಾಯ-34 ವರ್ಷ, ವೃತ್ತಿ-ಎಲೆಕ್ಟ್ರಿಕಲ್ ಕೆಲಸ, ಸಾ|| ಹೊಸಪಟ್ಟಣ, ಮುಡಗೇರಿ, ಕಾರವಾರ. ಈತನು ದಿನಾಂಕ: 22-04-2022 ರಂದು 14-10 ಘಂಟೆಗೆ ಶ್ರೀ ಶಾಂತದುರ್ಗಾ ದೇವಿ ಮತ್ತು ಕುಕ್ಕಳ್ಳಿಕರಿಣ ದೇವಸ್ಥಾನದ ಎದುರುಗಡೆಯ ಶಾಮಿಯಾನ್ ಎನ್ನುವ ಬೋರ್ಡ್ ನ ಹತ್ತಿರ ರಸ್ತೆಯ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳಿ ದೊಡ್ಡದಾಗಿ ಕೂಗಿ ಕರೆದು ಅಂಕೆ-ಸಂಖ್ಯೆಗಳ ಮೇಲೆ ಪಂಥ ಕಟ್ಟಿಸಿಕೊಂಡು ಚೀಟಿಯನ್ನು ಬರೆದು ಕೊಡುತ್ತಿದ್ದವನಿಗೆ ದಾಳಿ ನಡೆಸಿ, ಹಿಡಿದು ಅವನಿಂದ ನಗದು ಹಣ 2,870/- ರೂಪಾಯಿ ಹಾಗೂ ಅಂಕೆ-ಸಂಖ್ಯೆ ಬರೆದ ಚೀಟಿ ಮತ್ತು ಕ್ಯಾಪ್ ಇಲ್ಲದ ಬಾಲ್ ಪೆನ್ ಅನ್ನು ವಶಪಡಿಸಿಕೊಂಡ ಬಗ್ಗೆ ಪಿರ್ಯಾದಿ ಸ||ತ|| ಶ್ರೀಮತಿ ಕಲ್ಪನಾ ಬಿ. ಆರ್, ಡಬ್ಲ್ಯೂ.ಪಿ.ಎಸ್.ಐ (ತನಿಖೆ), ಚಿತ್ತಾಕುಲಾ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 20-10 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಅಂಕೋಲಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 73/2022, ಕಲಂ: 8(c), 20(b)(ii)(A) ಎನ್.ಡಿ.ಪಿ.ಎಸ್ ಎಕ್ಟ್ ನೇದ್ದರ ವಿವರ...... ನಮೂದಿತ ಆರೋಪಿತರು 1]. ಅಪ್ತಾಬ್ ತಂದೆ ಅಲ್ತಾಫ್ ಶೇಕ್, ಪ್ರಾಯ-30 ವರ್ಷ, ವೃತ್ತಿ-ಚಾಲಕ, ಸಾ|| ಕಾಕರಮಠ, ತಾ: ಅಂಕೋಲಾ, 2]. ಅಲ್ತಾಫ್ ತಂದೆ ಇಕ್ಬಾಲ್ ಶೇಕ್, ಪ್ರಾಯ-32 ವರ್ಷ, ವೃತ್ತಿ-ಇನ್ಸೂರೆನ್ಸ್ ಏಜೆಂಟ್, ಸಾ|| ಅಜ್ಜಿಕಟ್ಟಾ, ತಾ: ಅಂಕೋಲಾ, 3]. ಆದೇಶ ತಂದೆ ಮಹಾಬಲೇಶ್ವರ ನಾಯ್ಕ, ಪ್ರಾಯ-28 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ತೆಂಕಣಕೇರಿ, ತಾ: ಅಂಕೋಲಾ. ಈ ನಮೂದಿತ ಆರೋಪಿತರು ದಿನಾಂಕ: 22-04-2022 ರಂದು 18-00 ಗಂಟೆಗೆ ಅಂಕೋಲಾ ಶಹರದ ಹುಲಿದೇವರವಾಡಾದ ಎ.ಪಿ.ಎಮ್.ಸಿ ಹತ್ತಿರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-66 ರ ರಸ್ತೆಯ ಬದಿಯಲ್ಲಿ ಯಾವುದೇ ಪಾಸ್ ಮತ್ತು ಪರ್ಮಿಟ್ ಇಲ್ಲದೇ ಅಕ್ರಮ ಲಾಭಕ್ಕಾಗಿ ಅ||ಕಿ|| 6,600/- ರೂಪಾಯಿಯ ಗಾಂಜಾ ಮಾದಕ ವಸ್ತುವನ್ನು ಮಾರಾಟ ಮಾಡುವ ಉದ್ದೇಶದಿಂದ ತಮ್ಮ ವಶದಲ್ಲಿಟ್ಟುಕೊಂಡಿದ್ದಾಗ ದಾಳಿಯ ಕಾಲಕ್ಕೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಸಂತೋಷ ಶೆಟ್ಟಿ, ಪೊಲೀಸ್ ನಿರೀಕ್ಷಕರು, ಅಂಕೋಲಾ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 20-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಕುಮಟಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 89/2022, ಕಲಂ: 279, 337 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಕೃಷ್ಣ ತಂದೆ ಲಕ್ಷ್ಮಣ ಜಾಲಿಸತ್ಗಿ, ಪ್ರಾಯ-62 ವರ್ಷ, ವೃತ್ತಿ-ಕೃಷಿ ಕೆಲಸ, ಸಾ|| ಕಡಕೋಡ, ನಾಗೂರ, ತಾ: ಕುಮಟಾ (ಮೋಟಾರ್ ಸೈಕಲ್ ನಂ: ಕೆ.ಎ-47/ಕ್ಯೂ-2801 ನ್ಭೆದರ ಸವಾರ). ಈತನು ದಿನಾಂಕ: 21-04-2022 ರಂದು 11-30 ಗಂಟೆಯ ಸುಮಾರಿಗೆ ತನ್ನ ಹೆಂಡತಿಯಾದ ಶ್ರೀಮತಿ ಅನೀತಾ ಜಾಲಿಸತ್ಗಿ, ಪ್ರಾಯ-48 ವರ್ಷ, ವೃತ್ತಿ-ಮನೆ ಕೆಲಸ, ಇವಳಿಗೆ ತನ್ನ ಮೋಟಾರ್ ಸೈಕಲ್ ನಂ: ಕೆ.ಎ-47/ಕ್ಯೂ-2801 ನೇದರ ಹಿಂದುಗಡೆ ಕೂರಿಸಿಕೊಂಡು ನಾಗೂರ ಕಡೆಯಿಂದ ಮಿರ್ಜಾನ ಕಡೆಗೆ ಹೋಗುತ್ತಿರುವಾಗ ಸಂತೆಗದ್ದೆ ಸಮೀಪ ತನ್ನ ಮೋಟಾರ್ ಸೈಕಲನ್ನು ಅತೀವೇಗವಾಗಿ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗಿ ಮೋಟಾರ್ ಸೈಕಲನ್ನು ನಿಯಂತ್ರಿಸಲಾಗದೇ, ಒಮ್ಮೇಲೆ ಬ್ರೇಕ್ ಹಾಕಿದ್ದರಿಂದ ಮೋಟಾರ್ ಸೈಕಲ್ ಹಿಂದೆ ಕುಳಿತ ಶ್ರೀಮತಿ ಅನೀತಾ ಜಾಲಿಸತ್ಗಿ, ಇವರನ್ನು ರಸ್ತೆಯ ಮೇಲೆ ಬೀಳಿಸಿ, ಅಪಘಾತ ಪಡಿಸಿದ್ದರಿಂದ ಶ್ರೀಮತಿ ಅನೀತಾ ಇವಳ ತಲೆಗೆ, ಬೆನ್ನಿಗೆ ಹಾಗೂ ಕೈಗೆ ಸಾದಾ ಗಾಯನೋವು ಪಡಿಸಿದ ಬಗ್ಗೆ ಪಿರ್ಯಾದಿ ಶ್ರೀ ರೋಹಿದಾಸ ತಂದೆ ನಾರಾಯಣ ಹೆಗಡೆಕರ್, ಪ್ರಾಯ-60 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ರಾಮನಗರ, ಮಿರ್ಜಾನ, ತಾ: ಕುಮಟಾ ರವರು ದಿನಾಂಕ: 22-04-2022 ರಂದು 12-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಕುಮಟಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 90/2022, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತರು 1]. ಪ್ರಕಾಶ ನಾಗೇಶ ಪಟಗಾರ, ಪ್ರಾಯ-28 ವರ್ಷ, ವೃತ್ತಿ-ಅಂಗಡಿ ಕೆಲಸ, ಸಾ|| ಮಾಸೂರು ಕ್ರಾಸ್, ತಾ: ಕುಮಟಾ, 2]. ಜಯಂತ ಸಾರಂಗ ನಾಯ್ಕ, ಪ್ರಾಯ-36 ವರ್ಷ, ವೃತ್ತಿ-ವ್ಯವಾಹಾರ, ಸಾ|| ಬಸ್ತಿಪೇಟೆ, ತಾ: ಕುಮಟಾ. ಈ ನಮೂದಿತ ಆರೋಪಿತರಲ್ಲಿ ಆರೋಪಿ 1 ನೇಯವನು ದಿನಾಂಕ: 22-04-2022 ರಂದು-11-45 ಗಂಟೆಗೆ ಕುಮಟಾ ತಾಲೂಕಿನ ಮಾಸೂರು ಕ್ರಾಸ್ ಕಿರಾಣಿ ಅಂಗÀ್ಯ ಎದುರು ಸಾರ್ವಜನಿಕ ಸ್ಥಳದಲ್ಲಿ ನಿಂತು ಬರ-ಹೋಗುವ ಜನರಿಗೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಕೂಗಿ ಹೇಳಿ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥ ಕಟ್ಟಿ ಓ.ಸಿ ಚೀಟಿ ಬರೆದು ಓ.ಸಿ ಮಟಕಾ ಜುಗರಾಟ ನಡೆಸುತ್ತಿದ್ದಾಗ ದಾಳಿಯ ಕಾಲ 1). ನಗದು ಹಣ 1,430/- ರೂಪಾಯಿ, 2). ಅಂಕೆ-ಸಂಖ್ಯೆ ಬರೆದ ಚೀಟಿ-01, ಅ||ಕಿ|| 00.00/- ರೂಪಾಯಿ, 3). ಬಾಲ್ ಪೆನ್-01, ಅ||ಕಿ|| 00.00/- ರೂಪಾಯಿ ಸಮೇತ ಸಿಕ್ಕಿದ್ದು, ಸದರಿ ಓ.ಸಿ ಆಟದಿಂದ ಸಂಗ್ರಹವಾದ ಹಣವನ್ನು ಓ.ಸಿ ಬುಕ್ಕಿಯಾದ ಆರೋಪಿ 2 ನೇಯವನಿಗೆ ನೀಡುತ್ತಿರುವುದಾಗಿ ತಿಳಿಸಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀಮತಿ ಚಂದ್ರಮತಿ ಪಟಗಾರ, ಡಬ್ಲ್ಯೂ.ಪಿ.ಎಸ್.ಐ (ತನಿಖೆ-3), ಕುಮಟಾ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 16-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಕುಮಟಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 91/2022, ಕಲಂ: 279, 337 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಪ್ರದೀಪ ತಂದೆ ಬೀರಪ್ಪಾ ನಾಯ್ಕ, ಪ್ರಾಯ-37 ವರ್ಷ, ವೃತ್ತಿ-ವ್ಯವಹಾರ, ಸಾ|| ದೊಡ್ಡಕೊಪ್ಪಾ, ಹೆಗಡೆ, ತಾ: ಕುಮಟಾ (ಮೋಟಾರ್ ಸೈಕಲ್ ನಂ: ಕೆ.ಎ-47/ಡಬ್ಲ್ಯೂ-4019 ನೇದರ ಸವಾರ). ಈತನು ದಿನಾಂಕ: 22-04-2022 ರಂದು 12-00 ಗಂಟೆಗೆ ಹೆಗಡೆ ಮಚ್ಚಗೋಣ 1 ನೇ ಕ್ರಾಸ್ ಹತ್ತಿರ ತನ್ನ ಮೋಟಾರ್ ಸೈಕಲ್ ನಂ: ಕೆ.ಎ-47/ಡಬ್ಲ್ಯೂ-4019 ನೇದನ್ನು ಹೆಗಡೆ ಕಡೆಯಿಂದ ಕುಮಟಾ ಕಡೆಗೆ ಅತೀವೇಗವಾಗಿ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗಿ ರಸ್ತೆಯ ಮೇಲೆ ಅಡ್ಡ ಬಂದ ದನಕ್ಕೆ ತಪ್ಪಿಸಲು ಹೋಗಿ ಮೋಟಾರ್ ಸೈಕಲಿನ ನಿಯಂತ್ರಣ ಕಳೆದುಕೊಂಡು ಒಮ್ಮೇಲೆ ರಸ್ತೆಯ ಎಡಕ್ಕೆ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತು ಬಸ್ಸಿಗಾಗಿ ಕಾಯುತ್ತಿದ್ದ ಪಿರ್ಯಾದಿಯ ಬಾವ ಶ್ರೀ ಬಾಬು ತಂದೆ ಪಾಮು ಪಟಗಾರ, ಸಾ|| ಮಚ್ಚಗೋಣ, ಹೆಗಡೆ, ತಾ: ಕುಮಟಾ ಇವರಿಗೆ ಢಿಕ್ಕಿ ಹೊಡೆದು ಅಪಘಾತ ಪಡಿಸಿ, ರಸ್ತೆಯ ಮೇಲೆ ಬೀಳುವಂತೆ ಮಾಡಿದ್ದಲ್ಲದೇ, ಮೋಟಾರ್ ಸೈಕಲ್ ಸಮೇತ ಅವರು ಕೂಡಾ ರಸ್ತೆಯ ಮೇಲೆ ಬಿದ್ದು ಪಿರ್ಯಾದಿಯ ಬಾವ ಬಾಬು ಪಟಗಾರ ಇವರ ಮೇಲ್ದುಟಿಗೆ, ಕೆನ್ನೆಗೆ ಹಾಗೂ ತಲೆಗೆ ಗಾಯ ಪಡಿಸಿದ್ದಲ್ಲದೇ, ಮೋಟಾರ್ ಸೈಕಲ್ ಹಿಂದೆ ಕುಳಿತ ಕಿರಣ ಮುಕ್ರಿ, ಈತನ ತುಟಿಗೆ, ಹಣೆಗೆ ಹಾಗೂ ಎರಡೂ ಕೈಕಾಲುಗಳಿಗೆ ಅಲ್ಲಲ್ಲಿ ತೆರಚಿದ ಗಾಯ ಪಡಿಸಿದ ಬಗ್ಗೆ ಪಿರ್ಯಾದಿ ಶ್ರೀ ಬಾಬು ತಂದೆ ನಾರಾಯಣ ಪಟಗಾರ, ಪ್ರಾಯ-45 ವರ್ಷ, ವೃತ್ತಿ-ವ್ಯವಹಾರ, ಸಾ|| ಮೂಡಕೇರಿ, ಕಲ್ಕೋಡ ಕ್ರಾಸ್, ಹೆಗಡೆ ಮೀನು ಮಾರ್ಕೆಟ್ ಹತ್ತಿರ, ತಾ: ಕುಮಟಾ ರವರು ದಿನಾಂಕ: 22-04-2022 ರಂದು 19-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹೊನ್ನಾವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 159/2022, ಕಲಂ: 78(3) ಕರ್ನಾಟಕ ಪೊಲೀಸ್ (ತಿದ್ದುಪಡಿ) ಎಕ್ಟ್-2021 ನೇದ್ದರ ವಿವರ...... ನಮೂದಿತ ಆರೋಪಿತರು 1]. ಸಂತೋಷ ತಂದೆ ಅಂಥೋನ್ ಲೋಪಿಸ್, ಪ್ರಾಯ-44 ವರ್ಷ, ಪ್ರಾಯ-ವ್ಯಾಪಾರ, ಸಾ|| ಟೊಂಕಾ, ಕಾಸರಕೋಡ, ತಾ: ಹೊನ್ನಾವರ, 2]. ಸಂತೋಷ ತಂದೆ ಶಂಕರ ಗೌಡ, ಸಾ|| ದಿಬ್ಬನಗಲ್, ತಾ: ಹೊನ್ನಾವರ. ಈ ನಮೂದಿತ ಆರೋಪಿತಲ್ಲಿ ಆರೋಪಿ 1 ದಿನಾಂಕ: 22-04-2022 ರಂದು 17-45 ಗಂಟೆಗೆ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ನಿಂತು ಸಾರ್ವಜನಿಕರಿಂದ ಹಣವನ್ನು ಪಡೆದು ಓ.ಸಿ ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥವನ್ನಾಗಿ ಕಟ್ಟಿಸಿಕೊಂಡು ಓ.ಸಿ ಮಟಕಾ ಜುಗಾರಾಟ ಆಡಿಸುತ್ತಿದ್ದಾಗ ದಾಳಿಯ ವೇಳೆ ಸಿಕ್ಕ ಆರೋಪಿತನ ತಾಬಾದಲ್ಲಿ 1). ಒಟ್ಟು ನಗದು ಹಣ 640/- ರೂಪಾಯಿ, 2). ಬಾಲ್ ಪೆನ್-01, 3). ಓ.ಸಿ ಅಂಕೆ-ಸಂಖ್ಯೆ ಬರೆದ ಚೀಟಿ-01 ನೇದವುಗಳೊಂದಿಗೆ ಸಿಕ್ಕಿದ್ದು, ಸದರಿ ಆರೋಪಿ 1 ನೇಯವನು ಒಟ್ಟಾದ ಹಣವನ್ನು ಹಾಗೂ ಓ.ಸಿ ಚೀಟಿಯನ್ನು ಓ.ಸಿ ಬುಕ್ಕಿಯಾದ ಆರೋಪಿ 2 ನೇಯವನಿಗೆ ನೀಡುತ್ತಿದ್ದುದಾಗಿ ತಿಳಿಸಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀಮತಿ ಸಾವಿತ್ರಿ ಎ. ನಾಯಕ, ಡಬ್ಲ್ಯೂ.ಪಿ.ಎಸ್.ಐ (ತನಿಖೆ-3), ಹೊನ್ನಾವರ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 19-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮಂಕಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 35/2022, ಕಲಂ: 32, 34 ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ಹನುಮಂತ ತಂದೆ ದೇವಪ್ಪ ನಾಯ್ಕ, ಪ್ರಾಯ-45 ವರ್ಷ, ಸಾ|| ಮಂಕಿ, ದೇವರಗದ್ದೆ, ತಾ: ಹೊನ್ನಾವರ. ಈತನು ದಿನಾಂಕ: 22-04-2022 ರಂದು 11-30 ಗಂಟೆಯ ಸುಮಾರಿಗೆ ಮಂಕಿ ದೇವರಗದ್ದೆಯಲ್ಲಿರುವ ತನ್ನ ಮನೆಯ ಸಮೀಪ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ತನ್ನ ಲಾಭಕ್ಕಾಗಿ ಯಾವುದೇ ಪಾಸ್ ಯಾ ಪರ್ಮಿಟ್ ಇಲ್ಲದೇ ಕಾನೂನುಬಾಹಿರವಾಗಿ 90 ML ಅಳತೆಯ Orignal Choice Delux Whisky ಅಂತಾ ಬರೆದ ಸರಾಯಿ ಇದ್ದ ಪ್ಯಾಕೆಟ್ ಗಳು-37, ಅ||ಕಿ|| 1,299.81/- ರೂಪಾಯಿಗಳನ್ನು ಬಿಳಿ ಪ್ಲಾಸ್ಟಿಕ್ ಚೀಲದಲ್ಲಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದವನು, ದಾಳಿಯ ವೇಳೆ ಸರಾಯಿ ಬಾಟಲಿಗಳಿದ್ದ ಪಾಲಿಥೀನ್ ಚೀಲವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಅಶೋಕ ಮಾಳಾಬಗಿ, ಪಿ.ಎಸ್.ಐ (ಕಾ&ಸು), ಮಂಕಿ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 13-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಜೋಯಿಡಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 13/2022, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಕೃಷ್ಣ ತಂದೆ ದೇವೇಂದ್ರ ಸುತ್ರಾವಿ, ಪ್ರಾಯ-45 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಅಂಬರ್ಡಾ, ತಾ: ಜೋಯಿಡಾ. ಈತನು ದಿನಾಂಕ: 22-04-2022 ರಂದು 12-50 ಗಂಟೆಯ ಸುಮಾರಿಗೆ ತನ್ನ ಲಾಭಕ್ಕೋಸ್ಕರ ಜೋಯಿಡಾ ತಾಲೂಕಿನ ಅಂಬರ್ಡಾ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬರಿಗೆ ಅನ್ಯಾಯದ ಲಾಭ ಇನ್ನೊಬ್ಬರಿಗೆ ಅನ್ಯಾಯದ ನಷ್ಟವಾಗುವಂತೆ ಸಾರ್ವಜನಿಕರಿಂದ ಹಣವನ್ನು ಸ್ವೀಕರಿಸಿಕೊಂಡು ಓ.ಸಿ ಚೀಟಿ ಬರೆಯುತ್ತಿದ್ದಾಗ ನಗದು ಹಣ 830/- ರೂಪಾಯಿ ಹಾಗೂ ಒಂದು ಬಾಲ್ ಪೆನ್ ಹಾಗೂ ಅಂಕೆ-ಸಂಖ್ಯೆ ಬರೆದ ಓ.ಸಿ ಚೀಟಿ-01 ಇವುಗಳ ಸಮೇತ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಕು: ಕಸ್ತೂರಿ ಎಸ್. ಕುಕನೂರು, ಡಬ್ಲ್ಯೂ.ಪಿ.ಎಸ್.ಐ (ಕಾ&ಸು), ಜೋಯಿಡಾ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 14-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 15/2022, ಕಲಂ: 279 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ನಾಗನಗೌಡ ತಂದೆ ಬಸನಗೌಡ ಶಿರೂರು, ಪ್ರಾಯ-33 ವರ್ಷ, ಸಾ|| ಪಿ.ಡಬ್ಲ್ಯೂ.ಐ.ಬಿ ಹತ್ತಿರ ಕೋರ್ಟ್ ರೋಡ್, ಬಸವನಗರ, ತಾ: ಹಳಿಯಾಳ (ರಾಯಲ್ ಎನಫೀಲ್ಡ್ ಮೋಟಾರ್ ಸೈಕಲ್ ನಂ: ಕೆ.ಎ-65/ಜೆ-4242 ನೇದರ ಚಾಲಕ). ಈತನು ದಿನಾಂಕ: 22-04-2022 ರಂದು 15-00 ಗಂಟೆಗೆ ಜೋಯಿಡಾ ತಾಲೂಕಿನ ಜನತಾ ಕಾಲೋನಿ ಗ್ರಾಮದ ಹತ್ತಿರ ದಾಂಡೇಲಿ-ಜೋಯಿಡಾ ರಾಜ್ಯ ಹೆದ್ದಾರಿ ಸಂಖ್ಯೆ-46 ರ ಮೇಲೆ ತನ್ನ ರಾಯಲ್ ಎನಫೀಲ್ಡ್ ಮೋಟಾರ್ ಸೈಕಲ್ ನಂ: ಕೆ.ಎ-65/ಜೆ-4242 ನೇದನ್ನು ದಾಂಡೇಲಿ ಕಡೆಯಿಂದ ಜೋಯಿಡಾ ಕಡೆಗೆ ಹೋಗಲು ಅತೀವೇಗವಾಗಿ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗಿ, ತನ್ನ ಮೋಟಾರ್ ಸೈಕಲನ್ನು ನಿಯಂತ್ರಿಸಲಾಗದೇ, ಒಮ್ಮೇಲೆ ಡಾಂಬರ್ ರಸ್ತೆಯ ಬಲಬದಿಗೆ ಹೋಗಿ ಎದುರಿನಿಂದ ಜೋಯಿಡಾ ಕಡೆಯಿಂದ ದಾಂಡೇಲಿ ಕಡೆಗೆ ಪಿರ್ಯಾದಿಯವರು ಚಲಾಯಿಸಿಕೊಂಡು ಬರುತ್ತಿದ್ದ ಕಾರ್ ನಂ: ಕೆ.ಎ-25/ಎಮ್‍ಸಿ-5582 ನೇದಕ್ಕೆ ಎದುರಿನಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿ, ಕಾರ್ ಹಾಗೂ ಮೋಟಾರ್ ಸೈಕಲ್ ಎರಡು ಮುಂದಿನಿಂದ ಜಖಂಗೊಳ್ಳುವಂತೆ ಮಾಡಿದ ಬಗ್ಗೆ ಪಿರ್ಯಾದಿ ಶ್ರೀ ಅನಿಲಕುಮಾರ ತಂದೆ ಭೀಮಸೇನ್ ಕಮಲಾಪುರ, ಪ್ರಾಯ-35 ವರ್ಷ, ವೃತ್ತಿ-ವೈದ್ಯರು, ಸಾ|| ಇ.ಎಸ್.ಐ ಚರ್ಚ್ ಹತ್ತಿರ, ಟೌನಶಿಪ್, ತಾ: ದಾಂಡೇಲಿ ರವರು ದಿನಾಂಕ: 22-04-2022 ರಂದು 18-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 98/2022, ಕಲಂ: 279 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ರಾಜೇಂದ್ರ ತಂದೆ ಕಾಳಪ್ಪ ಬೆಟಸೂರು, ಪ್ರಾಯ-22 ವರ್ಷ, ವೃತ್ತಿ-ಚಾಲಕ, ಸಾ|| ಕುಟರನಟ್ಟಿ, ಪೋ: ಹಿರೇಬೂದನ್ರರ, ತಾ: ಸವದತ್ತಿ, ಜಿ: ಬೆಳಗಾವಿ (ಲಾರಿ ನಂ: ಕೆ.ಎ-22/ಸಿ-7912 ನೇದರ ಚಾಲಕ). ಈತನು ದಿನಾಂಕ: 22-04-2022 ರಂದು ಬೆಳಗಿನ ಜಾವ ಸಮಯ ಸುಮಾರು 03-00 ಗಂಟೆಗೆ ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮದಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-63 ರಲ್ಲಿ ತನ್ನ ಬಾಬ್ತು ಲಾರಿ ನಂ: ಕೆ.ಎ-22/ಸಿ-7912 ನೇದನ್ನು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಅತೀವೇಗವಾಗಿ ಹಾಗೂ ನಿಷ್ಕಾಳಜಿತನದಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವಂತೆ ಚಲಾಯಿಸಿಕೊಂಡು ಬಂದು ವಾಹನದ ಮೇಲಿನ ನಿಯಂತ್ರಣ ತಪ್ಪಿ ಪಲ್ಟಿ ಕೆಡವಿ ಅಪಘಾತ ಪಡಿಸಿ, ಲಾರಿಯನ್ನು ಜಖಂಗೊಳಿಸಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ಪ್ರಕಾಶ ತಂದೆ ಸೋಮಪ್ಪ ಜಡ್ಡಿಮನಿ, ಪ್ರಾಯ-20 ವರ್ಷ, ವೃತ್ತಿ-ಲಾರಿ ಕ್ಲೀನರ್, ಸಾ|| ಜಮನಾಳ, ಪೋ: ಶಿಲ್ತಿಬಾಂವಿ, ತಾ: ಗೋಕಾಕ, ಜಿ: ಬೆಳಗಾವಿ ರವರು ದಿನಾಂಕ: 22-04-2022 ರಂದು 19-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 99/2022, ಕಲಂ: 279, 283 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಚಂದ್ರನ್ ತಂದೆ ಕುಟ್ಟಿಯಪ್ಪಾ, ಪ್ರಾಯ-52 ವರ್ಷ, ವೃತ್ತಿ-ಲಾರಿ ಚಾಲಕ, ಸಾ|| ಊಟಿ ನಲ್ಲಪ್ಪನ ಸ್ಟ್ರೀಟ್, ಅರವನಕಾಡು, ವೆಡಿಮರಂದ್ ತೊಳ್ಳೆಸಾ ಕ್ವಾಟನ್ ಪ್ಯಾಕ್ಟರಿ ಸಮೀಪ (ಎಮ್.ಆರ್.ಸಿ ಟ್ರೈನಿಂಗ್ ಸೆಂಟರ್), ನೀಲಗಿರಿ, ತಮಿಳನಾಡು ರಾಜ್ಯ (ಲಾರಿ ನಂ: ಟಿ.ಎನ್-36/ಎ.ಯು-6099 ನೇದರ ಚಾಲಕ). ಈತನು ದಿನಾಂಕ: 22-04-2022 ರಂದು ಸಾಯಂಕಾಲ 04-00 ಗಂಟೆಯ ಸುಮಾರಿಗೆ  ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅರಬೈಲ್ ಘಾಟ್ ಎಸ್ ಕ್ರಾಸ್ ಸಮೀಪ ತಿರುವಾದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-63 ರಲ್ಲಿ ಹಾಲು ತುಂಬಿದ ತನ್ನ ಟ್ಯಾಂಕರ್ ಲಾರಿ ನಂ: ಟಿ.ಎನ್-36/ಎ.ಯು-6099 ನೇದನ್ನು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಅತೀವೇಗವಾಗಿ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗಿ ಹೆದ್ದಾರಿಯ ಮೇಲೆ ಇತರೇ ವಾಹನಗಳ ಓಡಾಟಕ್ಕೆ ತೊಂದರೆ ಆಗುವಂತೆ ಪಲ್ಟಿ ಕೆಡವಿ ಅಪಘಾತ ಪಡಿಸಿ, ವಾಹನ ಜಖಂಗೊಳಿಸಿದ ಬಗ್ಗೆ ಪಿರ್ಯಾದಿ ಶ್ರೀ ನಾಗರಾಜ ಆರ್. ನಾಯ್ಕ, ಪ್ರಾಯ-49 ವರ್ಷ, ವೃತ್ತಿ-ಎ.ಎಸ್.ಐ, ಸಾ|| ಯಲ್ಲಾಪುರ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 20-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುಂಡಗೋಡ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 70/2022, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಸುರೇಶ ತಂದೆ ರಂಗನಾಥ ನಾಯ್ಕ, ಪ್ರಾಯ-58 ವರ್ಷ, ವೃತ್ತಿ-ಬೀಡಾ ಅಂಗಡಿ ವ್ಯಾಪಾರ, ಸಾ|| ಸಿದ್ದಾಪುರ ಓಣಿ, ತಾ: ಮುಂಡಗೋಡ. ಈತನು ದಿನಾಂಕ: 22-04-2022 ರಂದು 16-45 ಗಂಟೆಗೆ ಮುಂಡಗೋಡ ತಾಲೂಕಿನ ಮಳಗಿ ಗ್ರಾಮದಲ್ಲಿ ಸಿದ್ದಾಪುರ ಓಣಿಯ ಮೀನು ಮಾರುಕಟ್ಟೆಯ ಹತ್ತಿರ ಸಾರ್ವಜನಿಕ ಸ್ಥಳದ ರಸ್ತೆಯಲ್ಲಿ ನಿಂತು ರಸ್ತೆಯ ಮೇಲೆ ಓಡಾಡುವ ಜನರನ್ನು ಕರೆದು 01/- ರೂಪಾಯಿಗೆ 80/- ರೂಪಾಯಿ ಕೊಡುವ ಕರಾರಿನ ಮೇಲೆ ಒಬ್ಬರಿಗೆ ಅನ್ಯಾಯದ ಲಾಭ ಇನ್ನೊಬ್ಬರಿಗೆ ಅನ್ಯಾಯದ ನಷ್ಟ ಆಗುವಂತೆ ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥ ಕಟ್ಟಿ ಓ.ಸಿ ಜೂಗಾರಾಟ ನಡೆಸಿ ನಗದು ಹಣ 550/- ರೂಪಾಯಿ ಸಿಕ್ಕಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಸಿದ್ದಪ್ಪ ಎಸ್. ಸಿಮಾನಿ, ಪೊಲೀಸ್ ನಿರೀಕ್ಷಕರು, ಮುಂಡಗೋಡ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 18-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಮುಂಡಗೋಡ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 71/2022, ಕಲಂ: 15(ಎ), 32(3) ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ಮೌಲಾಲಿ ತಂದೆ ಜಂಗ್ಲಿಸಾಬ್ ದುಂಡಸಿ, ಪ್ರಾಯ-52 ವರ್ಷ, ವೃತ್ತಿ-ಕಿರಾಣಿ ಅಂಗಡಿ ವ್ಯಾಪಾರ, ಸಾ|| ಹುನಗುಂದ, ತಾ: ಮುಂಡಗೋಡ. ಈತನು ದಿನಾಂಕ: 22-04-2022 ರಂದು 17-30 ಗಂಟೆಗೆ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ತನ್ನ ಕಿರಾಣಿ ಅಂಗಡಿಯಲ್ಲಿ ಸಾರ್ವಜನಿಕರಿಗೆ ಯಾವುದೇ ಪಾಸ್ ಅಥವಾ ಪರ್ಮಿಟ್ ಇಲ್ಲದೇ ಮದ್ಯ ಸೇವಿಸಲು ಅನುವು ಮಾಡಿಕೊಟ್ಟು 90 ML ಅಳತೆಯ BANGALORE WHISKY-05 ಪೌಚ್ ಗಳು, 90 ML ಅಳತೆಯ BANGALORE WHISKY ಅಂತಾ ಬರೆದ 02 ಖಾಲಿ ಪೌಚ್ ಗಳು, 02 ಪ್ಲಾಸ್ಟಿಕ್ ಗ್ಲಾಸ್, 01 ನೀರಿನ ಬಾಟಲಿ ಹಾಗೂ ನಗದು ಹಣ 150/- ರೂಪಾಯಿಯೊಂದಿಗೆ ದಾಳಿಯ ಕಾಲಕ್ಕೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಬಸವರಾಜ ಮಬನೂರ, ಪಿ.ಎಸ್.ಐ, ಮುಂಡಗೋಡ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 19-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಸಿದ್ದಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 58/2022, ಕಲಂ: 78(3) ಕರ್ನಾಟಕ ಪೊಲೀಸ್ (ತಿದ್ದುಪಡಿ) ಎಕ್ಟ್-2021 ನೇದ್ದರ ವಿವರ...... ನಮೂದಿತ ಆರೋಪಿತ ವಸಂತ ತಂದೆ ಸುರೇಶ ಪೂಜಾರಿ, ಪ್ರಾಯ-23 ವರ್ಷ, ವೃತ್ತಿ-ಗಾರೆ ಕೆಲಸ, ಸಾ|| ಜಡ್ಡಿಕೇರೆ, ಹೊಸ್ತೋಟ ಗ್ರಾಮ, ಹೆಗ್ಗರಣೆ, ತಾ: ಸಿದ್ದಾಪುರ. ಈತನು ದಿನಾಂಕ: 22-04-2022 ರಂದು ಮಧ್ಯಾಹ್ನ 11-45 ಗಂಟೆಗೆ ಸಿದ್ದಾಪುರ ತಾಲೂಕಿನ ಹೆಗ್ಗರಣೆಯ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ತನ್ನ ಅನ್ಯಾಯದ ಲಾಭಕ್ಕೋಸ್ಕರ ಓ.ಸಿ ಮಟಕಾ ಜುಗಾರಾಟದ ಅಂಕೆ-ಸಂಖ್ಯೆಗಳ ಅದೃಷ್ಟದ ಮೇಲೆ ಜನರಿಂದ ಹಣವನ್ನು ಪಂಥವಾಗಿ ಕಟ್ಟಿಸಿಕೊಂಡು ಅವರಿಗೆ ಓ.ಸಿ ಮಟಕಾ ಜುಗಾರಾಟದ ಅಂಕೆ-ಸಂಖ್ಯೆಗಳ ಚೀಟಿಯನ್ನು ಬರೆದುಕೊಟ್ಟು ಓ.ಸಿ ಮಟಕಾ ಜುಗಾರಾಟ ನಡೆಸುತ್ತಿದ್ದಾಗ ಪಿರ್ಯಾದಿಯವರು ಸಿಬ್ಬಂದಿಗಳೊಂದಿಗೆ ಹಾಗೂ ಪಂಚರೊಂದಿಗೆ ಸೇರಿ ದಾಳಿ ಮಾಡಿದಾಗ ಆರೋಪಿತನು ದಾಳಿಯ ಕಾಲಕ್ಕೆ ಓ.ಸಿ ಜುಗಾರಾಟದ ಸಲಕರಣೆಗಳಾದ 1). ಬಾಲ್ ಪೆನ್-1, 2). ಓ.ಸಿ ಚೀಟಿ-1 ಮತ್ತು 3). ನಗದು ಹಣ 2,100/- ರೂಪಾಯಿಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಕುಮಾರ ಕೆ, ಪೊಲೀಸ್ ನಿರೀಕ್ಷಕರು, ಸಿದ್ದಾಪುರ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 13-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಸಿದ್ದಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 59/2022, ಕಲಂ: 15(ಎ), 32(3) ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ಕೃಷ್ಣ ತಂದೆ ನಾಗು ನಾಯ್ಕ, ಪ್ರಾಯ-72 ವರ್ಷ, ವೃತ್ತಿ-ಕೃಷಿ ಕೆಲಸ, ಸಾ|| ವಂದಾನೆ, ತಾ: ಸಿದ್ದಾಪುರ. ಈತನು ದಿನಾಂಕ: 22-04-2022 ರಂದು 20-30 ಗಂಟೆಗೆ ಸಿದ್ದಾಪುರ ತಾಲೂಕಿನ ವಂದಾನೆಯ ಬೇಗಾರ ಕ್ರಾಸ್ ಹತ್ತಿರ ಇರುವ ತನ್ನ ಮನೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಅನಧೀಕೃತವಾಗಿ ಮುಕ್ತವಾಗಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾಗ ಪಿರ್ಯಾದಿಯರವರು ಸಿಬ್ಬಂದಿಗಳೊಂದಿಗೆ ಸೇರಿ ದಾಳಿ ಮಾಡಿದಾಗ 1). HAYWARDS CHEERS WHISKY-90 ML ಅಂತಾ ಬರೆದ ಮದ್ಯ ತುಂಬಿದ 4 ಟೆಟ್ರಾ ಪ್ಯಾಕೆಟ್ ಗಳು, 2). 2 ಪ್ಲಾಸ್ಟಿಕ್ ಗ್ಲಾಸುಗಳು, 3). HAYWARDS CHEERS WHISKY-90 ML ಅಂತಾ ಬರೆದ 2 ಮದ್ಯದ ಖಾಲಿ ಟೆಟ್ರಾ ಪ್ಯಾಕೆಟ್ ಇವುಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಮಂಜೇಶ್ವರ ವಿ. ಚಂದಾವರ, ಪಿ.ಎಸ್.ಐ (ತನಿಖೆ), ಸಿದ್ದಾಪುರ ಪೊಲೀಸ್ ಠಾಣೆ ರವರು ದಿನಾಂಕ: 22-04-2022 ರಂದು 22-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 22-04-2022

at 00:00 hrs to 24:00 hrs

 

ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ....

 

======||||||||======

 

 

 

 

ಇತ್ತೀಚಿನ ನವೀಕರಣ​ : 13-05-2022 02:00 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080