ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 26-02-2021

at 00:00 hrs to 24:00 hrs

 

ಮಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 06/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಮಹಮದ್ ಗೌಸ್ ತಂದೆ ಇಬ್ರಾಹಿಮ್ ನವಾಬ್, ಪ್ರಾಯ-37 ವರ್ಷ, ಸಾ|| ದೇವಳಮಕ್ಕಿ, ಕಾರವಾರ. ನಮೂದಿತ ಆರೋಪಿತನು ದಿನಾಂಕ: 26-02-2021 ರಂದು 17-00 ಗಂಟೆಗೆ ದೇವಳಮಕ್ಕಿ ಬರ್ಗಲ್ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ ಬರ-ಹೋಗುವ ಸಾರ್ವಜನಿಕರನ್ನು ಸೇರಿಸಿಕೊಂಡು ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿರುವಾಗ ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳಾದ ಅಂಕೆ-ಸಂಖ್ಯೆ ಬರೆದ ಚೀಟಿ-01, ನಗದು ಹಣ 1,950/- ರೂಪಾಯಿ ಹಾಗೂ ಬಾಲ್ ಪೆನ್-01 ನೇದವುಗಳೊಂದಿಗೆ ಆರೋಪಿತನು ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ನಿತ್ಯಾನಂದ ಪಂಡಿತ, ಪೊಲೀಸ್ ವೃತ್ತ ನಿರೀಕ್ಷಕರು, ಕದ್ರಾ ವೃತ್ತ, ಕದ್ರಾ ರವರು ದಿನಾಂಕ: 26-02-2021 ರಂದು 19-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಅಂಕೋಲಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 38/2021, ಕಲಂ: 279, 337, 338 ಐಪಿಸಿ ಹಾಗೂ ಕಲಂ: 187 ಎಮ್.ವಿ ಎಕ್ಟ್ ನೇದ್ದರ ವಿವರ...... ನಮೂದಿತ ಆರೋಪಿತನು ಬಿಳಿಯ ಬಣ್ಣದ ಕಾರ್ ಚಾಲಕನಾಗಿದ್ದು, ಕಾರ್ ನಂಬರ್ ಮತ್ತು ಚಾಲಕನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ನಮೂದಿತ ಆರೋಪಿತನು ದಿನಾಂಕ: 21-02-2021 ರಂದು 19-00 ಗಂಟೆಗೆ ಅಂಕೋಲಾ ತಾಲೂಕಿನ ಮಾದನಗೇರಿಯ ಬಳಲೆಯಲ್ಲಿ ಹಾಯ್ದಿರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-66 ರ ಡಾಂಬರ್ ರಸ್ತೆಯ ಮೇಲೆ ತನ್ನ ಕಾರನ್ನು ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ಅತೀವೇಗವಾಗಿ ಹಾಗೂ ಅಜಾಗರೂಕತೆಯಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ತನ್ನ ಕಾರಿನ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ರಸ್ತೆಯ ಬಲಕ್ಕೆ ಬಂದವನು, ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ರಸ್ತೆಯ ತನ್ನ ಬದಿಯಿಂದ ಹೋಗುತ್ತಿದ್ದ ಮೋಟಾರ್ ಸೈಕಲ್ ನಂ: ಕೆ.ಎ-30/ವಿ-8704 ನೇದಕ್ಕೆ ಮುಂದಿನಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿ, ಮೋಟಾರ್ ಸೈಕಲ್ ಸವಾರನಾದ ವೆಂಕಟೇಶ ತಂದೆ ಸುಬ್ರಾಯ ನಾಯಕ, ಸಾ|| ಅಗಸೂರು, ತಾ: ಅಂಕೋಲಾ ಇವರಿಗೆ ಬಲಗಾಲಿಗೆ ಗಂಭೀರ ಸ್ವರೂಪದ ಮತ್ತು ಮೋಟಾರ್ ಸೈಕಲ್ ಹಿಂಬದಿ ಸವಾರಳಾದ ಪಿರ್ಯಾದಿಗೆ ಎರಡೂ ಕಾಲಿಗೆ ಸಾದಾ ಸ್ವರೂಪದ ಗಾಯನೋವು ಪಡಿಸಿದ್ದಲ್ಲದೇ, ಆರೋಪಿ ಕಾರ್ ಚಾಲಕನು ತನ್ನ ಕಾರನ್ನು ಸ್ಥಳದಲ್ಲಿ ನಿಲ್ಲಿಸದೇ ಚಲಾಯಿಸಿಕೊಂಡು ಹೋಗಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಶ್ರೀಮತಿ ವಿಜಯಲಕ್ಷ್ಮೀ ರಾಮಚಂದ್ರ ನಾಯಕ, ಪ್ರಾಯ-45 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಮೊಗಟಾ, ತಾ: ಕುಮಟಾ, ಹಾಲಿ ಸಾ|| ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ, ಹಿರೇಗುತ್ತಿ, ತಾ: ಕುಮಟಾ ರವರು ದಿನಾಂಕ: 26-02-2021 ರಂದು 12-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಗೋಕರ್ಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 19/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತರು 1]. ಹರೀಶ ತಂದೆ ನಾಗೇಶ ನಾಯ್ಕ, ಪ್ರಾಯ-40 ವರ್ಷ, ಸಾ|| ಬಂಕಿಕೊಡ್ಲ, ಗೋಕರ್ಣ, ತಾ: ಕುಮಟಾ, 2]. ಸಂತೋಷ ತಂದೆ ನಾಗೇಶ ನಾಯ್ಕ, ಪ್ರಾಯ- 48 ವರ್ಷ, ಸಾ|| ಬಂಕಿಕೊಡ್ಲ, ಗೋಕರ್ಣ, ತಾ: ಕುಮಟಾ. ಈ ನಮೂದಿತ ಆರೋಪಿತರಲ್ಲಿ ಆರೋಪಿ 1 ನೇಯವನು ದಿನಾಂಕ: 25-02-2021 ರಂದು 16-30 ಗಂಟೆಯ ಸುಮಾರಿಗೆ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯ ಬಂಕಿಕೊಡ್ಲ ಗ್ರಾಮದ ಕೆ.ಡಿ.ಸಿ.ಸಿ ಬ್ಯಾಂಕ್  ಹತ್ತಿರದ  ರಸ್ತೆಯ ಮೇಲೆ ತನ್ನ ಲಾಭಕ್ಕೋಸ್ಕರ ಬರ-ಹೋಗುವ ಸಾರ್ವಜನಿಕರನ್ನು ಕರೆಯುತ್ತಾ, ತಮ್ಮ ತಮ್ಮ ಅದೃಷ್ಟದ ಸಂಖ್ಯೆಗಳ ಮೇಲೆ ಹಣ ಪಂಥ ಕಟ್ಟಿ, ಅದೃಷ್ಟ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳಿ ಅವರ ಮನವೊಲಿಸಿ ಸಾರ್ವಜನಿಕರಿಂದ ಅಕ್ರಮವಾಗಿ ಹಣ ಪಡೆದು, ಅವರು ಹೇಳಿದ ಅಂಕೆ ಸಂಖ್ಯೆಯನ್ನು ತನ್ನ ಹತ್ತಿರ ಇರುವ ಚೀಟಿಯಲ್ಲಿ ಬರೆದುಕೊಂಡು ಓ.ಸಿ ಮಟಕಾ-ಜೂಗಾರಾಟ ಆಡಿಸುತ್ತಿದ್ದಾಗ, ನಗದು ಹಣ 8,620/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳೊಂದಿಗೆ ಸಿಕ್ಕಿದ್ದಲ್ಲದೇ, ಓ.ಸಿ ಮಟಕಾ ಜೂಗಾರಾಟದಿಂದ ಸಂಗ್ರವಾದ ಹಣವನ್ನು ಓ.ಸಿ ಮಟಕಾ ಬುಕ್ಕಿಯಾದ ಆರೋಪಿ 2 ನೇಯವನಿಗೆ ನೀಡುವುದಾಗಿ ತಿಳಿಸಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ನವೀನ್ ಎಸ್. ನಾಯ್ಕ, ಪಿ.ಎಸ್.ಐ (ಕಾ&ಸು), ಗೋಕರ್ಣ ಪೊಲೀಸ್ ಠಾಣೆ ರವರು ದಿನಾಂಕ: 26-02-2021 ರಂದು 19-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮಂಕಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 27/2021, ಕಲಂ: ಹುಡುಗಿ ಕಾಣೆ ನೇದ್ದರ ವಿವರ...... ನಮೂದಿತ ಕಾಣೆಯಾದ ಹುಡುಗಿ ತ್ರಿವೇಣಿ ತಂದೆ ಲಕ್ಷ್ಮಣ ನಾಯ್ಕ, ಪ್ರಾಯ-22 ವರ್ಷ, ವೃತ್ತಿ-ಮನೆಯಲ್ಲಿ ಕೆಲಸ, ಸಾ|| ಉಪ್ಲಿ, ಚಿತ್ತಾರ, ತಾ: ಹೊನ್ನಾವರ. ಪಿರ್ಯಾದಿಯ ಮಗಳಾದ ಇವಳು ಚಿತ್ತಾರದ ಉಪ್ಲಿಯಲ್ಲಿರುವ ತನ್ನ ವಾಸದ ಮನೆಯಿಂದ ಎಲ್ಲರೂ ಮಲಗಿಕೊಂಡ ಸಮಯದಲ್ಲಿ ತಾನು ಬಳಸುವ ಕೆಲವು ಬಟ್ಟೆಗಳು ಹಾಗೂ ಬ್ಯಾಗ್ ಅನ್ನು ತೆಗೆದುಕೊಂಡು ದಿನಾಂಕ: 25-02-2021 ರಂದು ರಾತ್ರಿ 10-00 ಗಂಟೆಯಿಂದ ದಿನಾಂಕ: 26-02-2021 ರಂದು ಬೆಳಿಗ್ಗೆ 06-00 ಗಂಟೆಯ ನಡುವಿನ ಅವಧಿಯಲ್ಲಿ ಎಲ್ಲಿಗೋ ಹೋದವಳು ಈವರೆಗೂ ಮನೆಗೆ ಬಾರದೇ ಕಾಣೆಯಾಗಿದ್ದು, ಕಾಣೆಯಾದ ತನ್ನ ಮಗಳನ್ನು ಹುಡುಕಿ ಕೊಡುವಂತೆ ಕೋರಿದ ಬಗ್ಗೆ ಪಿರ್ಯಾದಿ ಶ್ರೀಮತಿ ಮಾಲತಿ ಕೋಂ. ಲಕ್ಷ್ಮಣ ನಾಯ್ಕ, ಪ್ರಾಯ-45 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಉಪ್ಲಿ, ಚಿತ್ತಾರ, ತಾ: ಹೊನ್ನಾವರ ರವರು ದಿನಾಂಕ: 26-02-2021 ರಂದು 13-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಶಿರಸಿ ನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 07/2021, ಕಲಂ: 323, 341, 504, 506, 143 ಸಹಿತ 149 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ಸುಬ್ಬು ಗೌಡಾ, ವಕೀಲರು, ಸಾ|| ಶಿರಸಿ ಹಾಗೂ ಇತರೆ 4-5 ಜನರು. ಈ ನಮೂದಿತ ಆರೋಪಿತರು ದಿನಾಂಕ: 26-02-2021 ರಂದು 14-15 ಗಂಟೆಯ ಸುಮಾರಿಗೆ ಶಿರಸಿ ಶಹರದ ಶಿವಾಜಿ ಚೌಕದಲ್ಲಿರುವ ‘ಪರಾಗ್ ಬಾರ್’ ಎದುರು ಪಿರ್ಯಾದಿಯ ಚಿಕ್ಕಪ್ಪ ದಾಮೋದರ ತಂದೆ ಕೃಷ್ಣಾ ಮರಾಠಿ ಈತನಿಗೆ ಆರೋಪಿ 1 ನೇಯವನು ಇತರೆ 4-5 ಜನರ ಅಕ್ರಮ ಕೂಟ ಕಟ್ಟಿಕೊಂಡು ಯಾವುದೋ ದ್ವೇಷದಿಂದ ‘ಬೋಳಿ ಮಗನೆ, ಸೂಳೆ ಮಗನೆ’ ಎಂದು ಅವಾಚ್ಯ ಶಬ್ದಗಳಿಂದ ಬೈಯ್ದು, ಕೈ ಮುಷ್ಟಿಯಿಂದ ಮೈಮೇಲೆ ಹೊಡೆದು ಅಲ್ಲಲ್ಲಿ ಗಾಯನೋವು ಪಡಿಸಿ, ಜನರು ಬರುವುದನ್ನು ನೋಡಿ ಹೊಡೆಯುವುದನ್ನು ಬಿಟ್ಟು ‘ಇನ್ನೊಂದು ದಿನ ಸಿಕ್ಕಾಗ ನಿನಗೆ ಜೀವ ಸಹಿತ ಬಿಡುವುದಿಲ್ಲ’ ಎಂದು ಜೀವದ ಬೆದರಿಕೆ ಹಾಕಿದ ಬಗ್ಗೆ ಪಿರ್ಯಾದಿ ಶ್ರೀ ತಿರುಮಲೇಶ್ವರ ತಂದೆ ಚಂದ್ರಶೇಖರ ಮರಾಠಿ, ಪ್ರಾಯ-19 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಯಾಣ, ತಾ: ಕುಮಟಾ ರವರು ದಿನಾಂಕ: 26-02-2021 ರಂದು 21-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಶಿರಸಿ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 19/2021, ಕಲಂ: 279 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಗಣಪತಿ ತಂದೆ ದೇವಪ್ಪ ಪಟಗಾರ, ಪ್ರಾಯ-49 ವರ್ಷ, ವೃತ್ತಿ-ಪ್ರಾಥಮಿಕ ಶಾಲೆಯ ಶಿಕ್ಷಕ, ಸಾ|| ಗಾಂಧಿನಗರ, 6 ನೇ ಕ್ರಾಸ್, ತಾ: ಶಿರಸಿ (ವ್ಯಾಗನಾರ್ ಕಾರ ನಂ: ಕೆ.ಎ-31/ಎನ್-5638 ನೇದರ ಚಾಲಕ). ನಮೂದಿತ ಆರೋಪಿತನು ದಿನಾಂಕ: 25-02-2021 ರಂದು 17-00 ಗಂಟೆಗೆ ತನ್ನ ವ್ಯಾಗನಾರ್ ಕಾರ ನಂ: ಕೆ.ಎ-31/ಎನ್-5638 ನೇದನ್ನು ಬರೂರ ಕಡೆಯಿಂದ ಶಿರಸಿ ಕಡೆಗೆ ಅತೀವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು, ಶಿರಸಿ-ಬರೂರ ರಸ್ತೆಯ ದೀಗೊಪ್ಪ ಕ್ರಾಸ್ ಹತ್ತಿರ ರಸ್ತೆಗೆ ಅಡ್ಡ ಬಂದ ದನಗಳನ್ನು ತಪ್ಪಿಸಲು ಒಮ್ಮೇಲೆ ರಸ್ತೆಯ ತೀರಾ ಎಡಕ್ಕೆ ಚಲಾಯಿಸಿ, ರಸ್ತೆಯ ಆಚೆಗಿನ ಧರೆಗೆ ಡಿಕ್ಕಿ ಹೊಡೆದು ಪಲ್ಟಿ ಕೆಡವಿ ಅಪಘಾತ ಪಡಿಸಿ ಕಾರನ್ನು  ಜಖಂಗೊಳಿಸಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ಉಮೇಶ ತಂದೆ ನರಸಿಂಹ ನಾಯ್ಕ, ಪ್ರಾಯ-42 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ಬರೂರ, ಪೋ: ಬರೂರ, ತಾ: ಶಿರಸಿ ರವರು ದಿನಾಂಕ: 26-02-2021 ರಂದು 00-10 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 26-02-2021

at 00:00 hrs to 24:00 hrs

 

ಅಂಕೋಲಾ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 11/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಧನಂಜಯ ತಂದೆ ಸಾತು ನಾಯ್ಕ, ಪ್ರಾಯ-54 ವರ್ಷ, ವೃತ್ತಿ-ಮನೆ ಕೆಲಸ, ಸಾ|| ಪೊಲೀಸ್ ಸ್ಟೇಶನವಾಡಾ, ಬೆಲೇಕೇರಿ, ತಾ: ಅಂಕೋಲಾ. ಪಿರ್ಯಾದಿಯವರ ತಂದೆಯಾದ ಇವರು ಸುಮಾರು 3 ವರ್ಷಗಳಿಂದ ಪ್ಯಾರಾಲಿಸಿಸ್ ಕಾಯಿಲೆಯಿಂದ ಬಳಲುತ್ತಿದ್ದು, ಯಾವುದೇ ಕೆಲಸಕ್ಕೂ ಹೋಗುವ ಸ್ಥಿತಿಯಲ್ಲಿ ಇರಲಿಲ್ಲ. ಅನಾರೋಗ್ಯದ ವಿಷಯವನ್ನು ಅಥವಾ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಷಿಕೊಂಡು ಯಾವುದೋ ಕಾರಣಕ್ಕೆ ದಿನಾಂಕ: 26-02-2021 ರಂದು ಬೆಳಿಗ್ಗೆ ಸುಮಾರು 09-30 ಗಂಟೆಯಿಂದ ಮಧ್ಯಾಹ್ನ ಸುಮಾರು 11-00 ಗಂಟೆಯ ನಡುವಿನ ಅವಧಿಯಲ್ಲಿ ತನ್ನ ಮನೆಯ ಪಕ್ಕದ ಹಳೆಯ ಕೋಣೆಯ ಜಂತಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಪಿರ್ಯಾದಿ ಶ್ರೀ ಶೈಲೇಶ ತಂದೆ ಧನಂಜಯ ನಾಯ್ಕ, ಪ್ರಾಯ-23 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಪೊಲೀಸ್ ಸ್ಟೇಶನವಾಡಾ, ಬೆಲೇಕೇರಿ, ತಾ: ಅಂಕೋಲಾ ರವರು ದಿನಾಂಕ: 26-02-2021 ರಂದು 13-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಜೊಯಿಡಾ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 03/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಶಶಿಕಾಂತ ತಂದೆ ವೆಂಕು ವೇಳಿಪ, ಪ್ರಾಯ-48 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಕಾರ್ಟೋಳಿ, ತಾ: ಜೊಯಿಡಾ. ಮೃತ ಇವರು ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇವರು ಹೊಟ್ಟೆನೋವಿಗಾಗಿ ನಾಟಿ ಔಷಧ (ಗಿಡಮೂಲಿಕೆ ಔಷಧ) ತೆಗೆದುಕೊಳ್ಳುತ್ತಿದ್ದು, ದಿನಾಂಕ: 24-02-2021 ರಂದು ವಿಪರೀತ ವಾಂತಿ ಆಗಿದ್ದರಿಂದ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಿನಾಂಕ: 25-02-2021 ರಂದು ಜಿಲ್ಲಾ ಸರ್ಕಾರಿ ಆಸ್ಪತ್ರೆ ಕಾರವಾರದಲ್ಲಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 26-02-2021 ರಂದು 11-45 ಗಂಟೆಗೆ ಮೃತಪಟ್ಟಿರುತ್ತಾರೆ. ಇದರ ಹೊರತು ಇವರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂಬ ಬಗ್ಗೆ ಪಿರ್ಯಾದಿ ಕುಮಾರಿ: ಸುಮಿತಾ ತಂದೆ ಶಶಿಕಾಂತ ವೇಳಿಪ, ಪ್ರಾಯ-21 ವರ್ಷ, ವೃತ್ತಿ-ವಿದ್ಯಾರ್ಥಿನಿ, ಸಾ|| ಕಾರ್ಟೋಳಿ, ತಾ: ಜೊಯಿಡಾ ರವರು ದಿನಾಂಕ: 26-02-2021 ರಂದು 11-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

ಇತ್ತೀಚಿನ ನವೀಕರಣ​ : 27-02-2021 12:41 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080