ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 31-05-2021

at 00:00 hrs to 24:00 hrs

 

ಕುಮಟಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 111/2021, ಕಲಂ: 32, 34 ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ನಾರಾಯಣ ತಂದೆ ವೆಂಕಟೇಶ ಮರಾಠಿ, ಪ್ರಾಯ-50 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಕೆಗದಿಪಾಲ, ಸಂತೆಗದ್ದೆ, ನಾಗೂರು, ತಾ: ಕುಮಟಾ. ಈತನು ದಿನಾಂಕ: 31-05-2021 ರಂದು 16-15 ಗಂಟೆಗೆ ತನ್ನ ಮನೆಯ ಎದುರಿನ ಕಟ್ಟೆಯ ಮೇಲೆ ಸುಮಾರು 1,600/- ರೂಪಾಯಿ ಬೆಲೆಬಾಳುವ ಕಳ್ಳಭಟ್ಟಿ ಸಾರಾಯಿಯನ್ನು ಮಾರಾಟ ಮಾಡುವ  ಉದ್ದೇಶದಿಂದ ತನ್ನ ತಾಬಾದಲ್ಲಿ ದಾಸ್ತಾನು ಇಟ್ಟುಕೊಂಡಿರುವಾಗ ದಾಳಿಯ ಕಾಲ ಪಿರ್ಯಾದಿಯವರನ್ನು ನೋಡಿ ಓಡಿ ಹೋದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಶಿವಪ್ರಕಾಶ ಆರ್. ನಾಯ್ಕ, ಪೊಲೀಸ್ ವೃತ್ತ ನಿರೀಕ್ಷಕರು, ಕುಮಟಾ ವೃತ್ತ, ಕುಮಟಾ ರವರು ದಿನಾಂಕ: 31-05-2021 ರಂದು 19-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುರ್ಡೇಶ್ವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 51/2021, ಕಲಂ: 448, 504, 506 ಸಹಿತ 34 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ 1]. ಜಟಗಾ ತಂದೆ ಮಂಜಪ್ಪ ಮೊಗೇರ, ಪ್ರಾಯ-50 ವರ್ಷ, ವೃತ್ತಿ-ಮೀನುಗಾರಿಕೆ, ಸಾ|| ಬಸ್ತಿ, ಕಾಯ್ಕಿಣಿ, ತಾ: ಭಟ್ಕಳ, 2]. ಜಯರಾಮ ತಂದೆ ಜಟಗಾ ಮೊಗೇರ, ಪ್ರಾಯ-36 ವರ್ಷ, ವೃತ್ತಿ-ಮೀನುಗಾರಿಕೆ, ಸಾ|| ಬಸ್ತಿ, ಕಾಯ್ಕಿಣಿ, ತಾ: ಭಟ್ಕಳ. ಈ ನಮೂದಿತ ಆರೋಪಿತರೊಂದಿಗೆ ಪಿರ್ಯಾದಿಯು ಕಳೆದ 7-8 ವರ್ಷಗಳಿಂದ ಯಾವುದೇ ವ್ಯವಹಾರವಾಗಲಿ, ಒಡನಾಟವಾಗಲಿ ಹೊಂದಿಲ್ಲದಿದ್ದರೂ ದಿನಾಂಕ: 31-05-2021 ರಂದು ಬೆಳಿಗ್ಗೆ 09-00 ಗಂಟೆಯಿಂದ 09-15 ಗಂಟೆಯ ಸುಮಾರಿಗೆ ಆರೋಪಿತರಿಬ್ಬರೂ ಸೇರಿಕೊಂಡು ಹಿರೇದೊಮ್ಮಿಯಲ್ಲಿರುವ ಪಿರ್ಯಾದಿಯ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ಬೈಯ್ದು, ಏಕಾಏಕಿ ಪಿರ್ಯಾದಿಯನ್ನು ಉದ್ದೇಶಿಸಿ ‘ನೀನು ನಮಗೆ 4 ಲಕ್ಷ ಹಣ ಕೊಡುವುದಿದೆ. ಅದನ್ನು ಈಗಲೇ ಕೊಡು. ಇಲ್ಲವಾದಲ್ಲಿ ನಿನ್ನ ಹತ್ತಿರ ಹೇಗೆ ವಸೂಲಿ ಮಾಡಬೇಕು ನಮಗೆ ಗೊತ್ತಿದೆ. ಹಣ ಕೊಡದಿದ್ದಲ್ಲಿ ನಿನ್ನ ಕೊಲೆ ಮಾಡುತ್ತೇವೆ ಹಾಗೂ ಕೊಲೆ ಮಾಡಿ ಹೆಣವನ್ನು ಯಾರ ಕೈಗೂ ಸಿಗದಂತೆ ಮಾಡುತ್ತೇವೆ’ ಎಂದು ಜೀವದ ಬೆದರಿಕೆ ಹಾಕಿ ಹೊಡೆಯಲು ಬಂದಿರುತ್ತಾರೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ಕೃಷ್ಣ ತಂದೆ ನಾರಾಯಣ ಹರಿಕಾಂತ, ಪ್ರಾಯ-34 ವರ್ಷ, ವೃತ್ತಿ-ಮೀನುಗಾರಿಕೆ, ಸಾ|| ಹಿರೇದೊಮ್ಮಿ, ಮಾವಳ್ಳಿ-01, ಮುರ್ಡೇಶ್ವರ, ತಾ: ಭಟ್ಕಳ ರವರು ದಿನಾಂಕ: 31-05-2021 ರಂದು 12-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 93/2021, ಕಲಂ: 279 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಚಲಪ್ಪನ್ ಕೆ. ತಂದೆ ಕಥಾ ಗೌಂಡರ್, ಪ್ರಾಯ-45 ವರ್ಷ, ವೃತ್ತಿ-ಚಾಲಕ, ಸಾ|| ಇಂದ್ರಾನಗರ, ಪೋ: ಪಂಚನ್ಪಟ್ಟಿ, ತಾ: ಓಮವೂರು, ಜಿ: ಸೇಲಂ, ತಮಿಳುನಾಡು ರಾಜ್ಯ (ಟ್ಯಾಂಕರ್ ಲಾರಿ ನಂ: ಟಿ.ಎನ್-34/ಎಸ್-8928 ನೇದರ ಚಾಲಕ). ಈತನು ದಿನಾಂಕ: 25-05-2021 ರಂದು ಸಮಯ ಸುಮಾರು 16-00 ಗಂಟೆಗೆ ಯಲ್ಲಾಪುರ ತಾಲೂಕಿನ ಅರಬೈಲ್ ಗ್ರಾಮದ ಮಾರುತಿ ದೇವಸ್ಥಾನದ ಹತ್ತಿರ ಹಾದುಹೋದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-63 ರಲ್ಲಿ ತನ್ನ ಬಾಬ್ತು ಟ್ಯಾಂಕರ್ ಲಾರಿ ನಂ: ಟಿ.ಎನ್-34/ಎಸ್-8928 ನೇದನ್ನು ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಅತೀವೇಗವಾಗಿ ಮತ್ತು ನಿಷ್ಕಾಳಜಿಯಿಂದ ಚಲಾಯಿಸಿಕೊಂಡು ಬಂದು, ತನ್ನ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡು ಅದೇ ವೇಳೆಗೆ ತನ್ನ ಮುಂದಿನಿಂದ ಅಂದರೆ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ತನ್ನ ರಸ್ತೆಯ ಸೈಡಿನಲ್ಲಿ ಹೋಗುತ್ತಿದ್ದ ಟ್ಯಾಂಕರ್ ಲಾರಿ ನಂ: ಕೆ.ಎ-30/ಎ-1485 ನೇದಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿ, ಎರಡು ವಾಹನಗಳನ್ನು ಜಖಂಗೊಳಿಸಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ಪ್ರೇಮಾನಂದ ತಂದೆ ರಾಮಾ ನಾಯ್ಕ, ಪ್ರಾಯ-47 ವರ್ಷ, ಸಾ|| ಬಿಣಗಾ, ಕಾರವಾರ ರವರು ದಿನಾಂಕ: 31-05-2021 ರಂದು 21-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಶಿರಸಿ ನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 36/2021, ಕಲಂ: 4269, 270 ಸಹಿತ 34 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ನೂರಅಹಮ್ಮದ್ ಬಾಂಬೆಶೆಟ್, ಸಾ|| ಕೋಟೆ ಗಲ್ಲಿ, ಮೀನು ಮಾರುಕಟ್ಟೆಯ ಹತ್ತಿರ, ತಾ: ಶಿರಸಿ, 2]. ಜಮೀರ್ ಅಹಮ್ಮದ್ ತಂದೆ ಮಹಮ್ಮದ್ ಗೌಸ್ ಕಾಗಲಕರ್, ಪ್ರಾಯ-29 ವರ್ಷ, ವೃತ್ತಿ-ಕಿರಾಣಿ ವ್ಯಾಪಾರ, ಸಾ|| ಇಂದಿರಾನಗರ, ತಾ: ಶಿರಸಿ. ಮಾನ್ಯ ಕರ್ನಾಟಕ ಸರ್ಕಾರ, ಬೆಂಗಳೂರು ಮತ್ತು ಮಾನ್ಯ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರ ಅಧೀಕೃತ ಆದೇಶ ಹಾಗೂ ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರ ಆದೇಶದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಾಂಕ್ರಾಮಿಕ ರೋಗವಾದ ಕೋವಿಡ್-19 (ಕೊರೋನಾ ವೈರಾಣು) ಖಾಯಿಲೆ ಹರಡದಂತೆ ತಡೆಗಟ್ಟುವ ಸಲುವಾಗಿ ಕೊರೋನಾ ಕರ್ಫ್ಯೂ (ಲಾಕಡೌನ್) ಜಾರಿ ಮಾಡಿದ್ದರೂ ಸಹ ನಮೂದಿತ ಆರೋಪಿತರು ದಿನಾಂಕ: 31-05-2021 ರಂದು 12-30 ಗಂಟೆಯ ಸುಮಾರಿಗೆ ಶಿರಸಿ ಶಹರದ ಕೋಟೆ ಗಲ್ಲಿಯ ಮೀನು ಮಾರುಕಟ್ಟೆಯ ಹತ್ತಿರ ಇರುವ ಅರ್ಮಾನ್ ಕಿರಾಣಿ ಸ್ಟೋರ್ ಎದುರಿಗೆ ಯಾವುದೇ ರಕ್ಷಣೆಯನ್ನು ಹೊಂದದೆ ಕೊರೋನಾ ಸಾಂಕ್ರಾಮಿಕ ರೋಗದ ಕರ್ಫ್ಯೂ (ಲಾಕಡೌನ್) ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಪ್ರಾಣಕ್ಕೆ ಅಪಾಯಕಾರಿಯಾದ ಕೊರೋನಾ ಸಾಂಕ್ರಾಮಿಕ ರೋಗದ ಸೋಂಕನ್ನು ಹರಡಲು ಉದ್ದೇಶ ಪೂರಕವಾಗಿ ತಿರುಗಾಡಲು ಬಂದು ನಿರ್ಲಕ್ಷ್ಯತನದ ಕೃತ್ಯ ಎಸಗಿದ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರಾಜಕುಮಾರ, ಪಿ.ಎಸ್.ಐ (ಕಾ&ಸು), ಶಿರಸಿ ನಗರ ಪೊಲೀಸ್ ಠಾಣೆ ರವರು ದಿನಾಂಕ: 31-05-2021 ರಂದು 13-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಶಿರಸಿ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 51/2021, ಕಲಂ: 279, 337 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಶ್ರೀಪಾದ ತಂದೆ ಗಣಪತಿ ಭಟ್, ಪ್ರಾಯ-53 ವರ್ಷ, ಸಾ|| ದೇವತೆಮನೆ. ಪೋ: ಮೇಲಿನ ಓಣಿಕೇರಿ, ತಾ: ಶಿರಸಿ (ಮಾರುತಿ 800 ಕಾರ್ ನಂ: ಕೆ.ಎ-21/ಎಮ್-3533 ನೇದರ ಚಾಲಕ). ಈತನು ದಿನಾಂಕ: 31-05-2021 ರಂದು ತನ್ನ ಮಾರುತಿ 800 ಕಾರ್ ನಂ: ಕೆ.ಎ-21/ಎಮ್-3533 ನೇದನ್ನು ಹುಲೇಕಲ್ ಕಡೆಯಿಂದ ಶಿರಸಿ ಕಡೆಗೆ ಅತೀವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬರುತ್ತಾ ಶಿರಸಿ-ಹುಲೇಕಲ್ ರಸ್ತೆಯ ನಿರ್ನಳ್ಳಿ ಕ್ರಾಸ್ ಹತ್ತಿರ 11-30 ಗಂಟೆಗೆ ಕಾರಿನ ವೇಗವನ್ನು ನಿಯಂತ್ರಿಸಲಾಗದೇ ರಸ್ತೆಯ ತೀರಾ ಬಲಕ್ಕೆ ಚಲಾಯಿಸಿ, ಎದರುಗಡೆ ಶಿರಸಿ ಕಡೆಯಿಂದ ತುಂಬೆಮನೆ ಕಡೆಗೆ ಹೊರಟಿದ್ದ ಮೋಟಾರ್ ಸೈಕಲ್ ನಂ: ಕೆ.ಎ-31/ವಾಯ್-2064 ನೇದಕ್ಕೆ ಡಿಕ್ಕಿ ಹೊಡೆದು ಅಪಘಾತ ಪಡಿಸಿ ಮೋಟಾರ್ ಸೈಕಲ್ ಜಖಂಗೊಳಿಸಿದ್ದಲ್ಲದೇ, ಮೋಟಾರ್ ಸೈಕಲ್ ಸವಾರನಾದ ಪಿರ್ಯಾದಿಯ ಬಲಗಾಲಿಗೆ ಗಾಯನೋವು ಪಡಿಸಿರುತ್ತಾನೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ಪ್ರಭಾಕರ ತಂದೆ ಕನ್ನ ನಾಯ್ಕ ಪ್ರಾಯ-51 ವರ್ಷ, ವೃತ್ತಿ-ಕೃಷಿ ಕೆಲಸ, ಸಾ|| ತುಂಬೆಮನೆ, ಪೋ: ಪಂಚಲಿಂಗ ಶಿವಳ್ಳಿ, ತಾ: ಶಿರಸಿ ರವರು ದಿನಾಂಕ: 31-05-2021 ರಂದು 16-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಸಿದ್ದಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 64/2021, ಕಲಂ: 269, 270 ಐಪಿಸಿ ಹಾಗೂ ಕಲಂ: 15(ಎ), 32(3) ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ಕಮಲಾಕರ ತಂದೆ ಕೃಷ್ಣ ನಾಯ್ಕ, ಪ್ರಾಯ-33 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬೆಳ್ಳುಮನೆ, ಮಾವಿನಕೋಡ ಗ್ರಾಮ, ತಾ: ಸಿದ್ದಾಪುರ. ಈತನು ದಿನಾಂಕ: 31-05-2021 ರಂದು 09-30 ಗಂಟೆಗೆ ಸಿದ್ದಾಪುರ ತಾಲೂಕಿನ ಮಾವಿನಕೋಡ ಗ್ರಾಮ ವ್ಯಾಪ್ತಿಯ ಬೆಳ್ಳುಮನೆ ಊರಿನಲ್ಲಿರುವ ತನ್ನ ಮನೆಯ ಎದುರಿನ ಅಂಗಳದ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಕೊರೋನಾ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರು ಹೊರಡಿಸಿದ ನಿಯಮಗಳನ್ನು ಉಲ್ಲಂಘಿಸಿ, ಮುಖಕ್ಕೆ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಜನರನ್ನು ಗುಂಪು ಸೇರಿಸಿಕೊಂಡು ಯಾವುದೇ ಪರವಾನಿಗೆ ಇಲ್ಲದೆ ಅನಧೀಕೃತವಾಗಿ ಮುಕ್ತವಾಗಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾಗ ಪಿರ್ಯಾದಿಯವರು ಸಿಬ್ಬಂದಿಗಳೊಂದಿಗೆ ಸೇರಿ ದಾಳಿ ಮಾಡಿದಾಗ, 1). Original Choice Deluxe Whisky 90 ML ಅಂತಾ ಬರೆದ ಮದ್ಯ ತುಂಬಿದ 4 ಟೆಟ್ರಾ ಪ್ಯಾಕೆಟ್ ಗಳು, 2). 2 ಪ್ಲಾಸ್ಟಿಕ್ ಗ್ಲಾಸುಗಳು, 3). Original Choice Deluxe Whisky 90 ML ಅಂತಾ ಬರೆದ 3 ಮದ್ಯದ ಕಾಲಿ ಟೆಟ್ರಾ ಪ್ಯಾಕೆಟ್ ಗಳೊಂದಿಗೆ ಸಿಕ್ಕ ಬಗ್ಗೆ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಮಹಾಂತಪ್ಪ ಜಿ. ಕುಂಬಾರ, ಪಿ.ಎಸ್.ಐ, ಸಿದ್ದಾಪುರ ಪೊಲೀಸ್ ಠಾಣೆ ರವರು ದಿನಾಂಕ: 31-05-2021 ರಂದು 13-20 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಸಿದ್ದಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 65/2021, ಕಲಂ: 269, 270 ಐಪಿಸಿ ಹಾಗೂ ಕಲಂ: 15(ಎ), 32(3) ಕರ್ನಾಟಕ ಅಬಕಾರಿ ಕಾಯ್ದೆ-1965 ನೇದ್ದರ ವಿವರ...... ನಮೂದಿತ ಆರೋಪಿತ ಗಜಾನನ ತಂದೆ ಕೆರಿಯಾ ನಾಯ್ಕ, ಪ್ರಾಯ-34 ವರ್ಷ,  ವೃತ್ತಿ-ಕೃಷಿ ಕೆಲಸ, ಸಾ|| ಗಿಜಗಾರ, ಸೋವಿನಕೊಪ್ಪ ಗ್ರಾಮ, ತಾ: ಸಿದ್ದಾಪುರ. ಈತನು ದಿನಾಂಕ: 31-05-2021 ರಂದು 12-00 ಗಂಟೆಗೆ ಸಿದ್ದಾಪುರ ತಾಲೂಕಿನ ಬಿಳಗಿ-ಸೋವಿನಕೊಪ್ಪ ಮುಖ್ಯ ರಸ್ತೆಯ ಗೀಜಗಾರ ಕ್ರಾಸ್ ಹತ್ತಿರದ ಗೂಡಂಗಡಿ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಕೊರೋನಾ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರು ಹೊರಡಿಸಿದ ನಿಯಮಗಳನ್ನು ಉಲ್ಲಂಘಿಸಿ, ಮುಖಕ್ಕೆ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಜನರನ್ನು ಗುಂಪು ಸೇರಿಸಿಕೊಂಡು ಯಾವುದೇ ಪರವಾನಿಗೆ ಇಲ್ಲದೆ ಅನಧೀಕೃತವಾಗಿ ಮುಕ್ತವಾಗಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾಗ ಪಿರ್ಯಾದಿಯವರು ಸಿಬ್ಬಂದಿಗಳೊಂದಿಗೆ ಸೇರಿ ದಾಳಿ ಮಾಡಿದಾಗ, 1). Original Choice Deluxe Whisky 90 ML ಅಂತಾ ಬರೆದ ಮದ್ಯ ತುಂಬಿದ 5 ಟೆಟ್ರಾ ಪ್ಯಾಕೆಟ್ ಗಳು, 2). 3 ಪ್ಲಾಸ್ಟಿಕ್ ಗ್ಲಾಸುಗಳು, 3). Original Choice Deluxe Whisky 90 ML ಅಂತಾ ಬರೆದ 3 ಮದ್ಯದ ಕಾಲಿ ಟೆಟ್ರಾ ಪ್ಯಾಕೆಟ್ ಗಳೊಂದಿಗೆ ಸಿಕ್ಕ ಬಗ್ಗೆ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಮಹಾಂತಪ್ಪ ಜಿ. ಕುಂಬಾರ, ಪಿ.ಎಸ್.ಐ, ಸಿದ್ದಾಪುರ ಪೊಲೀಸ್ ಠಾಣೆ ರವರು ದಿನಾಂಕ: 31-05-2021 ರಂದು 13-40 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 31-05-2021

at 00:00 hrs to 24:00 hrs

 

ಶಿರಸಿ ಗ್ರಾಮೀಣ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 14/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನು ಸುಮಾರು 50 ವರ್ಷ ಪ್ರಾಯದ ಚಂದ್ರಶೇಖರ್ ಎಂಬ ಹೆಸರಿನ ಅನಾಮಧೇಯ ಗಂಡಸ್ಸಾಗಿದ್ದು, ಈತನು ದಿನಾಂಕ: 28-05-2021 ರಂದು ಬೆಳಿಗ್ಗೆ ಪಿರ್ಯಾದಿಯ ಗೋ ಶಾಲೆಯಲ್ಲಿ ಸೇವೆಯನ್ನು ಮಾಡಲು ಬಂದು ಪಿರ್ಯಾದಿಯ ಮನೆಯಲ್ಲಿ ಉಳಿದುಕೊಂಡಿದ್ದವನು, ದಿನಾಂಕ: 31-05-2021 ರಂದು ಬೆಳಗಿನ ಜಾವ 02-40 ಗಂಟೆಯಿಂದ 03-00 ಗಂಟೆಯ ನಡುವಿನ ಅವಧಿಯಲ್ಲಿ ವಯೋಸಹಜ ಖಾಯಿಲೆಯಿಂದಲೋ ಅಥವಾ ಇನ್ಯಾವುದೋ ಖಾಯಿಲೆಯಿಂದ ಮಲಗಿದ್ದಲ್ಲಿಯೇ ಮೃತಪಟ್ಟಿದ್ದು ಇರುತ್ತದೆ. ಇದರ ಮೃತನ ಮರಣದಲ್ಲಿ ನಮಗೆ ಬೇರೇ ಯಾವುದೇ ಸಂಶಯ ಇರುವುದಿಲ್ಲ. ಮೃತನ ಸರಿಯಾದ ಹೆಸರು ವಿಳಾಸ ತಿಳಿದು ಬರದ ಕಾರಣ ಮತ್ತು ಮೃತನ ಸಾವಿನ ನಿಖರ ಕಾರಣ ತಿಳಿಯಲು ಹಾಗೂ ಮೃತನ ವಾರಸುದಾರರನ್ನು ಪತ್ತೆ ಮಾಡಿ ಮುಂದಿನ ಕಾನೂನು ಕ್ರಮ ಜರುಗಿಸಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ನರಸಿಂಹ ಗಣಪತಿ ಭಟ್, ಪ್ರಾಯ-47 ವರ್ಷ, ವೃತ್ತಿ-ಕೃಷಿ ಮತ್ತು ಗೋ ಸೇವೆ, ಸಾ|| ಬೆಣ್ಣೆಗದ್ದೆ, ನಕ್ಷೆ ಗ್ರಾಮ, ತಾ: ಶಿರಸಿ ರವರು ದಿನಾಂಕ: 31-05-2021 ರಂದು 10-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಹಳಿಯಾಳ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 13/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ಶ್ರೀ ಸಚಿನ್ ತಂದೆ ನಾಗೇಂದ್ರ ಗೌಡ, ಪ್ರಾಯ-24 ವರ್ಷ, ವೃತ್ತಿ-ದಾಂಡೇಲಿಯ ಕೆ.ಡಿ.ಸಿ.ಸಿ ಬ್ಯಾಂಕಿನಲ್ಲಿ ಕೆಲಸ, ಸಾ|| ಬಿ.ಕೆ ಹಳ್ಳಿ ಗ್ರಾಮ, ತಾ: ಹಳಿಯಾಳ. ಈತನು ದಿನಾಂಕ: 30-05-2021 ರಂದು 19-00 ಗಂಟೆಯ ಸುಮಾರಿಗೆ ಹಳಿಯಾಳ ತಾಲೂಕಿನ ಬಿ.ಕೆ ಹಳ್ಳಿ ಗ್ರಾಮದಲ್ಲಿರುವ ತಮ್ಮ ಹೊಲಕ್ಕೆ ತನ್ನ ದೊಡ್ಡಪ್ಪನ ಮಕ್ಕಳಾದ ಸುಭಾಷ ತಂದೆ ತುಕಾರಮ ಗೌಡ ಹಾಗೂ ಸಂಜು ತಂದೆ ನಾರಾಯಣ ಗೌಡ ಇವರೊಂದಿಗೆ ತಮ್ಮ ಹೊಲದಲ್ಲಿಯ ಕಲ್ಲಿನ ಕ್ವಾರಿಯಲ್ಲಿ ಮೀನು ಹಿಡಿಯಲು ಹೋಗಿ ಆಕಸ್ಮಾತ್ ಆಗಿ ಕಾಲು ಜಾರಿ ಕಲ್ಲಿನ ಕ್ವಾರಿಯ ನೀರಿನಲ್ಲಿ ಬಿದ್ದವನು, ದಿನಾಂಕ: 31-05-2021 ರಂದು ಬೆಳಿಗ್ಗೆ 07-15 ಗಂಟೆಗೆ ಕಲ್ಲಿನ ಕ್ವಾರಿಯ ನೀರಿನಲ್ಲಿ ಅವನ ಮೃತದೇಹ ದೊರೆತ ಬಗ್ಗೆ ಹಾಗೂ ಇದರ ಹೊರತು ಅವನ ಮರಣದಲ್ಲಿ ಬೇರೆ ಏನು ಸಂಶಯ ಇರುವುದಿಲ್ಲ ಎಂಬ ಬಗ್ಗೆ ಪಿರ್ಯಾದಿ ಶ್ರೀ ಕಿರಣ ತಂದೆ ನಾಗೇಂದ್ರ ಗೌಡ, ಪ್ರಾಯ-26 ವರ್ಷ, ವೃತ್ತಿ-ವ್ಯಾಪಾರ, ಸಾ|| ಬಿ.ಕೆ ಹಳ್ಳಿ, ತಾ: ಹಳಿಯಾಳ ರವರು ದಿನಾಂಕ: 31-05-2021 ರಂದು 07-50 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

ಇತ್ತೀಚಿನ ನವೀಕರಣ​ : 01-06-2021 04:56 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080